ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೇರಿರುವ ಲಾಕ್‌ಡೌನ್ ಅನ್ನು ರಾಜ್ಯ ಸರ್ಕಾರಗಳು ಕಟ್ಟು ನಿಟ್ಟಾಗಿ ಪಾಲಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಟ್ವೀಟ್ ಮೂಲಕ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ.
ದೇಶದ 80ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿವೆ. 400ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಕಳೆದ ಒಂದು ವಾರದಲ್ಲಿ 8 ಜನ ಕೊರೋನಾಗೆ ಮೃತಪಟ್ಟಿದ್ದಾರೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ಮಾರ್ಚ್ 31ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಆದರೆ, ಕೆಲವು ರಾಜ್ಯಗಳು ಇದನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ.
लॉकडाउन को अभी भी कई लोग गंभीरता से नहीं ले रहे हैं। कृपया करके अपने आप को बचाएं, अपने परिवार को बचाएं, निर्देशों का गंभीरता से पालन करें। राज्य सरकारों से मेरा अनुरोध है कि वो नियमों और कानूनों का पालन करवाएं।
— Narendra Modi (@narendramodi) March 23, 2020
ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್ 22ರಂದು ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಅಲ್ಲದೆ, ಕೊರೋನಾ ಭೀತಿಯ ನಡುವೆಯೂ ಹಗಲಿರುಳು ಜನರಿಗಾಗಿ ದುಡಿಯುವ ಪೊಲೀಸರು, ಸೈನಿಕರು, ವೈದ್ಯರು ಹಾಗೂ ಪೌರ ಕಾರ್ಮಿಕರನ್ನು ಗೌರವಿಸುವ ಸಲುವಾಗಿ ಸಂಜೆ 5 ಗಂಟೆಗೆ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಲು ವಿನಂತಿಸಿದ್ದರು.
ಆದರೆ, ದೇಶದ ಜನ ಹಲವೆಡೆ ಸಾಮೂಹಿಕ ಅಂತರ ಕಾಯ್ದುಕೊಳ್ಳುವ ಸೂಚನೆಯನ್ನೂ ಬದಿಗೊತ್ತಿ ಬೀದಿ ಬೀದಿಗಳಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಲ್ಲದೆ, ಶಂಕ ಜಾಕಟೆ ಬಾರಿಸುವ ಮೂಲಕ ಮೋದಿ ವಿನಂತಿಯನ್ನು ನೆರವೇರಿಸುವ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದರು. ಇನ್ನೂ ರಾಜ್ಯದ ರಾಜ್ಯಪಾಲ ವಜುಭಾಯಿ ವಾಲಾ ಸಹ ಸಾಮೂಹಿಕವಾಗಿ ಜಾಗಟೆ ಬಾರಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನಗೆಪಾಟಲಿಗೆ ಈಡಾಗಿದ್ದರು.
ಇದನ್ನೂ ಓದಿ : ಕೊರೋನಾ ಭೀತಿ; ವಿದೇಶದಿಂದ ಮರಳಿದವರ ಮೇಲೆ ತೀವ್ರ ನಿಗಾ; ಕಾರ್ಯಾಚರಣೆಗೆ 500 ಪೊಲೀಸರ ತಂಡ ರಚನೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ