ಜೂ.14ರಂದು ನಡೆಯಬೇಕಿದ್ದ ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ

ಮದುವೆಗೆ 50, ಶವಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶವಿರುತ್ತಾದೆ ಎಂದು ಕೇಂದ್ರದ ಮಾರ್ಗಸೂಚಿ ತಿಳಿಸಿದೆ. ಹೀಗಾಗಿ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದ ಕಾರಣ ಡಿಕೆಶಿ ಪದಗ್ರಹಣವೂ 4ನೇ ಸಲ ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿದೆ.

ಡಿಕೆ ಶಿವಕುಮಾರ್​

ಡಿಕೆ ಶಿವಕುಮಾರ್​

  • Share this:
ಬೆಂಗಳೂರು(ಜೂ.09): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ ಪದಗ್ರಹಣ ಕಾರ್ಯಕ್ರಮಕ್ಕೆ ಮತ್ತೆ ಬ್ರೇಕ್ ಬಿದ್ದಿದೆ. ಯಾವುದೇ ಕಾರಣಕ್ಕೂ ಪದಗ್ರಹಣ ಮಾಡಬಾರದು ಎಂದು ರಾಜ್ಯ ಸರ್ಕಾರ ಪತ್ರ ಬರೆಯುವ ಮೂಲಕ ನಿರಾಕರಿಸಿದೆ. ಈ ಬಗ್ಗೆ ಸರ್ಕಾರವೇ ಅಧಿಕೃತವಾಗಿ ಡಿಕೆ ಶಿವಕುಮಾರ್​​ಗೆ ಪತ್ರದ ಮುಖೇನ ಸ್ಪಷ್ಟನೆ ನೀಡಿದೆ.

ಇದೇ ಜೂನ್​​ 14ನೇ ತಾರೀಕಿನಂದು ಪದಗ್ರಹಣಕ್ಕೆ ಮುಂದಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಾಕಷ್ಟು  ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು. ಆದರೀಗ, ರಾಜ್ಯ ಸರ್ಕಾರ ಯಾವುದೇ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ ಎಂದು ಹೇಳಿದೆ. ಕೇಂದ್ರ ಸರ್ಕಾರ ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಮದುವೆ, ಶವಸಂಸ್ಕಾರಕ್ಕೆ ಮಾತ್ರ ಅವಕಾಶ ನೀಡಿದೆ. ರಾಜಕೀಯ ಕಾರ್ಯಕ್ರಮಗಳಿಗೆ ನೀಡಿಲ್ಲ. ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಸಾಧ್ಯವಿಲ್ಲ ಎಂದು ಡಿಕೆಶಿಗೆ ಬರೆದ ಪತ್ರದಲ್ಲಿ ರಾಜ್ಯ ಸರ್ಕಾರ ಉಲ್ಲೇಖಿಸಿದೆ.

ಮದುವೆಗೆ 50, ಶವಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶವಿರುತ್ತಾದೆ ಎಂದು ಕೇಂದ್ರದ ಮಾರ್ಗಸೂಚಿ ತಿಳಿಸಿದೆ. ಹೀಗಾಗಿ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದ ಕಾರಣ ಡಿಕೆಶಿ ಪದಗ್ರಹಣವೂ 4ನೇ ಸಲ ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೋವಿಡ್​​-19: 24 ಗಂಟೆಯಲ್ಲಿ 161 ಕೇಸ್​​, 2 ಸಾವು; ಸೋಂಕಿತರ ಸಂಖ್ಯೆ 5,921ಕ್ಕೆ ಏರಿಕೆ

ಲಾಕ್​ಡೌನ್​ನಿಂದಲೇ ಡಿಕೆಶಿ ಪದಗ್ರಹಣ ಕಾರ್ಯಕ್ರಮ ಮುಂದೂಡಲಾಗುತ್ತಿದೆ. ಈ ಸಂಬಂಧ ಅನುಮತಿ ಕೋರಿ ಡಿಕೆಶಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಪತ್ರವೂ ಬರೆದಿದ್ದರು. ಪ್ರಮಾನ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಅವಕಾಶ ನೀಡುವ ನಿರೀಕ್ಷೆಯೂ ಇತ್ತು. ಆದರೀಗ ನಾಲ್ಕನೇ ಬಾರಿಗೆ ಸರ್ಕಾರ ಅನುಮತಿ ನಿರಾಕರಿಸಿದೆ.
First published: