• ಹೋಂ
  • »
  • ನ್ಯೂಸ್
  • »
  • Corona
  • »
  • ಕಂಟೈನ್ಮೆಂಟ್ ಜೋನ್​ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ; ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಂಟೈನ್ಮೆಂಟ್ ಜೋನ್​ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ; ಶಿಕ್ಷಣ ಸಚಿವ ಸುರೇಶ್ ಕುಮಾರ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜೂನ್​ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಜುಲೈ 4ರವರೆಗೆ ನಡೆಯಲಿದೆ. ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಭಾಷೆಯ ಪರೀಕ್ಷೆಯೂ ಸಹ ಜೂನ್​ 18ರಂದು ನಡೆಯಲಿದೆ.

  • Share this:

    ಬೆಂಗಳೂರು: ಕೊರೋನಾ ವೈರಸ್ ಕಾರಣದಿಂದಾಗಿ ಏಪ್ರಿಲ್ ಅಥವಾ ಮೇ ನಲ್ಲಿ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆಯಾಗಿ, ಇದೀಗ ಜೂನ್​ 25ರಿಂದ ನಡೆಯಲಿದೆ. ಆದರೆ, ಕಂಟೇನ್ಮೆಂಟ್​ ಜೋನ್​ನಲ್ಲಿ ಇರುವ ವಿದ್ಯಾರ್ಥಿಗಳಿಗೆ ಎಲ್ಲ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ.


    ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಕಂಟೇನ್ಮೆಂಟ್ ಜೋನ್​ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಇಲ್ಲ. ಸಪ್ಲಿಮೆಂಟರಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಇವರನ್ನು ಹೊಸದಾಗಿ ಪರೀಕ್ಷೆ ತೆಗೆದುಕೊಳ್ಳುತ್ತಿರುವವರು ಎಂದೇ ಪರಿಗಣಿಸಿ, ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.


    ಜೂನ್​ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಜುಲೈ 4ರವರೆಗೆ ನಡೆಯಲಿದೆ. ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಭಾಷೆಯ ಪರೀಕ್ಷೆಯೂ ಸಹ ಜೂನ್​ 18ರಂದು ನಡೆಯಲಿದೆ.


    ಇದನ್ನು ಓದಿ: SSLC Exam Time Table: ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ, ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ

    Published by:HR Ramesh
    First published: