HOME » NEWS » Coronavirus-latest-news » SIDDARAMAIH OPEN LETTER TO BS YEDIYURAPPA DEMANDING TO FULFILL THE DEMANDS OF ASHA WORKERS GNR

Asha workers: ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರ ಒಂದು ಬಾರಿ ವಿಶೇಷ ಪ್ಯಾಕೇಜ್ ಎಂದು ರಾಜ್ಯದ ಸಹಕಾರ ಇಲಾಖೆಯಿಂದ 3,000 ರೂ. ಗಳನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಇದರಲ್ಲಿ ಶೇ.50ರಷ್ಟು ಆಶಾ ಕಾರ್ಯಕರ್ತರಿಗೆ ತಲುಪಿಲ್ಲ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

news18-kannada
Updated:July 18, 2020, 2:53 PM IST
Asha workers: ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ
ಸಿದ್ದರಾಮಯ್ಯ, ಬಿ.ಎಸ್​. ಯಡಿಯೂರಪ್ಪ.
  • Share this:
ಬೆಂಗಳೂರು(ಜು.18): ರಾಜ್ಯದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.


ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಕೊರೋನಾ ವೈರಸ್​ವಿರುದ್ಧ ಹೋರಾಟ ನಡೆಸಿದರು. ಆದರೀಗ, ಅನಿವಾರ್ಯವಾಗಿ ಇವರು  ಆರೋಗ್ಯ ಸೇವೆ ಸ್ಥಗಿತಗೊಳಿಸಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಇದರಲ್ಲಿ ಅನೇಕರು ಕೋವಿಡ್ ಸೋಂಕು ತಗುಲಿದವರಿದ್ದಾರೆ. ಇವರ ರಕ್ಷಣೆಗೆ ಸರ್ಕಾರ ಬರಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಹಿಂದೆ ಆಶಾ ಕಾರ್ಯಕರ್ತೆರನ್ನು ಸರ್ಕಾರ ಕೊರೋನಾ ವಾರಿಯರ್ಸ್ ಎಂದು ಕರೆಯಿತು. ಪ್ರಧಾನಿ ಮೋದಿ ಅವರಿಗಾಗಿ ಚಪ್ಪಾಳೆ ತಟ್ಟಿ ಹೂಮಳೆಗರೆದು ಸ್ವಾಗತಿಸಿದರು. ಇದಕ್ಕೆ ಜನರು ಸಹ ಸಹಮತ ವ್ಯಕ್ತಪಡಿಸಿದರು. ಇಂತವರಿಗೆ ಸರ್ಕಾರ ನೀಡುತ್ತಿರುವ ಮಾಸಿಕ ವೇತನ ಕೇವಲ ರೂ. 4,000 ರಿಂದ 6,000 ರೂಗಳು ಮಾತ್ರ. ಸರ್ಕಾರ ರೂ. 8,000 ರಿಂದ 9,000 ರೂ. ಗಳನ್ನು ನೀಡುವುದಾಗಿ ಬಜೆಟ್ ಘೋಷಿಸಿತ್ತು. ಆದರೆ ಇದುವರೆಗೂ 1 ರೂಪಾಯಿ ಕೂಡ ಹೆಚ್ಚಿಸಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರ ಒಂದು ಬಾರಿ ವಿಶೇಷ ಪ್ಯಾಕೇಜ್ ಎಂದು ರಾಜ್ಯದ ಸಹಕಾರ ಇಲಾಖೆಯಿಂದ 3,000 ರೂ. ಗಳನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಇದರಲ್ಲಿ ಶೇ.50ರಷ್ಟು ಆಶಾ ಕಾರ್ಯಕರ್ತರಿಗೆ ತಲುಪಿಲ್ಲ ಎಂದು ವಿವರಿಸಿದ್ದಾರೆ.

ಇನ್ನು, ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಸರಳವಾಗಿವೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.12000 ಗೌರವಧನ ಖಾತರಿಪಡಿಸಬೇಕು. ಕೋವಿಡ್ ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು. ಕೋವಿಡ್ -19 ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತರ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸಬೇಕು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಅತ್ಯಂತ ಸಣ್ಣ ಮಟ್ಟದ್ದಾಗಿದೆ ಎಂದಿದ್ದಾರೆ.

ಸರ್ಕಾರ ಸರಳವಾದ ಈ 2 ಬೇಡಿಕೆಗಳನ್ನು ಮಾನವೀಯವಾಗಿ ಪರಿಗಣಿಸಿ ಈಡೇರಿಸಬೇಕು. ಜನ ಸಂಕಷ್ಟದಲ್ಲಿರುವಾಗ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಸರ್ಕಾರವನ್ನು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: BBMP Commissioner: ಬಿಬಿಎಂಪಿ ಕಮಿಷನರ್​ ಅನಿಲ್​ ಕುಮಾರ್​ ವರ್ಗಾವಣೆ; ಮಂಜುನಾಥ್ ಪ್ರಸಾದ್ ನೂತನ ಆಯುಕ್ತ

ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ ಹಲವು ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ ಕೂಡ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್​ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಇದೀಗ ರಾಜ್ಯಾದ್ಯಂತ ಮತ್ತೆ ಪ್ರತಿಭಟನೆ ನಡೆಸುತ್ತಿದ್ದು, 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
Published by: Ganesh Nachikethu
First published: July 18, 2020, 2:52 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories