ಬೆಂಗಳೂರು (ಜುಲೈ 17); ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ತನಗೂ ಸೋಂಕು ತಗುಲಿರಬಹುದು ಎಂಬ ಅನುಮಾನದ ಮೇಲೆ ಭಾಸ್ಕರ್ ರಾವ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ.
ನಗರದಲ್ಲಿ ಕೊರೋನಾ ಸೊಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಇದೇ ಕಾರಣಕ್ಕೆ ಅವರ ಕಾರ್ ಚಾಲಕನಿಗೆ ಸೋಂಕು ತಗುಲಿದೆ. ಹೀಗಾಗಿ ಅವರಿಗೂ ಸೋಂಕು ತಗುಲಿರುವ ಸಾಧ್ಯತೆ ಇದ್ದು ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎಂದು ಪೊಲೀಸ್ ಇಲಾಖೆ ಮೂಲಗಳು ನ್ಯೂಸ್18ಗೆ ಮಾಹಿತಿ ನೀಡಿವೆ.
ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 4,169 ಹೊಸ ಕೊರೋನಾ ಕೇಸುಗಳು ಪತ್ತೆಯಾಗಿವೆ. ಬೆಂಗಳೂರೊಂದರಲ್ಲೇ 2,344 ಕೊರೋನಾ ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕರ್ನಾಟಕದ ಒಟ್ಟು ಸೋಂಕಿತರ ಸಂಖ್ಯೆ 51,422ಕ್ಕೆ ಏರಿಕೆಯಾಗಿವೆ.
ಸದ್ಯಕ್ಕೆ 30,655 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 1263 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಇದುವರೆಗೂ ಒಟ್ಟಾರೆ 19,729 ರೋಗಿಗಳು ಡಿಸ್ಚಾರ್ಜ್ ಆದಂತಾಗಿದೆ. ಅಲ್ಲದೆ, ನಿನ್ನೆ ಒಂದೇ ದಿನ ಕೊರೋನಾದಿಂದಾಗಿ 104 ರೋಗಿಗಳು ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ 1032 ರೋಗಿಗಳು ಕೊರೋನಾಗೆ ಬಲಿಯಾದಂತಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್‌ಬುಲೆಟಿನ್‌ನಲ್ಲಿ ಅಂಕಿಅಂಶ ನೀಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ