ಹಾಸನ: ಗುತ್ತಿಗೆ ಆಧಾರದ ಮೇರೆಗೆ ಕೊರೋನಾ ವಾರಿಯರ್ಸ್​ ಹುದ್ದೆಗಳ ಭರ್ತಿಗೆ ಮುಂದಾದ ಸರ್ಕಾರ

ಈ ಹಿಂದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಯಲ್ಲಿ ವಿವರಿಸಿರುವ ಮೂಲ ದಾಖಲಾತಿಗಳೊಂದಿಗೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೂಲ ದಾಖಲೆಗಳು ಹಾಗೂ ನಕಲು ಪತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ತಿಳಿಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

  • Share this:
ಹಾಸನ(ಆ.25): ಹಾಸನ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಿಸಲು 56 ಶುಶ್ರೂಷಕ ಅಧಿಕಾರಿ, 9 ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ 107 ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳವರೆಗೆ ನೇಮಕಾತಿ ನಡೆಯಲಿದೆ. ಇದೇ  ಹುದ್ದೆಗಳು ಸರ್ಕಾರದಿಂದ ನೇರ ನೇಮಕಾತಿಯಾಗುವವರೆಗೆ ಗುತ್ತಿಗೆ ಆಧಾರದಲ್ಲಿ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ನೇರ ಸಂದರ್ಶನದ ಮೂಲಕ ರೋಸ್ಟರ್ ಕಮ್ ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಆ.26 ಮತ್ತು 27 ರಂದು ನೇರ ಸಂದರ್ಶನ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಹತೆ: ಶುಶ್ರೂಷ ಅಧಿಕಾರಿ ಡಿಪ್ಲೊಮಾ ನರ್ಸಿಂಗ್, ಬಿ.ಎಸ್. ಸಿ. ನರ್ಸಿಂಗ್, ಎಮ್.ಎಸ್.ಸಿ. ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವವರು ನೇರ ಸಂದರ್ಶನಕ್ಕೆ ಜು. 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 .30 ರ ವರೆಗೆ ಹಾಜರಾಗಬಹುದು.  ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಡಿ.ಎಮ್.ಎಲ್.ಟಿ., ಬಿ.ಎಸ್.ಸಿ. ಎಲ್.ಟಿ. ವಿದ್ಯಾರ್ಹತೆ ಹೊಂದಿರಬೇಕು. ಫಾರ್ಮಸಿ ಅಧಿಕಾರಿಗೆ ಡಿ- ಫಾರ್ಮಾ ಅಥವಾ ಬಿ- ಫಾರ್ಮಾ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಆ.27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರ ಗಂಟೆಯವರೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಆಯ್ಕೆ ಸಮಿತಿ ಅಧ್ಯಕ್ಷರಾದ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಎಲ್ಲಾ ಅಭ್ಯರ್ಥಿಗಳ ಗರಿಷ್ಟ ವಯಸ್ಸನ್ನು ಸಂದರ್ಶನದ ದಿನಾಂಕಕ್ಕೆ 50 ವರ್ಷವನ್ನು ನಿಗದಿಪಡಿಸಿದೆ. ಮೇಲ್ಕಂಡ ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಒಟ್ಟು ಅಂಕಗಳಲ್ಲಿ ಶೇಕಡ 50ರಷ್ಟು ಮತ್ತು ನೇರ ಸಂದರ್ಶನಕ್ಕೆ ಒಟ್ಟು 50 ಅಂಕಗಳನ್ನು ನಿಗದಿಪಡಿಸಿ ಎರಡು ಅಂಕಗಳನ್ನು ಒಟ್ಟುಗೂಡಿಸಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

ಈ ಹಿಂದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಯಲ್ಲಿ ವಿವರಿಸಿರುವ ಮೂಲ ದಾಖಲಾತಿಗಳೊಂದಿಗೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೂಲ ದಾಖಲೆಗಳು ಹಾಗೂ ನಕಲು ಪತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ: KM Shivalinge Gowda: ಜೆಡಿಎಸ್​​ ಶಾಸಕ ಶಿವಲಿಂಗೇಗೌಡಗೆ ಕೊರೋನಾ ಪಾಸಿಟಿವ್​​​
Published by:Ganesh Nachikethu
First published: