ಪ್ರೌಢಶಾಲಾ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್ ಕಾರ್ಯಕ್ರಮ ಆರಂಭ ; ಸಚಿವ ಸುರೇಶ್ ಕುಮಾರ್

ನಮ್ಮ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ  ಕಲಿಕೆಯನ್ನು ನಿರಂತರವಾಗಿರಿಸಲು ಸಾರ್ವಜನಿಕ ಶಿಕ್ಷಣ ಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾದ ಪರ್ಯಾಯ ಕ್ರಮಗಳಿಗೆ ಚಾಲನೆ ನೀಡಿದೆ

news18-kannada
Updated:July 13, 2020, 7:48 AM IST
ಪ್ರೌಢಶಾಲಾ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್ ಕಾರ್ಯಕ್ರಮ ಆರಂಭ ; ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್
  • Share this:
ಬೆಂಗಳೂರು(ಜುಲೈ.13): ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಗಳನ್ನುಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಈ ಸಂಬಂಧ ಎಲ್ಲ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್‍ಆರ್​ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್, ಇಲಾಖೆ ಸಿದ್ಧಪಡಿಸಿದ ವಿಡಿಯೋ ತರಗತಿಗಳನ್ನು ವೀಕ್ಷಿಸಿದರು. ನಮ್ಮ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ  ಕಲಿಕೆಯನ್ನು ನಿರಂತರವಾಗಿರಿಸಲು ಸಾರ್ವಜನಿಕ ಶಿಕ್ಷಣ ಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾದ ಪರ್ಯಾಯ ಕ್ರಮಗಳಿಗೆ ಚಾಲನೆ ನೀಡಿದೆ ಎಂದು ಹೇಳಿದರು.

ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದುವ ಮಕ್ಕಳಿಗೆ ಹಿಂದಿನ ತರಗತಿಗಳ ಕಲಿಕೆಯನ್ನು ನೆನಪಿಸಿ ಮುಂದಿನ ತರಗತಿಗಳಿಗೆ ಸಿದ್ಧಗೊಳಿಸುವ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್ ) ಮಕ್ಕಳ ಕಲಿಕೆಯನ್ನು ಸಮಗ್ರವಾಗಿಸುವ ನಿಟ್ಟಿನಲ್ಲಿ ಒಂದು ಪರಿಪೂರ್ಣ ಕಾರ್ಯಕ್ರಮ ಎಂದು ಅವರು ತಿಳಿಸಿದರು. ಕೆಲವೇ ದಿನಗಳಲ್ಲಿ 8ರಿಂದ 10ನೇ ತರಗತಿಯ ಸೇತುಬಂಧ ವಿಡಿಯೋ ತರಗತಿಗಳು ಚಂದನ ವಾಹಿನಿಯಲ್ಲಿ ಆರಂಭಗೊಳ್ಳಲಿವೆ. ಆ ನಂತರ ಇಂಗ್ಲಿಷ್ ಮಾಧ್ಯಮಗಳಲ್ಲೂ ಈ ತರಗತಿಗಳ ಪಾಠಗಳನ್ನು ಪ್ರಾರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಇದನ್ನೂ ಓದಿ :ದೇವಸ್ಥಾನ ದ್ವಂಸ ಮಾಡಿದ‌ ಕಿಡಿಗೇಡಿಗಳು : ಆಕ್ರೋಶಕೊಂಡ ಭಕ್ತರಿಂದ ಪ್ರತಿಭಟನೆ

ಅದರಂತೆಯೇ ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿವೆ. ಹಾಗೆಯೇ ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳು ಸಹ ಪ್ರಾರಂಭವಾಗಲಿವೆ ಎಂದು ಸಚಿವರು ತಿಳಿಸಿದರು. ಈ ಮೂಲಕ ಎಲ್ಲ ತರಗತಿಗಳ ವಿದ್ಯಾರ್ಥಿಗಳ ಕಲಿಕೆ ನಿರಂತರವಾಗಿರಲಿದ್ದು, ಸಮರ್ಥ ಅನುಪಾಲನಾ ವ್ಯವಸ್ಥೆ ಸಹ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಆನ್ ಲೈನ್ ಜರುಗುತ್ತಿದೆ. ಆದರೆ ಅದೇ ಗ್ರಾಮೀಣ ಭಾಗದ ಮಕ್ಕಳಿಗೆ ಆನ್ ಲೈನ್ ಕ್ಲಾಸಸ್ ಇನ್ನೂ ತಲುಪುತ್ತಿಲ್ಲ. ಬಡಮಕ್ಕಳು ಇದುವರೆಗೂ ಆನ್ ಲೈನ್ ಕ್ಲಾಸ್ ವ್ಯವಸ್ಥೆಯಿಲ್ಲ. ಇದರಿಂದಾಗಿ ಸರ್ಕಾರಿ ಚಾನೆಲ್ ಡಿಡಿ ಚಂದನದ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುವ‌ ಪ್ರಯತ್ನ ಜರುಗುತ್ತಿದೆ.
Published by: G Hareeshkumar
First published: July 13, 2020, 7:34 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading