HOME » NEWS » Coronavirus-latest-news » SUPREME COURT HAS SAVED THE LIVES OF MANY PATIENTS BY DISMISSING THE APPEAL MADE BY BJP SAYS SIDDARAMAIAH MAK

Siddaramaiah: ಸುಪ್ರೀಂ ತಪರಾಕಿಯಿಂದಲಾದರೂ ಪ್ರಾಣದ ಜೊತೆ ಚೆಲ್ಲಾಟವಾಡುವ‌ ಕ್ರೌರ್ಯವನ್ನು ನಿಲ್ಲಿಸಿ; ಸಿದ್ದರಾಮಯ್ಯ

ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸುವಂತೆ ಹೈಕೋರ್ಟ್ ನೀಡಿದ್ದ​ ಸೂಚನೆ ವಿರುದ್ಧ ಕೇಂದ್ರ ಸರ್ಕಾರ ನಿನ್ನೆಯೇ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ಆದರೆ, ಕೇಂದ್ರದ ಅರ್ಜಿಯನ್ನು ಸುಪ್ರೀಂ ಇಂದು ತಿರಸ್ಕರಿಸಿದೆ.

news18-kannada
Updated:May 7, 2021, 3:56 PM IST
Siddaramaiah: ಸುಪ್ರೀಂ ತಪರಾಕಿಯಿಂದಲಾದರೂ ಪ್ರಾಣದ ಜೊತೆ ಚೆಲ್ಲಾಟವಾಡುವ‌ ಕ್ರೌರ್ಯವನ್ನು ನಿಲ್ಲಿಸಿ; ಸಿದ್ದರಾಮಯ್ಯ
ಸಿದ್ದರಾಮಯ್ಯ.
  • Share this:
ಬೆಂಗಳೂರು (ಮೇ 07); ಕರ್ನಾಟಕಕ್ಕೆ 1200 ಮೆ.ಟನ್​ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ಪೂರೈಕೆ ಮಾಡಬೇಕು ಎಂದು ಅಲ್ಲಿನ ಹೈಕೋರ್ಟ್​ ನೀಡಿರುವ ತೀರ್ಪಿನ ವಿರುದ್ಧ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಹೇಳಿದ ಬೆನ್ನಿಗೆ, ಈ ಆದೇಶವನ್ನು ಸ್ವಾಗತಿಸಿರುವ ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ, "ಬಿಜೆಪಿ ನಾಯಕರು ಸುಪ್ರೀಂ ಕೋರ್ಟ್​ ತಪರಾಕಿಯಿಂದಲಾದರೂ ಬುದ್ಧಿ ಕಲಿಯಲಿ, ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ‌ ಕ್ರೌರ್ಯವನ್ನು ನಿಲ್ಲಿಸಲಿ" ಎಂದು ಕಿವಿಮಾತು ಹೇಳಿದ್ದಾರೆ. ಅಸಲಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಬೆಂಗಳೂರಿನಲ್ಲಂತೂ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿ ಸಿಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಈ ನಡುವೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.

ಆಕ್ಸಿಜನ್ ಕೊರತೆ ಮತ್ತು ಐಸಿಯು ಬೆಡ್ ಇಲ್ಲದಿರುವುದೇ ಈ ಎಲ್ಲಾ ಸಾವಿಗೆ ಪ್ರಮುಖ ಕಾರಣವಾಗಿದೆ. ಈ ನಡುವೆ ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 24 ಜನ ಮೃತಪಟ್ಟ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣದ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್,​ ಕೂಡಲೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಗತ್ಯವಾದ 1200 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ನೀಡಬೇಕು ಎಂದು ಸೂಚನೆ ನೀಡಿತ್ತು. ಆದರೆ ಹೈಕೋರ್ಟ್​ ಸೂಚನೆ ವಿರುದ್ಧ ಕೇಂದ್ರ ಸರ್ಕಾರ ನಿನ್ನೆಯೇ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ಆದರೆ, ಕೇಂದ್ರದ ಅರ್ಜಿಯನ್ನು ಸುಪ್ರೀಂ ಇಂದು ತಿರಸ್ಕರಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಸುಪ್ರೀಂ ಕೋರ್ಟ್ ತಪರಾಕಿಯಿಂದ
ಈಗಲಾದರೂ ಪ್ರಧಾನಿ ಮೋದಿ ಬುದ್ದಿ ಕಲಿಯಲಿ. ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ‌ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ.


ಕರ್ನಾಟಕಕ್ಕೆ ನಿತ್ಯ 1600 - 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ ಪ್ರಧಾನಿ ಮೋದಿ ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್‌ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ‌ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ.ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ನಾನು ಸ್ವಾಗತಿಸುತ್ತೇನೆ" ಎಂದು ತಿಳಿಸಿದ್ದಾರೆ.ಮತ್ತೊಂದು ಟ್ವೀಟ್​ನಲ್ಲಿ, "ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸುತ್ತೇನೆ" ಎಂದಿದ್ದಾರೆ.
Published by: MAshok Kumar
First published: May 7, 2021, 3:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories