ನವದೆಹಲಿ (ಮೇ. 7): ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆಗೆ ಜನರು ತತ್ತರಿಸಿದ್ದಾರೆ. ಎಲ್ಲೆಡೆ ಬೆಡ್, ಆಕ್ಸಿಜನ್ ಸಮಸ್ಯೆ ಉಂಟಾಗಿದೆ. ಕೋವಿಡ್ ನಿಯಂತ್ರಣ ಮಾಡುವಲ್ಲಿ, ವೈದ್ಯಕೀಯ ಸೇವೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ದೇಶದಲ್ಲಿ ಕೋವಿಡ್ 19 ಪರಿಸ್ಥಿತಿ ಅವಲೋಕನ ಸಂಬಂಧ ಕೂಡಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್ನ ಸಂಸದೀಯ ಪಕ್ಷ (ಸಿಪಿಪಿ) ಸಭೆಯಲ್ಲಿ ಮಾತನಾಡಿದ ಅವರು, ಸೋಂಕನ್ನು ಎದುರಿಸುವ ಸಂಬಂಧ ಕೈಗೊಳ್ಳಬಹುದಾದ ಸಾಮೂಹಿಕ ಕ್ರಮದ ಕುರಿತು ತಿಳಿದುಕೊಳ್ಳಲು ಅವರು ಸಂದೀಯ ಸಮಿತಿ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.
ದೇಶದ ಕೋವಿಡ್ ಪರಿಸ್ಥಿತಿ ಕುರಿತು ಅವರು ತುರ್ತಾಗಿ ಸರ್ವಪಕ್ಷ ಸಭೆ ಕರೆಯಬೇಕು. ದೇಶದಲ್ಲಿ ಒಂದೇ ದಿನದಲ್ಲಿ 4. 14 ಸಾವಿರ ಕೋವಿಡ್ ಪ್ರಕಣ ದಾಖಲಾಗುತ್ತಿದ್ದು, 3.900ಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸೋಂಕು ಎದುರಿಸಲು ಸಾಮೂಹಿಕ ಕ್ರಮ ಮತ್ತು ಹೊಣೆಗಾರಿಕೆಯನ್ನು ಖಚಿತಡಿಸಬೇಕು. ಇದಕ್ಕಾಗಿ ಸ್ಥಾಯಿ ಸಮಿತಿ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.
I say this categorically - India is crippled by a political leadership today that has no empathy for the people. The Modi govt has failed the people of our country.
- Congress President Smt. Sonia Gandhi at Congress Parliamentary Party Meeting#COVID19India pic.twitter.com/qY6GBmOomx
— Congress (@INCIndia) May 7, 2021
ಆಕ್ಸಿಜನ್, ಔಷಧ ಪೂರೈಕೆಯ ಸರಪಳಿಯನ್ನು ಬಲಪಡಿಸಲು ಮೋದಿ ಸರ್ಕಾರ ನಿರಾಕರಿಸುತ್ತಿದೆ. ಜನರ ಅಗತ್ಯವಾದಷ್ಟು ಲಸಿಕೆಗಳನ್ನು ಪೂರೈಸಲು ಆದೇಶಿಸಲು ಕೇಂದ್ರ ಸೋತಿದೆ. ಮೋದಿ ಸರ್ಕಾರ ಮೂಲಭೂತ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಿದೆ, ನ್ಯಾಷನಲ್ ಟಾಸ್ಕ್ ಫೋರ್ಸ್, ಇಜಿಒಎಂ ಮತ್ತು ಸಂಸದೀಯ ಸಮಿತಿ ನೀಡುತ್ತಿರುವ ಎಚ್ಚರಿಕೆಗಳನ್ನು ನಿರ್ಲಕ್ಷಿಸುತ್ತಿದೆ. ಜನರ ಯೋಗಕ್ಷೇಮ ಅಭಿವೃದ್ಧಿ ಹೊರತುಪಡಿಸಿದ ಅಗತ್ಯವಿಲ್ಲದ ಯೋಜನೆಗಳಿಗೆ ಮೋದಿ ಸರ್ಕಾರ ಸಾವಿರಾರು ಕೋಟಿ ಮೀಸಲಿಟ್ಟಿದೆ ಎಂದು ಟೀಕಿಸಿದರು.
ಇದನ್ನು ಓದಿ: ಯಾವುದೇ ಸಮುದಾಯಕ್ಕೆ ನೋವು ಮಾಡುವುದು ಉದ್ದೇಶವಾಗಿರಲಿಲ್ಲ; ಕೋವಿಡ್ ವಾರ್ ರೂಂ ಸಿಬ್ಬಂದಿ ಕ್ಷಮೆಯಾಚಿಸಿದ ತೇಜಸ್ವಿ ಸೂರ್ಯ
ಮೋದಿಯವರ ಲಸಿಕೆ ಕಾರ್ಯಕ್ರಮ ಅಸಮಾನತೆಯಿಂದ ಕೂಡಿದೆ. ಲಸಿಕೆ ಹಂಚಿಕೆಯಲ್ಲಿ ಲಕ್ಷಾಂತರ ಜನ ದಲಿತರು, ಆದಿವಾಸಿಗಳು ಸೇರಿದಂತೆ ಇತರೆ ಹಿಂದುಳಿದ ವರ್ಗಗಳು ಮತ್ತು ಬಡವರು ಹೊರಗುಳಿದಿದ್ದಾರೆ ಎಂದು ಆರೋಪಿಸಿದರು
ದೇಶದಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ -19 ಸಂಬಂಧಿತ ಪರಿಸ್ಥಿತಿಯ ಬಗ್ಗೆ ಗುರುವಾರ ಸಮಗ್ರ ಪರಾಮರ್ಶೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೊರೋನಾ ನಿಯಂತ್ರಣ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಕೋವಿಡ್ ಸ್ಫೋಟದ ಬಗ್ಗೆ ವಿವರ ಪಡೆದುಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಂದು ಲಕ್ಷಕ್ಕಿಂತ ಹೆಚ್ಚಿನ ಸಕ್ರಿಯ ಪ್ರಕರಣಗಳಿರುವ 12 ರಾಜ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ