ಕೋವಿಡ್​​-19 ಭೀತಿ: ಕಟ್ಟಡ ಕಾರ್ಮಿಕರಿಗೆ 1 ಸಾವಿರ ವೇತನ; ಸರ್ಕಾರ ಆದೇಶ

ಕರ್ನಾಟಕದಲ್ಲೂ ಮಾರಕ ಕೊರೋನಾ ವೈರಸ್ ಹಬ್ಬುತ್ತಿದೆ. ಈ ಹಿನ್ನಲೆಯಲ್ಲಿ ಇಡೀ ರಾಜ್ಯಾದ್ಯಂತ ಲಾಕ್​​ಡೌನ್ ಜಾರಿ ಮಾಡಲಾಗಿದೆ. ಇದೇ ಕಾರಣಕ್ಕೆ ಸಾರ್ವಜನಿಕರಿಗೆ ತೊಂದರೆಯಾಗದ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಜತೆಗೆ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ 1000 ರೂ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ.

news18-kannada
Updated:March 29, 2020, 3:15 PM IST
ಕೋವಿಡ್​​-19 ಭೀತಿ: ಕಟ್ಟಡ ಕಾರ್ಮಿಕರಿಗೆ 1 ಸಾವಿರ ವೇತನ; ಸರ್ಕಾರ ಆದೇಶ
ಸಿಎಂ ಬಿ.ಎಸ್​​ ಯಡಿಯೂರಪ್ಪ.
  • Share this:
ಬೆಂಗಳೂರು(ಮಾ.29): ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ 1 ಸಾವಿರ ವೇತನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇನ್ಮುಂದೆ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಒಂದು ಸಾವಿರ ಸಹಾಯ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲೂ ಮಾರಕ ಕೊರೋನಾ ವೈರಸ್ ಹಬ್ಬುತ್ತಿದೆ. ಈ ಹಿನ್ನಲೆಯಲ್ಲಿ ಇಡೀ ರಾಜ್ಯಾದ್ಯಂತ ಲಾಕ್​​ಡೌನ್ ಜಾರಿ ಮಾಡಲಾಗಿದೆ. ಇದೇ ಕಾರಣಕ್ಕೆ ಸಾರ್ವಜನಿಕರಿಗೆ ತೊಂದರೆಯಾಗದ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಜತೆಗೆ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ 1000 ರೂ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ.

ಕರ್ನಾಟಕದಲ್ಲಿ ಕೊರೋನಾ ವೈರಸ್​ ಅಟ್ಟಹಾಸ ಮುಂದುವರೆದಿದೆ. ನಿನ್ನೆ ರಾಜ್ಯದಲ್ಲಿ ಹೊಸದಾಗಿ 12 ಕೋವಿಡ್​​-19 ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಆದ್ದರಿಂದಲೇ ಇಲ್ಲಿಯವರೆಗಿನ ಸೋಂಕಿತರ ಸಂಖ್ಯೆ 76ಕ್ಕೆ ಏರಿಯಾಗಿದೆ. ಈ ಪೈಕಿ ಹೆಚ್ಚು ಕೇಸುಗಳು ಬೆಂಗಳೂರಿನಲ್ಲೇ ಕಂಡು ಬಂದಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಲಾಕ್​ಡೌನ್ ಅವಧಿಯಲ್ಲಿ ಕೂಲಿಕಾರ್ಮಿಕರ ವೇತನ ನಿಲ್ಲಿಸುವಂತಿಲ್ಲ; ಬಾಡಿಗೆ ಕೇಳುವಂತಿಲ್ಲ: ಕೇಂದ್ರ ನಿರ್ದೇಶನ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವವರ ಸಂಖ್ಯೆ 1 ಸಾವಿರ ದಾಟಿದೆ. ಶನಿವಾರ ಗುಜರಾತ್ ಒಂದರಲ್ಲೇ 4 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಪೈಕಿ ಅಹಮದಾಬಾದ್​​​-2, ಭಾವನಗರ್ ಮತ್ತು ಸೂರತ್​​ನಲ್ಲಿ ಒಂದೊಂದು ಸಾವು ಆಗಿದೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಈ ಮಧ್ಯೆ ಕೂಲಿ ಕಾರ್ಮಿಕರು ವಲಸೆ ಹೋಗುವಂತಹ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಬೇಕು. ಬಡವರು ಮತ್ತು ಅಗತ್ಯವಿದ್ದವರಿಗೆ ಆಹಾರ ಮತ್ತು ವಸತಿ ವ್ಯವಸ್ಥೆ ಏರ್ಪಡಿಸಿದಂತೆಯೇ, ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೂ ವ್ಯವಸ್ಥೆ ಮಾಡಬೇಕು. ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ವೇತನ ತಪ್ಪದಂತೆ ನೋಡಿಕೊಳ್ಳಬೇಕು. ಕಾರ್ಮಿಕರಿಂದ ಮನೆ ಬಾಡಿಗೆ ಕೇಳದಂತೆ ಮನೆಯ ಮಾಲೀಕರಿಗೆ ಸೂಚನೆ ನೀಡಬೇಕು. ಕಾರ್ಮಿಕರು ಮತ್ತು ವಿದ್ಯಾರ್ಥಿಗಳನ್ನು ಮನೆ ಖಾಲಿ ಮಾಡುವಂತೆ ಹೇಳುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೇಂದ್ರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
First published:March 29, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading