ಪಕ್ಷಾಂತರ ನಿಷೇಧ ಕಾಯ್ದೆ ಮರು ಪರಿಶೀಲನೆ: ಇಂದು ಸರ್ವಪಕ್ಷಗಳ ನಾಯಕರೊಂದಿಗೆ ಸ್ಪೀಕರ್‌ ಕಾಗೇರಿ ಚರ್ಚೆ

ಹಾಗೆಯೇ ಜೆಡಿಎಸ್​​ನಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಎಂ.ಕೆ ಶಿವಲಿಂಗೇಗೌಡ, ವೆಂಕಟರಾವ್ ನಾಡಗೌಡ ಮತ್ತು ಎ. ಟಿ. ರಾಮಸ್ವಾಮಿ ಸೇರಿದಂತೆ ಇನ್ನಲವರು ಭಾಗವಹಿಸಲಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ

ವಿಶ್ವೇಶ್ವರ ಹೆಗಡೆ ಕಾಗೇರಿ

 • Share this:
  ಬೆಂಗಳೂರು(ಮೇ.28): ಪಕ್ಷಾಂತರ ನಿಷೇಧ ಕಾಯ್ದೆ ಮರು ಪರಿಶೀಲನೆ ಸಂಬಂಧ ಇಂದು ಸರ್ವಪಕ್ಷಗಳ ನಾಯಕರ ಸಭೆ ನಡೆಯಲಿದೆ. ವಿಧಾನಸೌಧದ ಮೊದಲನೇ ಮಹಡಿಯ ಸಮಿತಿ ಕೊಠಡಿಯಲ್ಲಿ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸಿಎಂ ಬಿ.ಎಸ್​​ ಯಡಿಯೂರಪ್ಪ ಮತ್ತು ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ ಸೇರಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

  ಇನ್ನು, ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದಿನ ಸಭೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಗೆ ಸಂಬಂಧ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಲಭ್ಯವಿರುವ ಅಧಿಕಾರಗಳು; ಮತ್ತದರಡಿ ರಚಿಸಲಾದ ನಿಯಮಗಳ ಪುನರ್​​ ಪರಿಶೀಲಿಸುವ ಕುರಿತು ಪ್ರಸ್ತಾಪ ಮಾಡಲಿದ್ದಾರೆ. ಈ ಬಗ್ಗೆ ಎಲ್ಲಾ ಪಕ್ಷದ ನಾಯಕರ ಅಭಿಪ್ರಾಯ ಪಡೆಯಲಿದ್ದಾರೆ.

  ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​​ನ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕಾಂಗ್ರೆಸ್​ನಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​, ಕೆ.ಆರ್ ರಮೇಶ್ ಕುಮಾರ್, ಆರ್.ವಿ ದೇಶಪಾಂಡೆ, ಹೆಚ್ ಕೆ ಪಾಟೀಲ್, ಡಾ.ಜಿ ಪರಮೇಶ್ವರ್ ಮತ್ತಲವರು ಭಾಗಿಯಾಗಲಿದ್ದಾರೆ.

  ಇದನ್ನೂ ಓದಿ: COVID-19: ಹೀಗಿದೆ ಕೊರೋನಾ ಪೀಡಿತರ ರಾಜ್ಯವಾರು ವಿವರ..!

  ಹಾಗೆಯೇ ಜೆಡಿಎಸ್​​ನಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಎಂ.ಕೆ ಶಿವಲಿಂಗೇಗೌಡ, ವೆಂಕಟರಾವ್ ನಾಡಗೌಡ ಮತ್ತು ಎ. ಟಿ. ರಾಮಸ್ವಾಮಿ ಸೇರಿದಂತೆ ಇನ್ನಲವರು ಭಾಗವಹಿಸಲಿದ್ದಾರೆ.

  ಜತೆಗೆ ರಾಜ್ಯ ವಿಧಾನಸಭಾ ಸರ್ಕಾರದ ಮುಖ್ಯ ಸಚೇತಕ ವಿ ಸುನೀಲ್ ಕುಮಾರ್, ಡಿಸಿಎಂ ಗೋವಿಂದ ಎಂ ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮತ್ತಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
  First published: