ಕೋವಿಡ್ ಪರಿಸ್ಥಿತಿ ನಿರ್ವಹಣೆ ವೈಫಲ್ಯ ಆರೋಪ; ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎತ್ತಂಗಡಿಗೆ ಚಿಂತನೆ

ಅನಿಲ್ ಕುಮಾರ್ ಅವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಿ, ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಕೆಲಸ ಮಾಡಿದ್ದ ಕುಮಾರ ನಾಯಕ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಿಸಲು ಚಿಂತನೆ ನಡೆದಿದೆ. ಈ ಸಂಬಂಧ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಸಂಜೆ ವೇಳೆಗೆ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ಬೆಂಗಳೂರು ಮಹಾನಗರ ಪಾಲಿಕೆ.

ಬೆಂಗಳೂರು ಮಹಾನಗರ ಪಾಲಿಕೆ.

 • Share this:
  ಬೆಂಗಳೂರು: ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಅವರ ಜಾಗಕ್ಕೆ ಕುಮಾರ ನಾಯಕ್ ಅವರನ್ನು ನೇಮಿಸಲು ಚಿಂತನೆ ಸಹ ನಡೆದಿದೆ. 

  ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಅನಿಲ್​ ಕುಮಾರ್ ಅವರು ವೈಫಲ್ಯರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಹೈಕೋರ್ಟ್‌ನಿಂದಲೂ ಬಿಬಿಎಂಪಿ ಕಾರ್ಯ ವೈಖರಿಗೆ ಚಾಟಿ ಬೀಸಿತ್ತು. ಈ ಕಾರಣಕ್ಕೆ ಅನಿಲ್ ಕುಮಾರ್ ಅವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಿ, ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಕೆಲಸ ಮಾಡಿದ್ದ ಕುಮಾರ ನಾಯಕ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಿಸಲು ಚಿಂತನೆ ನಡೆದಿದೆ. ಈ ಸಂಬಂಧ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಸಂಜೆ ವೇಳೆಗೆ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

  ಇದನ್ನು ಓದಿ: ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಬೆಡ್​ ಕೊಡಲೇಬೇಕು; ಸಚಿವ ಆರ್.ಅಶೋಕ್
  Published by:HR Ramesh
  First published: