ನಿನ್ನೆ ದೆಹಲಿ ಮತ್ತು ತೆಲಂಗಾಣ ಮೂಲದ ಇಬ್ಬರು ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ, ಇಂದು ಆಗ್ರಾದ 6 ಮಂದಿಯಲ್ಲಿ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.
ಅವರಲ್ಲಿ ಓರ್ವ ದೆಹಲಿಯಲ್ಲಿ ಕೊರೊನಾ ತಗುಲಿದ್ದ ವ್ಯಕ್ತಿಯನ್ನು ಸಂಪರ್ಕಿಸಿ ಬಂದಿದ್ದ ಎನ್ನಲಾಗಿದೆ. ಸದ್ಯ ಕೊರೊನಾ ಶಂಕಿತರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಖಚಿತತೆಗಾಗಿ ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಆರು ಕೊರೊನಾ ಶಂಕಿತ ವ್ಯಕ್ತಿಗಳನ್ನು ಸಂಪರ್ಕಿಸಿದ್ದವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ.
ಇನ್ನು, ತೆಲಂಗಾಣದಲ್ಲಿ ಈವರೆಗೆ 145 ಕೊರೊನಾ ಶಂಕಿತ ಪ್ರಕರಣಗಳು ಕಾಣಿಸಿಕೊಂಡಿವೆ. ಕೊರೊನಾ ದೃಢಪಟ್ಟಿರುವ ಓರ್ವ ವ್ಯಕ್ತಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ನಿನ್ನೆ ದೆಹಲಿ ಮತ್ತು ತೆಲಂಗಾಣ ವ್ಯಕ್ತಿಗಳಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಸದ್ಯ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೆಹಲಿ ಮೂಲದ ವ್ಯಕ್ತಿ ಇಟಲಿಯಿಂದ ಪ್ರಯಾಣ ಬೆಳೆಸಿದ್ದರು. ತೆಲಂಗಾಣದ ವ್ಯಕ್ತಿ ದುಬೈನಿಂದ ಪ್ರಯಾಣ ಮಾಡಿದ್ದರು. ಇಬ್ಬರು ರೋಗಿಗಳ ಸ್ಥಿತಿ ಸ್ಥಿರವಾಗಿದ್ದು,ಸೂಕ್ತ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ