HOME » NEWS » Coronavirus-latest-news » SURESH KUMAR PRESS CONFERENCE KARNATAKA SSLC AND PUC EXAM DATES ANNOUNCED SCT

ಕರ್ನಾಟಕದಲ್ಲಿ ಜೂನ್ 18ಕ್ಕೆ ಪಿಯುಸಿ, ಜೂನ್ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ

Karnataka SSLC Exam Dates: ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

Sushma Chakre | news18-kannada
Updated:May 18, 2020, 3:23 PM IST
ಕರ್ನಾಟಕದಲ್ಲಿ ಜೂನ್ 18ಕ್ಕೆ ಪಿಯುಸಿ, ಜೂನ್ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ
ಸಚಿವ ಸುರೇಶ್ ಕುಮಾರ್
  • Share this:
ಬೆಂಗಳೂರು (ಮೇ 18): ಕರ್ನಾಟಕದಲ್ಲಿ ಲಾಕ್​ಡೌನ್​ ಘೋಷಿಸಿದ್ದರಿಂದ ಪಿಯುಸಿ, ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಎಸ್​ಎಸ್ಎಲ್​ಸಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

ಈಗಾಗಲೇ ಚಂದನ ವಾಹಿನಿಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ಆರಂಭಿಸಲಾಗಿದೆ. ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನ ಅಂತರವನ್ನು ನೀಡಲಾಗಿದೆ. ಸದ್ಯದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1 ತಿಂಗಳು ಮುಂಚಿತವಾಗಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಅರ್ಧ ದಿನದಲ್ಲೇ ದಾಖಲೆಯ 84 ಹೊಸ ಪ್ರಕರಣಗಳು; ಕರ್ನಾಟಕಕ್ಕೆ ‘ಮಹಾ’ ಗಂಡಾಂತರ

ಜುಲೈ 4ಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಗಿಯಲಿದ್ದು, ಮೌಲ್ಯಮಾಪನಕ್ಕೆ 1 ತಿಂಗಳು ಬೇಕಾಗುತ್ತದೆ. ನಂತರ ಪೂರಕ ಪರೀಕ್ಷೆ ನಡೆಸಲಾಗುವುದು. ಶಾಲೆಗಳ ಪ್ರಾರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಡೈಸ್ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ, ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸರ್ಕಾರ ಸೂಚಿಸಿದೆ. ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.
First published: May 18, 2020, 3:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading