SSLC Exam 2020: ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಜರ್, ಸೋಪು ವಿತರಿಸಲು ಮುಂದಾದ ಶಾಸಕಿ ಅಂಜಲಿ ನಿಂಬಾಳ್ಕರ್​

ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ಕಾಳಜಿ ತೋರಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ 4500 ಮಕ್ಕಳಿಗೆ ಕಿಟ್ ವಿತರಣೆ ಮಾಡಲು ಸಿದ್ದತೆಯನ್ನು ಮಾಡಿಕೊಂಡಿದ್ದಾರೆ. ತಾವೇ ಸ್ವತಃ ಕಿಟ್ ಸಿದ್ಧ ಮಾಡಿದ್ದಾರೆ.

ವಿದ್ಯಾರ್ಥಿಗಳಿಗೆ ನೀಡಲು ಸಿದ್ದಗೊಂಡಿರುವ ಕಿಟ್

ವಿದ್ಯಾರ್ಥಿಗಳಿಗೆ ನೀಡಲು ಸಿದ್ದಗೊಂಡಿರುವ ಕಿಟ್

  • Share this:
ಬೆಳಗಾವಿ(24): ಕೊರೋನಾ ವೈರಸ್ ಮಾಹಾಮಾರಿಯ ನಡುವೆ ನಾಳೆಯಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಳಗು ಆರಂಭವಾಗುತ್ತಿವೆ. ಮಕ್ಕಳಿಗೆ ಸರ್ಕಾರದಿಂದ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಲಾಗಿದೆ. ಈ ನಡುವೆ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಸ್ವತಃ ತಾವೇ ಮಕ್ಕಳಿಗೆ ಪರೀಕ್ಷೆ ಬರೆಯಲು ಕಿಟ್​ವೊಂದನ್ನು​​​ ಸಿದ್ದಪಡಿಸಿ ನೀಡಲು ಮುಂದಾಗಿದ್ದಾರೆ. 

ಇಡೀ ಕ್ಷೇತ್ರದ ಎಲ್ಲಾ ಮಕ್ಕಳಿಗೆ ಈ ಕಿಟ್ ವಿತರಣೆ ಕಾರ್ಯ ನಾಳೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ಕಾಳಜಿ ತೋರಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ 4500 ಮಕ್ಕಳಿಗೆ ಕಿಟ್ ವಿತರಣೆ ಮಾಡಲು ಸಿದ್ದತೆಯನ್ನು ಮಾಡಿಕೊಂಡಿದ್ದಾರೆ. ತಾವೇ ಸ್ವತಃ ಕಿಟ್ ಸಿದ್ಧ ಮಾಡಿದ್ದಾರೆ.

ಓರ್ವ ವಿದ್ಯಾರ್ಥಿಗೆ 2 ಮಾಸ್ಕ್, ನಾಲ್ಕು ಸೋಪು, ಒಂದು ಸ್ಯಾನಿಟೈಜರ್ ಬಾಟಲಿ, ಒಂದು ಕಂಪಾಸ್ ಬಾಕ್ಸ್ ನೀಡಲಿದ್ದಾರೆ. ಈಗಾಗಲೇ ಸರ್ಕಾರದಿಂದಲೂ ಮಕ್ಕಳಿಗೆ ಉಚಿತ ಮಾಸ್ಕ್ ನೀಡಲಾಗಿದೆ. ಜತೆಗೆ ತಮ್ಮ ಕ್ಷೇತ್ರದ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪ್ರತ್ಯೇಕ ವ್ಯವಸ್ಥೆ ಮಾಡಿದ್ದು ಪೋಷಕರು ಸಂತಸ ವ್ಯಕ್ತ ಪಡಿಸಿದ್ದಾರೆ.

ನೆಲಮಂಗಲ ನಗರದಲ್ಲಿ ಹೆಚ್ಚಾದ ಸೋಂಕಿತರು: 2 ವಾರ್ಡ್‌ಗಳು ಸೀಲ್‌ಡೌನ್

ಬೆಳಗಾವಿಯಲ್ಲಿ ಹೇಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಸಿದ್ದತೆ!

ಬೆಳಗಾವಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆಗಳು ನಡೆದಿವೆ. ಜಿಲ್ಲೆಯಲ್ಲಿ 124 ಪರೀಕ್ಷಾ ಕೇಂದ್ರಗಳಲ್ಲಿ 33590 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಈಗಾಗಲೇ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವ ಮೂಲಕ ಶುಚಿಗೊಳಿಸಲಾಗಿದೆ. ಒಂದು ಕೊಠಡಿಯಲ್ಲಿ ಕೇವಲ 18 ರಿಂದ 20 ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಠಿಯಿಂದ ಮಕ್ಕಳಿಗೆ ಪರೀಕ್ಷಾ ಕೇಂದ್ರದಲ್ಲಿ ಬಾಕ್ಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷೆ ಒಳಪಡಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳೂ ಪರೀಕ್ಷೆ ಕೇಂದ್ರ ಆಗಮಿಸಲು 9 ಬಸ್, 45 ಖಾಸಗಿ ವಾಹನದ ವ್ಯವಸ್ಥೆ ಮಾಡಲಾಗಿದೆ.

ಕಂಟೈನ್​​ಮೆಂಟ್ ಝೋನ್ ನಿಂದ ಪರೀಕ್ಷೆಗೆ ಆಗಮಿಸುವ 30ಕ್ಕೂ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ನೀಡಲಾಗಿದೆ. ಜತೆಗೆ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಕುಳಿತುಕೊಳ್ಳಲು ವ್ಯವಸ್ಥೆಯನ್ನು ಮಾಡಲಾಗಿದೆ.  ಬೆಳಗಾವಿ ಜಿಲ್ಲೆಯಲ್ಲಿ 4 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚನೆ ಆಗಲಿದ್ದಾರೆ. ಓರ್ವ ವಿದ್ಯಾರ್ಥಿಗೆ ಸೋಂಕು ಕಾಣಿಸಿಕೊಂಡಿದ್ದು, ಇನ್ನುಳಿದ ಮೂರು ವಿದ್ಯಾರ್ಥಿಗಳು ಕ್ವಾರಂಟೈನ್ ಝೋನ್  ವ್ಯಾಪ್ತಿಯಲ್ಲಿ ಇದ್ದಾರೆ.
First published: