ಕೊರೋನಾ ವೈರಸ್​​: ಶಾಲಾ ಕಾಲೇಜು ಬೆನ್ನಲ್ಲೇ ಹಾಸ್ಟೆಲ್​​ಗಳಿಗೂ ರಜೆ ಘೋಷಣೆ; ಸರ್ಕಾರ ಆದೇಶ

ಇತ್ತೀಚೆಗಷ್ಟೇ ರಾಜ್ಯದ ಬಹುತೇಕ ಜಿಲ್ಲೆಗಳ ಶಾಲೆಗಳಿಗೆ ರಜೆ ನೀಡಲಾಗಿತ್ತು  ಖುದ್ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೀಗೆ ಆದೇಶ ಹೊರಡಿಸಿದ್ದಾರೆ. 7, 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಹಾಜರಾದರೆ ಸಾಕು ಎಂದಿದ್ದರು ಸುರೇಶ್ ಕುಮಾರ್.

news18-kannada
Updated:March 14, 2020, 7:47 PM IST
ಕೊರೋನಾ ವೈರಸ್​​: ಶಾಲಾ ಕಾಲೇಜು ಬೆನ್ನಲ್ಲೇ ಹಾಸ್ಟೆಲ್​​ಗಳಿಗೂ ರಜೆ ಘೋಷಣೆ; ಸರ್ಕಾರ ಆದೇಶ
ಇತ್ತೀಚೆಗಷ್ಟೇ ರಾಜ್ಯದ ಬಹುತೇಕ ಜಿಲ್ಲೆಗಳ ಶಾಲೆಗಳಿಗೆ ರಜೆ ನೀಡಲಾಗಿತ್ತು  ಖುದ್ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೀಗೆ ಆದೇಶ ಹೊರಡಿಸಿದ್ದಾರೆ. 7, 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಹಾಜರಾದರೆ ಸಾಕು ಎಂದಿದ್ದರು ಸುರೇಶ್ ಕುಮಾರ್.
  • Share this:
ಬೆಂಗಳೂರು(ಮಾ.14): ರಾಜ್ಯಾದ್ಯಂತ ಕೊರೋನಾ ವೈರಸ್​​​ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿತ್ತು. ಈ ಬೆನ್ನಲ್ಲೀಗ ರಾಜ್ಯದ ಎಲ್ಲಾ ವಿದ್ಯಾರ್ಥಿ ವಸತಿ ನಿಲಯಗಳಿಗೂ ರಜೆ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಎಲ್ಲಾ ಕಾಲೇಜುಗಳಿಗೂ ಇದೇ ತಿಂಗಳು 14ರಿಂದ 28ನೇ ತಾರೀಕಿನವರೆಗೂ ವಿದ್ಯಾರ್ಥಿಗಳನ್ನು ಮನೆಗೆ ಕಳಿಸುವಂತೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಿಗೆ ಸಂಬಂಧಪಟ್ಟ ಇಲಾಖೆ ಸೂಚನೆ ನೀಡಿದೆ. ಹಾಗಾಗಿ ಕಾಲೇಜು, ಮೆಟ್ರಿಕ್​​ ಪೂರ್ವ ಮತ್ತು ನಂತರದ ವಿದ್ಯಾರ್ಥಿ ಹಾಸ್ಟೆಲ್​​ಗಳಿಗೆ ರಜೆ ನೀಡಲಾಗಿದೆ.

ಇತ್ತೀಚೆಗಷ್ಟೇ ರಾಜ್ಯದ ಬಹುತೇಕ ಜಿಲ್ಲೆಗಳ ಶಾಲೆಗಳಿಗೆ ರಜೆ ನೀಡಲಾಗಿತ್ತು  ಖುದ್ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೀಗೆ ಆದೇಶ ಹೊರಡಿಸಿದ್ದಾರೆ. 7, 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಹಾಜರಾದರೆ ಸಾಕು ಎಂದಿದ್ದರು ಸುರೇಶ್ ಕುಮಾರ್.

ಈಗಾಗಲೇ ಕೊರೋನಾ ವೈರಸ್​​ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ನಗರದ ಖಾಸಗಿ ಆಸ್ಪತ್ರೆಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌, ಹೋಟೆಲ್‌, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್​​ಒಸಿ ಪ್ರತಿ ಪಡೆಯದೆ ಯಾವುದೇ ಸಾರ್ವಜನಿಕ ಸಭೆಯಗಳನ್ನು ಆಯೋಜಿಸುವಂತಿಲ್ಲ ಎಂದು ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಕೊರೋನಾ ವೈರಸ್​​: ಇಂದಿನಿಂದ 1-7ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ; ನಾಳೆಯಿಂದ 8-10 ತರಗತಿ ಮಕ್ಕಳಿಗೆ ಪರೀಕ್ಷಾ ರಜೆ

ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಜನರು ಮುಂಜಾಗೃತ ಕ್ರಮವಾಗಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

First published:March 14, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading