ಯಾವುದೇ ಕಾರಣಕ್ಕೂ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ಹೊಣೆ ಗೇಡಿತನ ಪ್ರದರ್ಶಿಸಬಾರದು.
ಅಲೋಪತಿ ಮತ್ತು ಆಯುಷ್ ವೈದ್ಯರ ನಡುವಣ ಅಜಗಜಾಂತರ ವೇತನ ತಾರತಮ್ಯ ಸಹಜವಾಗಿಯೇ ಕಂದಕ ಸೃಷ್ಟಿಸಿದೆ. ಸರ್ಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಬಲು ಕಷ್ಟವಾಗುತ್ತದೆ.
— H D Kumaraswamy (@hd_kumaraswamy) July 17, 2020
ಕರೋನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್ ವೈದ್ಯರಿಗೆ ಮಾಸಿಕ 20000 ರೂ. ಅಲೋಪತಿ ವೈದ್ಯರಿಗೆ ಮಾಸಿಕ 60000 ರೂ. ವೇತನ ನೀಡುತ್ತಿರುವುದು ತಾರತಮ್ಯ ಎಂದು ಆಯುಷ್ ವೈದ್ಯರು ರಾಜಿನಾಮೆ ನೀಡಿದ್ದಾರೆ. ಈಗಾಗಲೇ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರ ಆಯುಷ್ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸಬೇಕು.
— H D Kumaraswamy (@hd_kumaraswamy) July 17, 2020
ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ.
— H D Kumaraswamy (@hd_kumaraswamy) July 17, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ