ನವದೆಹಲಿ: ದೇಶಾದ್ಯಂತ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ್ ಯೋಜನೆಯಡಿ ಬ್ಲ್ಯಾಕ್ ಫಂಗಸ್ಗೂ ಚಿಕಿತ್ಸೆ ಪಡೆಯುವಂತೆ ಮಾಡಿ ಎಂದು ಪತ್ರದ ಪ್ರಮುಖವಾಗಿ ಮನವಿ ಮಾಡಿಕೊಳ್ಳಲಾಗಿದೆ. ಅಗತ್ಯವಿರುವ ಔಷಧಿಗಳನ್ನು ರಾಜ್ಯ ಸರ್ಕಾರಗಳಿಗೆ ಶೀಘ್ರದಲ್ಲೇ ಪೂರೈಕೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಬ್ಲ್ಯಾಕ್ ಫಂಗಸ್ ಕಾಯಿಲೆಯನ್ನು ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆಯಡಿ ಸೇರಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಹೀಗಾಗಿ ಅಗತ್ಯವಿರುವ ವೈದ್ಯಕೀಯ ನೆರವನ್ನೂ ಕೇಂದ್ರ ಸರ್ಕಾರ ನೀಡಬೇಕು. ಕಪ್ಪು ಶಿಲೀಂದ್ರಿ ಕಾಯಿಲೆಗೆ ಬೇಕಾಗಿರುವ ಔಷಧಗಳ ಉತ್ಪಾದನೆ ಹಾಗೂ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ನಿಗಾ ವಹಿಸಬೇಕು. ಬ್ಲ್ಯಾಕ್ ಫಂಗಸ್ ಔಷಧ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಪ್ಪಿಸಬೇಕು. ಇನ್ನು ಆಯುಷ್ಮಾನ್ ಭಾರತ್ ಯೋಜನೆ ವ್ಯಾಪ್ತಿಗೆ ಬ್ಲ್ಯಾಕ್ ಫಂಗಸ್ ಕಾಯಿಲೆಯನ್ನು ಸೇರಿಸಬೇಕು. ಆರೋಗ್ಯ ವಿಮಾ ಯೋಜನೆಯಡಿಯಲ್ಲೂ ರೋಗಿಗಳು ಪ್ರಯೋಜನೆ ಪಡೆಯುವಂತೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಇನ್ನು ನಿನ್ನೆ ವೈದ್ಯರು , ಫ್ರೆಂಟ್ಲೈನ್ ವಾರಿಯರ್ಸ್ ಜೊತೆಗಿನ ಸಂವಾದದಲ್ಲೂ ಪ್ರಧಾನಿ ಮೋದಿ ಬ್ಲ್ಯಾಕ್ ಫಂಗಸ್ ಕುರಿತು ಮಾತನಾಡಿದರು. ಹೊಸ ಸವಾಲಾದ ಬ್ಲ್ಯಾಕ್ ಫಂಗಸ್ ವಿರುದ್ಧ ಹೋರಾಡಲು ತಯಾರಿ ಮಾಡಿಕೊಳ್ಳಬೇಕಿದೆ ಎಂದರು. ಇನ್ನು ದೇಶಾದ್ಯಂತ ಇಲ್ಲಿಯವರೆಗೆ 7,250 ಬ್ಲ್ಯಾಕ್ ಫಂಗಸ್ ಪ್ರರಕಣಗಳು ಪತ್ತೆಯಾಗಿವೆ. 200ಕ್ಕೂ ಹೆಚ್ಚು ಮಂದಿ ಕಪ್ಪು ಶಿಲೀಂದ್ರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲೂ ದಿನೇ ದಿನೇ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿವೆ.
ಯಾರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳಬಹುದು?
ಬ್ಲ್ಯಾಕ್ ಫಂಗಸ್ ಬಂದಿದೆಯಾ ಎಂದು ಪರೀಕ್ಷಿಸುವುದು ಹೇಗೆ?
ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಾಗ ಏನು ಮಾಡಬೇಕು?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ