• ಹೋಂ
 • »
 • ನ್ಯೂಸ್
 • »
 • Corona
 • »
 • ಕೊರೋನಾದಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲು ಮಾರ್ಗಸೂಚಿ ಸಿದ್ಧಮಾಡಲು ಸುಪ್ರೀಂಕೋರ್ಟ್ ಆದೇಶ

ಕೊರೋನಾದಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲು ಮಾರ್ಗಸೂಚಿ ಸಿದ್ಧಮಾಡಲು ಸುಪ್ರೀಂಕೋರ್ಟ್ ಆದೇಶ

ಸುಪ್ರೀಂ ಕೋರ್ಟ್​.

ಸುಪ್ರೀಂ ಕೋರ್ಟ್​.

ಮರಣ ಪ್ರಮಾಣ ಪತ್ರಗಳಲ್ಲಿ ಸಾವಿನ ದಿನಾಂಕ ಮತ್ತು ಕಾರಣವನ್ನು (ಕೋವಿಡ್‌ನಿಂದ ಆದದ್ದು ಎಂದು) ನಮೂದಿಸಬೇಕು ಎಂದು ಕೂಡ ನ್ಯಾಯಾಲಯ ಸೂಚಿಸಿದೆ.

 • Share this:

  ನವದೆಹಲಿ: ಕೋವಿಡ್‌ಗೆ ಬಲಿಯಾದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಕೃಪಾನುದಾನ ನೀಡುವ ಸಂಬಂಧ ಮಾರ್ಗಸೂಚಿ ರೂಪಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎನ್‌ಡಿಎಂಎ) ಸುಪ್ರೀಂಕೋರ್ಟ್‌ ಬುಧವಾರ ಆದೇಶಿಸಿದೆ. ಕೃಪಾನುದಾನದ ಮೊತ್ತ ಎಷ್ಟು ಇರಬೇಕು ಎಂದು ನಿರ್ಧರಿಸುವುದು ಎನ್‌ಡಿಎಂಎಗೆ ಬಿಟ್ಟದ್ದು ಎಂದು ನ್ಯಾಯಾಲಯ ಇದೇ ಸಂದರ್ಭದಲ್ಲಿ ತಿಳಿಸಿತು. ಅಲ್ಲದೆ ಮಾರ್ಗಸೂಚಿಗಳನ್ನು 6 ತಿಂಗಳೊಳಗೆ ಜಾರಿಗೆ ತರಬೇಕು ಎಂದು ಕೂಡ ಅದು ಸೂಚಿಸಿತು.


  ವಿಪತ್ತು ನಿರ್ವಹಣಾ ಕಾಯಿದೆಯ ಸೆಕ್ಷನ್ 12ರ ಅಡಿ ಕೃಪಾನುದಾನ ಒದಗಿಸುವುದು ಸೇರಿದಂತೆ ಕನಿಷ್ಠ ಮಾನದಂಡಗಳ ಪರಿಹಾರಕ್ಕಾಗಿ ಮಾರ್ಗಸೂಚಿ ರೂಪಿಸುವುದು ಕಡ್ಡಾಯವಾಗಿದೆ ಮತ್ತು ಅದು ವಿವೇಚನಾಧಿಕಾರವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಅದನ್ನು ಮಾಡಲು ವಿಫಲವಾದಾಗ ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ತನ್ನ ಕೆಲಸ ನಿರ್ವಹಿಸಲು ವಿಪತ್ತು ಪ್ರಾಧಿಕಾರ ವಿಫಲವಾದಂತೆ ಎಂದು ನ್ಯಾಯಾಲಯ ಹೇಳಿದೆ.


  ಮರಣ ಪ್ರಮಾಣ ಪತ್ರಗಳಲ್ಲಿ ಸಾವಿನ ದಿನಾಂಕ ಮತ್ತು ಕಾರಣವನ್ನು (ಕೋವಿಡ್‌ನಿಂದ ಆದದ್ದು ಎಂದು) ನಮೂದಿಸಬೇಕು ಎಂದು ಕೂಡ ನ್ಯಾಯಾಲಯ ಸೂಚಿಸಿದೆ. ಕುಟುಂಬಸ್ಥರಿಗೆ ತೃಪ್ತಿ ಇಲ್ಲದಿದ್ದರೆ ಸಾವಿನ ಕಾರಣವನ್ನು ಸರಿಪಡಿಸುವ ಸೌಲಭ್ಯವೂ ಇರುತ್ತದೆ ಎಂದು ನ್ಯಾಯಾಲಯ ಹೇಳಿದೆ.


  ಇದನ್ನು ಓದಿ: ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ವಿಜಯೇಂದ್ರ ಕಣ್ಣು?


  ಕೋವಿಡ್ ರೋಗದಿಂದ ಸಾವನ್ನಪ್ಪಿದವರು ಮತ್ತು ಮ್ಯುಕೊರ್‌ಮೈಕೋಸಿಸ್‌ ಸೇರಿದಂತೆ ಕೊರೊನೋತ್ತರ ಬಿಕ್ಕಟ್ಟಿನಿಂದ ತೊಂದರೆ ಅನುಭವಿಸಿದ ಕುಟುಂಬ ಸದಸ್ಯರಿಗೆ ರೂ 4 ಲಕ್ಷ ಕೃಪಾನುದಾನ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಅಶೋಕ್‌ ಭೂಷಣ್‌ ಮತ್ತು ಎಂ ಆರ್‌ ಶಾ ಅವರ ನೇತೃತ್ವದ ಪೀಠ ಈ ತೀರ್ಪು ನೀಡಿದೆ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

  Published by:HR Ramesh
  First published: