ಎಸ್​ಎಸ್​​ಎಲ್​​ಸಿ ಎರಡನೇ ಪರೀಕ್ಷೆ; ಕಂಟೈನ್​ಮೆಂಟ್ ನಿಂದ ಯಾರೂ ಪರೀಕ್ಷೆ ಬರೆದಿಲ್ಲ ; ಸಚಿವ ಸುರೇಶ್ ಕುಮಾರ್

ಎರಡನೇ ದಿನದ ಈ ಪರೀಕ್ಷೆಗಳಿಗೆ 528 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು,18 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು

ಸಚಿವ ಸುರೇಶ್​ ಕುಮಾರ್

ಸಚಿವ ಸುರೇಶ್​ ಕುಮಾರ್

  • Share this:
ಬೆಂಗಳೂರು(ಜೂ.26): ಎಸ್ ಎಸ್ ಎಲ್ ಸಿ ಎರಡನೇ ದಿನದ ಪರೀಕ್ಷೆ ಪೂರ್ಣಗೊಂಡಿದೆ. ಇಂದಿನ ಜೆಟಿಎಸ್ ಮತ್ತು ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ ಕಂಟೈನ್​ಮೆಂಟ್ ಪ್ರದೇಶದಿಂದ ಬಂದು ಯಾವ ವಿದ್ಯಾರ್ಥಿಯೂ ಪರೀಕ್ಷೆ ಬರೆಯಲಿಲ್ಲ. ಎರಡನೇ ದಿನ  ಪರೀಕ್ಷೆಗಳು ರಾಜ್ಯದ 94 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದು, 510 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎರಡನೇ ದಿನದ ಈ ಪರೀಕ್ಷೆಗಳಿಗೆ 528 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 18 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಈ ದಿನ ಕಂಟೈನ್​ಮೆಂಟ್ ವಲಯಕ್ಕೆ ಸೇರಿದ ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ. 438 ಮಂದಿ ಶಾಲಾ ವಿದ್ಯಾರ್ಥಿಗಳು ಮತ್ತು 83 ಮಂದಿ ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯದಲ್ಲಿ ಇಂದು ಮೂವರು ವಲಸೆ ವಿದ್ಯಾರ್ಥಿಗಳಾಗಿದ್ದು, ಮೂವರೂ ಇಂದಿನ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದರು.

ಎಸ್ ಎಸ್ ಎಲ್‌ ಸಿ ಎರಡನೇ‌ ಪರೀಕ್ಷೆಗೆ ಯಾವುದೇ ಸಮಸ್ಯೆಯಿಲ್ಲದೇ ಅಚ್ಚುಕಟ್ಟಾಗಿ ನಡೆದು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೆಚ್ಚಿನ ನಿಗಾ ವಹಿಸಲಾಗಿತ್ತು. ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಅಭ್ಯರ್ಥಿಗಳು ಅಂದರೆ 70 ಅಭ್ಯರ್ಥಿಗಳು ಹಾಜರಾಗಿದ್ದರು. ಕಲಬುರ್ಗಿ-49, ಮಂಗಳೂರು-40, ರಾಮನಗರ-33, ಬೆಂಗಳೂರು ಉತ್ತರ-24, ಬೆಂಗಳೂರು ದಕ್ಷಿಣ ಜಿಲ್ಲೆ-26, ಚಿಕ್ಕೋಡಿ- 46, ಧಾರವಾಡ-50, ಬಳ್ಳಾರಿ-47 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ಸರ್ಕಾರದ ಅನುದಾನವಿಲ್ಲದೇ ಸಹಕಾರ ತತ್ವದಡಿ ಕೆರೆ ಅಭಿವೃದ್ಧಿ ಮಾಡಿದ ಗ್ರಾಮಸ್ಥರು

ಈ ಪರೀಕ್ಷೆಗಳಿಗೆ ಕಳೆದ ವರ್ಷ 7 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ರಾಜಧಾನಿಯಲ್ಲಿ 18 ಪರೀಕ್ಷಾ ಕೇಂದ್ರಗಳು. ಮೈಸೂರು ಮತ್ತು ಮಂಗಳೂರಿನಲ್ಲಿ ತಲಾ 6, ಶಿವಮೊಗ್ಗದಲ್ಲಿ 7 ಪರೀಕ್ಷಾ ಕೇಂದ್ರಗಳಿದ್ದವು ಎಂದು. ಯಾವುದೇ ಕೇಂದ್ರದಲ್ಲೂ ಪರೀಕ್ಷಾ ಅವ್ಯವಹಾರ ನಡೆದಿಲ್ಲ. ರಾಜ್ಯದ ವಿವಿಧೆಡೆಯ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ಕೈಗೊಳ್ಳಲಾದಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಶನಿವಾರ ಗಣಿತ ಪರೀಕ್ಷೆ ನಡೆಯಲಿದ್ದು, ನಿನ್ನೆಯಂತೆಯೇ ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಸಾಮಾಜಿಕ ಅಂತರ ಪಾಲಿಸುವ ಮೂಲಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಡೆಯುತ್ತಿರುವ ಪರೀಕ್ಷೆಯ ಯಶಸ್ಸಿಗೆ ಪೋಷಕರು ಹೆಚ್ಚಿನ ಸಹಕಾರ ನೀಡಬೇಕೆಂದು ಎಂದು ಸುರೇಶ್ ಕುಮಾರ್ ಕೋರಿದ್ದಾರೆ.
First published: