ಕೊರೋನಾ ವಿರುದ್ಧ ಹೋರಾಡುತ್ತಿರುವ ಪೊಲೀಸರಿಗೆ ಜೀವ ವಿಮೆ ಮತ್ತು ತುಟ್ಟಿ ಭತ್ಯೆ - ಪ್ರವೀಣ್​​ ಸೂದ್​ ಸ್ಪಷ್ಟನೆ

ಈ ಹಿಂದೆ ಕೋವಿಡ್​​-19 ವಿರುದ್ಧ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ ವೈದ್ಯರಂತೆಯೇ ಪೊಲೀಸರಿಗೂ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಘೋಷಿಸಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಆದೇಶಿಸಿತ್ತು. ಕೊರೋನಾ ವಿರುದ್ಧದ ಸಮರದಲ್ಲಿ ಸಾವನ್ನಪ್ಪುವ ಪೊಲೀಸರಿಗೆ 30 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದರು.

ಪ್ರವೀಣ್ ಸೂದ್.

ಪ್ರವೀಣ್ ಸೂದ್.

 • Share this:
  ಬೆಂಗಳೂರು(ಮೇ.04): ಮಾರಕ ಕೊರೋನಾ ವೈರಸ್​​ ವಿರುದ್ಧ ಹೋರಾಡುತ್ತಿರುವ ಪೊಲೀಸರಿಗೆ ಜೀವ ವಿಮೆ ಮತ್ತು ತುಟ್ಟಿ ಭತ್ಯೆ ನೀಡಲಾಗುವುದು ಎಂದು ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್​​ ಮಾಡಿದ್ದಾರೆ. ಈ ಮೂಲಕ ಪೊಲೀಸರು, ಹೋಂ ಗಾರ್ಡ್ಸ್, ಅಗ್ನಿಶಾಮಕ ಸಿಬ್ಬಂದಿ, ಸಿವಿಲ್‌ ಡಿಫೆನ್ಸ್‌, ಕಾರಾಗೃಹ ಸಿಬ್ಬಂದಿಗೆ ಸರ್ಕಾರದ ಪರವಾಗಿ ಸಿಹಿಸುದ್ದಿ ನೀಡಿದ್ದಾರೆ.  ಈ ಹಿಂದೆ ಕೋವಿಡ್​​-19 ವಿರುದ್ಧ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ ವೈದ್ಯರಂತೆಯೇ ಪೊಲೀಸರಿಗೂ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಘೋಷಿಸಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಆದೇಶಿಸಿತ್ತು. ಕೊರೋನಾ ವಿರುದ್ಧದ ಸಮರದಲ್ಲಿ ಸಾವನ್ನಪ್ಪುವ ಪೊಲೀಸರಿಗೆ 30 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದರು.

  ಮೊದಲಿಗೆ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಮಡಿಯುವ ವೈದ್ಯರಿಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್​​​ ಘೋಷಣೆ ಮಾಡಿದ್ದರು. ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಮತ್ತು ಆರೋಗ್ಯ ಸೇವೆ ಮಾಡುವ ಸಿಬ್ಬಂದಿಗೆ ಮೊದಲು ಸೋಂಕು ತಗಲುವ ಸಾಧ್ಯತೆ ಇದೆ. ಇದರಿಂದ ಜೀವಕ್ಕೆ ಅಪಾಯವಿದೆ ಎಂದು ಹಲವರಲ್ಲಿ ಆತಂಕ ಇದೆ. ಇಂತವರಿಗೆ ಧೈರ್ಯ ತುಂಬುವ ಸಲುವಾಗಿ ಒಂದು ವೇಳೆ ಆರೋಗ್ಯ ಸೇವೆಯಲ್ಲಿ ಯಾರಾದರೂ ಮಡಿದರೇ ದೆಹಲಿ ಸರ್ಕಾರ 1 ಕೋಟಿ. ರೂ ಪರಿಹಾರ ನೀಡಲಿದೆ ಎಂದು ಕೇಜ್ರಿವಾಲ್​ ಹೇಳಿದ್ದರು.

  ಇದನ್ನೂ ಓದಿ: ಕೋವಿಡ್​​-19: ವೈದ್ಯರು, ಪೊಲೀಸರು, ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರಿಗೆ 30 ಲಕ್ಷ ರೂ. ಜೀವ ವಿಮೆ ಘೋಷಿಸಿದ ರಾಜ್ಯ ಸರ್ಕಾರ

  ಇದಾದ ಬೆನ್ನಲ್ಲೇ ಇತ್ತೀಚೆಗೆ ಕೋವಿಡ್​​-19​ ವಿರುದ್ಧ ತಮ್ಮ ಪ್ರಾಣವನ್ನು ಲೆಕ್ಕಿಸದೇ ಶ್ರಮಿಸುತ್ತಿರುವ ವೈದ್ಯರು ಮತ್ತು ಪೊಲೀಸರಂತೆಯೇ ಪತ್ರಕರ್ತರಿಗೂ 15 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಒರಿಸ್ಸಾ ಸಿಎಂ ನವೀನ್​​ ಪಟ್ನಾಯಕ್​​ ಘೋಷಣೆ ಮಾಡಿದ್ದರು. ಇದಕ್ಕೂ ಮುನ್ನ ಹರಿಯಾಣ ಸಿಎಂ ಮನೋಹರ್‌ ಲಾಲ್‌ ಖಟ್ಟರ್‌ ಹೀಗೊಂದು ನಿರ್ಧಾರ ಪ್ರಕಟಿಸಿದ್ದರು.
  First published: