ನವದೆಹಲಿ (ಏ. 8): ಕೊರೋನಾ ವೈರಸ್ನಿಂದಾಗಿ ಜನರು ಆತಂಕಿತರಾಗಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವೈದ್ಯರ ಬಳಿ ಕೊರೋನಾ ತಪಾಸಣೆಗೆಂದು ಬರುವವರ ಪ್ರಮಾಣವೂ ಹೆಚ್ಚುತ್ತಿದೆ. ಆದರೆ, ಇದನ್ನೇ ಬಂಡವಾಳವಾಗಿ ಮಾಡಿಕೊಂಡಿರುವ ಕೆಲವು ಖಾಸಗಿ ಲ್ಯಾಬ್ಗಳು ದೊಡ್ಡ ಮೊತ್ತದ ಸುಲಿಗೆಗೆ ಇಳಿದಿವೆ. ಈ ಹಿನ್ನೆಲೆಯಲ್ಲಿ ಖಾಸಗಿ ಲ್ಯಾಬ್ಗಳ ವಸೂಲಿಗೆ ಕಡಿವಾಣ ಹಾಕಲು ಸುಪ್ರೀಂಕೋರ್ಟ್ ಮುಂದಾಗಿದೆ.
Supreme Court observed & suggested that the tests should be conducted free of cost in the identified private laboratories also. The top court further said that it will pass an appropriate order in this regard. https://t.co/ZFvUwgSgRM
ಈ ರೀತಿ ಜನರ ಬಳಿ ಟೆಸ್ಟ್ ನೆಪದಲ್ಲಿ ಸುಲಿಗೆ ಮಾಡುವುದು ಸರಿಯಲ್ಲ. ಹೀಗಾಗಿ, ಖಾಸಗಿ ಲ್ಯಾಬ್ಗಳಿಗೆ ಕಡಿವಾಣ ಹಾಕುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಬಗ್ಗೆ ಆದಷ್ಟು ಬೇಗ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡುವಂತೆಯೂ ತಿಳಿಸಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವ ಕ್ರಮ ಕೈಗೊಳ್ಳಲು ಸಾಧ್ಯ ಎಂಬುದನ್ನು ಅವಲೋಕಿಸಿ, ತಿಳಿಸುವುದಾಗಿ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.