HOME » NEWS » Coronavirus-latest-news » SIDDARAMAIAH SLAMS ON KARNATAKA GOVERNMENT AND CENTER FOR INCREASING CORONAVIRUS CASES DAY BY DAY MAK

ಕೊರೋನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಕೋವಿಡ್‌ ಪರೀಕ್ಷೆ ನಡೆಸಬೇಕೆಂದು ಗೊತ್ತಿಲ್ಲವೇ?; ಸಿದ್ದರಾಮಯ್ಯ

ಕೊರೋನಾ ಸೋಂಕು ಪರೀಕ್ಷೆ ಹೆಚ್ಚು ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಆಗ‌ ಅದೇ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ಪರೀಕ್ಷೆಯನ್ನು ಹೆಚ್ಚು ನಡೆಸುತ್ತಿಲ್ಲ. ಜನರ ಸಾವಿಗೆ ಕಾರಣವಾದ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದು ಕರೆದರೆ ತಪ್ಪಾದೀತೇ? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

news18-kannada
Updated:July 6, 2020, 8:15 PM IST
ಕೊರೋನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಕೋವಿಡ್‌ ಪರೀಕ್ಷೆ ನಡೆಸಬೇಕೆಂದು ಗೊತ್ತಿಲ್ಲವೇ?; ಸಿದ್ದರಾಮಯ್ಯ
ಸಿದ್ದರಾಮಯ್ಯ
  • Share this:
ಬೆಂಗಳೂರು (ಜುಲೈ 06); ಕೊರೋನಾ ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಎಂದರೆ ಸೋಂಕು ಪರೀಕ್ಷೆ ಎನ್ನುವುದನ್ನು ವಿಶ್ವದಾದ್ಯಂತ ವೈದ್ಯರು-ತಜ್ಞರು ಹೇಳುತ್ತಲೇ ಇದ್ದಾರೆ. ಆದರೆ, ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆಯನ್ನು ಸರಿಯಾಗಿ ನಡೆಸಬೇಕೆಂದು ಮಾತ್ರ ಗೊತ್ತಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಲೇ ಇದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ದೇಶದಲ್ಲಿರುವ ಎಲ್ಲರನ್ನೂ ಕೋವಿಡ್‌ ಪರೀಕ್ಷೆಗೆ ಒಳಪಡಿಸುವುದು ಮಾತ್ರ ಈ ಮಾರಣಾಂತಿಕ ಸೋಂಕು ನಿಯಂತ್ರಣಕ್ಕಿರುವ ಏಕೈಕ ಮಾರ್ಗ ಎಂದು ವಿಶ್ವದಾದ್ಯಂತ ತಜ್ಞರು ಹೇಳುತ್ತಲೇ ಇದ್ದಾರೆ.

ಆದರೂ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾತ್ರ ಸಮಾಜದಲ್ಲಿರುವ ಎಲ್ಲರನ್ನೂ ಸೋಂಕು ಪರೀಕ್ಷೆಗೆ ಒಳಪಡಿಸಲು ಈವರೆಗೆ ಮುಂದಾಗಿಲ್ಲ. ಹೀಗಾಗಿ ಈ ಕುರಿತು ಟ್ವೀಟ್‌ ಮೂಲಕ ಕಿಡಿಕಾರಿರುವ ಸಿದ್ದರಾಮಯ್ಯ,"ಕೊರೋನಾ ಸೋಂಕು ಪರೀಕ್ಷೆ ಹೆಚ್ಚು ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ.
ಆಗ‌ ಅದೇ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ಪರೀಕ್ಷೆಯನ್ನು ಹೆಚ್ಚು ನಡೆಸುತ್ತಿಲ್ಲ.
ಜನರ ಸಾವಿಗೆ ಕಾರಣವಾದ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದು ಕರೆದರೆ ತಪ್ಪಾದೀತೇ?" ಎಂದು ಕಿಡಿಕಾರಿದ್ದಾರೆ."ಕೊರೋನಾ ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಎಂದರೆ ಸೋಂಕು ಪರೀಕ್ಷೆ ಎನ್ನುವುದನ್ನು ವಿಶ್ವದಾದ್ಯಂತ ವೈದ್ಯರು-ತಜ್ಞರು ಹೇಳುತ್ತಲೇ ಇದ್ದಾರೆ. ಆದರೆ, ಕೊರೋನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆಯನ್ನು ಸರಿಯಾಗಿ ನಡೆಸಬೇಕೆಂದು ಮಾತ್ರ ಗೊತ್ತಾಗಿಲ್ಲ."ರಾಜ್ಯದಲ್ಲಿ #covid ಪರೀಕ್ಷಾ ಕೇಂದ್ರಗಳಿರುವುದು ಕೇವಲ 59. ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ 31,116. ಈಗ ಪ್ರತಿದಿನ ನಡೆಯುತ್ತಿರುವುದು ಕೇವಲ 13, 910 ಪರೀಕ್ಷೆ ಮಾತ್ರ. ಅಂದರೆ‌ ಒಟ್ಟು ಸಾಮರ್ಥ್ಯದ ಶೇಕಡಾ 44.7 ರಷ್ಟು ಮಾತ್ರ ಬಳಕೆ. ರಾಜ್ಯ ಸರ್ಕಾರದ ಅಯೋಗ್ಯತೆಗೆ ಬೇರೆ ಸಾಕ್ಷಿ ಬೇಕೇ?" " ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ : CoronaVirus: 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಶೇ.261 ರಷ್ಟು ಸೋಂಕು ಏರಿಕೆ: ಪೋಷಕರಲ್ಲಿ ಮೂಡಿದ ಆತಂಕ
Youtube Video

ಇದೇ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧವೂ ಕಿಡಿಕಾರಿರುವ ಸಿದ್ದರಾಮಯ್ಯ, "ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಎಂದು ದಿನಕ್ಕೆರಡು ಬಾರಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವರು ಅಬ್ಬರಿಸುತ್ತಿದ್ದಾರೆ. ಸ್ಯಾಂಪಲ್‌ಗಾಗಿ ಒಂದೆರಡು ಆಸ್ಪತ್ರೆಗಳ ವಿರುದ್ಧ 'ಕಠಿಣ ಕ್ರಮ' ಕೈಗೊಳ್ಳಬಾರದೇಕೆ? ಸರ್ಕಾರ ಯಾರಿಗೆ ಮತ್ತು ಯಾಕೆ ಹೆದರುತ್ತಿದೆ?" ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
Published by: MAshok Kumar
First published: July 6, 2020, 8:15 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories