ವಿಚಾರಣಾಧೀನ ಕೈದಿಗಳಿಗೆ ತಾತ್ಕಾಲಿಕ ರಿಲೀಫ್; ಕೊರೋನಾ ಹಿನ್ನೆಲೆ ರಜೆ ನೀಡಲು ಸುಪ್ರೀಂ ಆದೇಶ

ವಿಚಾರಣಾಧೀನ ಕೈದಿಗಳಿಗೆ ರಜೆ ನೀಡಿ, ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಪರಮಾಧಿಕಾರವನ್ನು ಸುಪ್ರೀಂ ಕೋರ್ಟ್​ ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ (ಮಾ. 24): ಕೊರೋನಾ ವೈರಸ್​ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಎಲ್ಲೆಡೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕೊರೋನಾ ವೈರಸ್​ ಭೀತಿಯಿಂದ ಜೈಲುಗಳಲ್ಲಿರುವ ಕೈದಿಗಳಿಗೂ ಬಿಗ್ ರಿಲೀಫ್ ಸಿಕ್ಕಿದ್ದು, ವಿಚಾರಣಾಧೀನ ಕೈದಿಗಳಿಗೆ ರಜೆ ನೀಡುವಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶ ನೀಡಿದೆ.

ದೇಶದ ಜೈಲುಗಳಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ರಜೆ ನೀಡುವಂತೆ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಸ್ಥರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಜೈಲುಗಳ ಸೆಲ್​ಗಳಲ್ಲಿ ಹೆಚ್ಚು ಜನ‌ ಸೇರುವುದರಿಂದ ಕೊರೋನಾ ವೈರಸ್ ಹರಡಬಹುದು ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕೈದಿಗಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: 8 ತಿಂಗಳ ಗೃಹಬಂಧನದಿಂದ ಕೊನೆಗೂ ಮುಕ್ತಿ; ಜಮ್ಮು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಬಿಡುಗಡೆ

ಆದರೆ, ವಿಚಾರಣಾಧೀನ ಕೈದಿಗಳಿಗೆ ರಜೆ ನೀಡಿ, ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಪರಮಾಧಿಕಾರವನ್ನು ಸುಪ್ರೀಂ ಕೋರ್ಟ್​ ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ. ನಿನ್ನೆಯಷ್ಟೇ ಮುನ್ನೆಚ್ಚರಿಕಾ ಕ್ರಮವಾಗಿ ತಿಹಾರ್ ಜೈಲಿನಲ್ಲಿರುವ 3,000 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ನಿರ್ಧರಿಸುವುದಾಗಿ ಘೋಷಿಸಲಾಗಿತ್ತು.

3 ಸಾವಿರ ಕೈದಿಗಳಲ್ಲಿ 1,500 ಜನರನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ತೀರ್ಮಾನಿಸಲಾಗಿತ್ತು. ಉಳಿದ ವಿಚಾರಣಾಧೀನ ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಕೈದಿಗಳಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ.

ಇದನ್ನೂ ಓದಿ: ಕೊರೋನಾ ವೈರಸ್​ಗೆ ಜೀವವೇ ಇಲ್ಲ, ಹೀಗಾಗಿ ಅದನ್ನು ಕೊಲ್ಲೋದು ಕಷ್ಟ!; ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್​ ವಿಚಾರ
First published: