ಕೊರೋನಾ 2ನೇ ಅಲೆ; ಸಿಎಂ ಬಿಎಸ್​ವೈಗೆ ಪತ್ರ ಬರೆಯುವ ಮೂಲಕ ಬಿಜೆಪಿ ಸರ್ಕಾರ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ರಾಜ್ಯದಲ್ಲಿ ಕೊರೋನಾ ಸಂಬಂಧಿತ ಸಾವುಗಳು ಕಡಿಮೆಯಾಗಿಲ್ಲ. ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟು ಸುಳ್ಳು ಲೆಕ್ಕ ತೋರಿಸಿ ಜನರನ್ನು ಯಾಮಾರಿಸುತ್ತಿದೆ. ಸಾವುಗಳನ್ನು ಬಚ್ಚಿಟ್ಟು ಸುಳ್ಳು ಹೇಳುವುದು ಸರ್ಕಾರದ ಅಮಾನವೀಯ ನಿಲುವು ಮತ್ತು ನಂಬಿಕೆ ದ್ರೋಹವಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಅಂಕಿ-ಸಂಖ್ಯೆಗಳನ್ನು ನೀಡುವ ಮೂಲಕ ಸಿದ್ದರಾಮಯ್ಯ ಅವರು ಚಾಟಿ ಬೀಸಿದ್ದಾರೆ.

ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ.

ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ.

 • Share this:
  ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹಿನ್ನಲೆಯಲ್ಲಿ ಸಿಎಂ ಬಿಎಸ್  ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.  ಕೋವಿಡ್‍ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚು ಭೀತಿಗೆ ಒಳಪಡಿಸದೇ, ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದಂತೆ ಒತ್ತಾಯ ಮಾಡಿದ್ದಾರೆ.

  ಕೋವಿಡ್ ಸಂಬಂಧವಾಗಿ ಲಾಕ್ಡೌನ್ ಹೇರಿಕೆ ಮಾಡಿ ಒಂದು ವರ್ಷವಾಯಿತು. ಕಳೆದ ಒಂದು ವರ್ಷದಿಂದ ದೇಶದ ಜನರು ಪಡಬಾರದ ಪಾಡುಪಟ್ಟರು. ಲಾಕ್​ಡೌನ್ ಕಾರಣಕ್ಕಾಗಿ ಶೇ. 23.7ರಷ್ಟು ದೇಶದ ಆರ್ಥಿಕತೆ ಕುಸಿಯಿತು. ಸುಮಾರು 12 ಕೋಟಿಗೂ ಹೆಚ್ಚು ಜನ ಉದ್ಯೋಗ ಕಳೆದುಕೊಂಡರು. 10 ಕೋಟಿ ಜನ ಬಡತನದ ರೇಖೆಗಿಂತ ಕೆಳಗೆ ಕುಸಿದರು. 3 ಕೋಟಿ ಮಧ್ಯಮ ವರ್ಗದವರು ತಮ್ಮ ಆರ್ಥಿಕ ಚೈತನ್ಯವನ್ನು ದುಡಿಯುವ ಅವಕಾಶಗಳನ್ನು ಕಳೆದುಕೊಂಡು ಬಿಪಿಎಲ್ ಕುಟುಂಬಗಳಾದವು. ಕೋಟ್ಯಂತರ ದುಡಿಯುವ ವರ್ಗದ ಮಂದಿ ಕಾಲ್ನಡಿಗೆಯ ಮೂಲಕವೇ ತಮ್ಮ ಊರುಗಳನ್ನು ತಲುಪುವ ಪ್ರಯತ್ನ ಮಾಡಿದರು. ಈ ಅವಧಿಯಲ್ಲಿ ನೂರಾರು ಜನ ಪ್ರಾಣ ಬಿಟ್ಟರು. ಆದರೆ, ಪ್ರಧಾನಿಯವರು ಚಪ್ಪಾಳೆ ಬಡಿದು, ಜಾಗಟೆ, ತುತ್ತೂರಿಗಳನ್ನು ಊದಿದರೂ ಕೊರೋನಾ ಹೆಚ್ಚಾಗುತ್ತಲೇ ಹೋಯಿತು ಎಂದು ಪತ್ರದಲ್ಲಿ ಪ್ರಧಾನಿ ಮೋದಿ ಅವರ ಕ್ರಮಗಳನ್ನು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

  ಸಿದ್ದರಾಮಯ್ಯ ಬರೆದ ಪತ್ರ.


  ಇದನ್ನು ಓದಿ: ಬೈಕ್ ಸವಾರನನ್ನು ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ, ನೀನು ಯಾವ್ ಸೀಮೆ ಕಮಿಷನರಯ್ಯ?: ಎಚ್. ವಿಶ್ವನಾಥ್ ವಾಗ್ದಾಳಿ

  ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೋನಾ ಸಾವುಗಳ ಪ್ರಮಾಣ ಶೇ. 1.4ರಷ್ಟಿದೆ. ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ಸಾವುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿವೆ. ಕೊರೋನಾ ಸಾವುಗಳಲ್ಲಿ ರಾಜ್ಯವು ದೇಶದಲ್ಲಿ 19ನೇ ಸ್ಥಾನದಲ್ಲಿದೆ ಎಂದು ಹೇಳುತ್ತಿದೆ. ಆದರೆ, ಡಿಸೆಂಬರ್ ಅಂತ್ಯದವರೆಗಿನ ಮಾಹಿತಿಯನ್ನು ನೋಡಿದರೆ ರಾಜ್ಯದಲ್ಲಿ ಸಾವಿನ ಪ್ರಮಾಣ ಸುಮಾರು ಶೇ.2.6ರಷ್ಟಿದೆ. ಇದರಿಂದಾಗಿ ದೇಶದಲ್ಲಿ ಕೋವಿಡ್ ಕಾರಣದಿಂದಾಗಿ ಅತಿ ಹೆಚ್ಚು ಮರಣ ಹೊಂದಿದ ರಾಜ್ಯಗಳಲ್ಲಿ ಕರ್ನಾಟಕವು ಪಂಜಾಬ್ ನಂತರದ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕೊರೋನಾ ಸಂಬಂಧಿತ ಸಾವುಗಳು ಕಡಿಮೆಯಾಗಿಲ್ಲ. ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟು ಸುಳ್ಳು ಲೆಕ್ಕ ತೋರಿಸಿ ಜನರನ್ನು ಯಾಮಾರಿಸುತ್ತಿದೆ. ಸಾವುಗಳನ್ನು ಬಚ್ಚಿಟ್ಟು ಸುಳ್ಳು ಹೇಳುವುದು ಸರ್ಕಾರದ ಅಮಾನವೀಯ ನಿಲುವು ಮತ್ತು ನಂಬಿಕೆ ದ್ರೋಹವಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಅಂಕಿ-ಸಂಖ್ಯೆಗಳನ್ನು ನೀಡುವ ಮೂಲಕ ಸಿದ್ದರಾಮಯ್ಯ ಅವರು ಚಾಟಿ ಬೀಸಿದ್ದಾರೆ.

  ರಾಜ್ಯದಲ್ಲಿ ಎಡರನೇ ಅಲೆ ಹೆಚ್ಚುತ್ತಿರುವ ಕಾರಣ ಕಡ್ಡಾಯವಾಗಿ ಮಾಸ್ಕ್ ಧರಿಸುವ, ಸ್ಯಾನಿಟೈಸರ್ ಬಳಸುವ ಹಾಗೂ ಸಣ್ಣ ರೋಗ ಲಕ್ಷಣಗಳು ಕಂಡು ಬಂದರೂ ಜನರೊಂದಿಗೆ ಬೆರೆಯದೆ ಪ್ರತ್ಯೇಕವಾಗಿ ಉಳಿಯುವ,  ಪರೀಕ್ಷೆ ಮಾಡಿಸಿಕೊಳ್ಳುವ ಮುಂಜಾಗರೂಕ ಕ್ರಮಗಳನ್ನು ಕೈಗೊಳ್ಳಲು ಉತ್ತೇಜಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಸಲಹೆ ನೀಡಿದ್ದಾರೆ. ಅಲ್ಲದೇ ಸರ್ಕಾರ ಹೆಚ್ಚು ಪರೀಕ್ಷೆಗಳನ್ನು ಮಾಡುವ ಮೂಲಕ ಲಸಿಕೆಗಳನ್ನು ನೀಡಿ ವಯಸ್ಸಾದ ಹಿರಿಯರನ್ನು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರ ಆರೋಗ್ಯವನ್ನು ವಿಶೇಷವಾಗಿ ಪರಿಗಣಿಸಿ ಎಚ್ಚರಿಕೆಯನ್ನು ವಹಿಸಬೇಕು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
  Published by:HR Ramesh
  First published: