‘ಪದವಿ ಪರೀಕ್ಷೆಯಿಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಪಾಸ್​​ ಮಾಡಲು ಸಾಧ್ಯವಿಲ್ಲ‘ - ಸುಪ್ರೀಂಕೋರ್ಟ್​

ಇನ್ನು, ಪದವಿ ಪರೀಕ್ಷೆಗಳನ್ನು ನಡೆಸಲು ಸೆಪ್ಟೆಂಬರ್​​​ 30ರ ಗಡುವೇ ಅಂತಿಮವಲ್ಲ. ಬದಲಿಗೆ ಸೆಪ್ಟೆಂಬರ್ 30ರ ಗಡುವನ್ನು ವಿಸ್ತರಿಸಲು ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಬಹುದು ಎಂದು ತೀರ್ಪು ನೀಡಿದೆ.

ಸುಪ್ರೀಂಕೋರ್ಟ್​.

ಸುಪ್ರೀಂಕೋರ್ಟ್​.

 • Share this:
  ನವದೆಹಲಿ(ಆ.28): ಪರೀಕ್ಷೆಯಿಲ್ಲದೇ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಪಾಸ್​​ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಇಂದು ಸೆಪ್ಟೆಂಬರ್ 30ನೇ ತಾರೀಕಿನೊಳಗೆ ನಡೆಸಬೇಕಾದ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಮಾಡಿತು. ಈಗ ಇದರ ಕುರಿತು ವಿಚಾರಣೆ ಮಾಡಿ ತೀರ್ಪು ನೀಡಿರುವ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಪೀಠ ಹೀಗೆ ತಿಳಿಸಿದೆ.

  ಯುಜಿಸಿ ಆದೇಶದಂತೆಯೇ ಅಂತಿಮ ವರ್ಷದ ವಿದ್ಯಾರ್ಥಿಗಳ ಪದವಿ ಪರೀಕ್ಷೆ ನಡೆಯಲಿದೆ. ಯಾವುದೇ ರಾಜ್ಯಕ್ಕೂ ಯುಜಿಸಿ ಆದೇಶವನ್ನು ಮೀರಿ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಿ ಉತ್ತೀರ್ಣಗೊಳಿಸುವ ಅಧಿಕಾರವಿಲ್ಲ. ಪದವಿ ಪರೀಕ್ಷೆ ಮುಂದೂಡುವ ವಿಚಾರದಲ್ಲಿ ಸಂಬಂಧಪಟ್ಟ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ(ಎಸ್‌ಡಿಎಂಎ) ನಿರ್ಧಾರವೇ ಮೇಲುಗೈ ಸಾಧಿಸುತ್ತದೆ ಎಂದು ಕೋರ್ಟ್​ ಹೇಳಿದೆ.

  ಇನ್ನು, ಪದವಿ ಪರೀಕ್ಷೆಗಳನ್ನು ನಡೆಸಲು ಸೆಪ್ಟೆಂಬರ್​​​ 30ರ ಗಡುವೇ ಅಂತಿಮವಲ್ಲ. ಬದಲಿಗೆ ಸೆಪ್ಟೆಂಬರ್ 30ರ ಗಡುವನ್ನು ವಿಸ್ತರಿಸಲು ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಬಹುದು ಎಂದು ತೀರ್ಪು ನೀಡಿದೆ.

  ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು. ಪರೀಕ್ಷೆಗಳು ನಡೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಯುಜಿಸಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು.

  ಆದರೆ, ಕೊರೋನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್/ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿಂದಿನ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಲು ಯುಜಿಸಿಗೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿತ್ತು.

  ಇದನ್ನೂ ಓದಿ: Coronavirus Update: ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಒಂದೇ ದಿನದಲ್ಲಿ 77,266 ಕೇಸ್​​ ಪತ್ತೆ

  “ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆ ಅಧಿಕಾರ ಯುಜಿಸಿಗೆ ಮಾತ್ರ ಇದೆ” ಎಂದು ಯುಜಿಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಗಸ್ಟ್ 8 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.
  Published by:Ganesh Nachikethu
  First published: