ಕೋವಿಡ್ ಎರಡನೇ ಅಲೆ ಹಿನ್ನಲೆ ವಿಧಿಸಿದ್ದ ರಾಜ್ಯದ್ಯಾಂತ ವಿಧಿಸಿದ್ದ ಲಾಕ್ಡೌನ್ ಅನ್ನು ಸಂಪೂರ್ಣವಾಗಿ ತೆಗೆಯಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿರುವ ಹಿನ್ನಲೆ ನಾಳೆಯಿಂದಲೇ ರಾಜ್ಯದಲ್ಲಿ ಈ ಮುಂಚೆ ವಿಧಿಸಿರುವ ಲಾಕ್ಡೌನ್ ನಿಯಮವನ್ನು ಸಡಿಲಿಕೆ ಮಾಡಲಾಗುವುದು. ಇದರ ಜೊತೆಗೆ ಯಾವುದೇ ನಿರ್ಬಂಧವನ್ನು ಮುಂದುವರೆಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಗಮನಾರ್ಹವಾಗಿ ಕಡಿಮೆಯಾಗಿದೆ, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಈ ಹಿನ್ನಲೆ ಲಾಕ್ಡೌನ್ ಮುಂದುವರೆಸುವ ಅವಶ್ಯಕತೆ ಇಲ್ಲ ಎಂಬ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ವರದಿ ನೀಡಿದೆ.
ಈ ವರದಿ ಅನ್ವಯ ರಾಜ್ಯದಲ್ಲಿ ಕೋವಿಡ್ ಹಿನ್ನಲೆ ಹೇರಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ವಿವಿಧ ಇಲಾಖೆಗಳು ಕೂಡ ಶಿಫಾರಸ್ಸು ಮಾಡಿದ್ದವು. ಈ ಕುರಿತು ಚರ್ಚೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ನಾಳೆ ರಾತ್ರಿ ಅಂದರೆ ಜೂ. 20ರಿಂದ ರಾತ್ರಿ ಕರ್ಫ್ಯೂ ತೆಗೆದುಹಾಕಲು ನಿರ್ಧರಿಸಲಾಗಿದೆ.
ಕೋವಿಡ್ನಿಂದ ತೀವ್ರವಾಗಿ ತತ್ತರಿಸಿದ ರಾಜ್ಯಗಳಲ್ಲಿ ತೆಲಂಗಾಣ ಕೂಡ ಒಂದಾಗಿತ್ತು. ತೆಲಂಗಾಣದಲ್ಲಿ ಸದ್ಯ ಕೋವಿಡ್ ಪಾಸಿಟಿವಿಟಿ ರೇಟ್ 1. 14ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1.400 ಹೊಸ ಸೋಂಕಿನ ಪ್ರಕರಣ ದಾಖಲಾಗಿದ್ದು, 12 ಸಾವು ಸಂಭವಿಸಿದೆ,
ಇತ್ತೀಚೆಗಷ್ಟೇ ತೆಲಂಗಾಣ ಸರ್ಕಾರ ಜೂನ್ 10ರಿಂದ ಜೂನ್ 20ರವರೆಗೆ ಲಾಕ್ಡೌನ್ ವಿಸ್ತರಿಸಿ ಆದೇಶ ನೀಡಿತ್ತು.
ರಾಜ್ಯದಲ್ಲಿ ಸೋಂಕು ಗಣನೀಯವಾಗಿ ಕಡಿಮೆಯಾಗಿರುವ ಹಿನ್ನಲೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಗೆ ಶಾಲೆಗಳನ್ನು ಪುನರ್ ಆರಂಭಿಸುವಂತೆ ನಿರ್ದೇಶನ ಕೂಡ ನೀಡಿದೆ.
ರಾಜ್ಯದಲ್ಲಿ ಸೋಂಕಿನ ಪ್ರಕರಣ ಇಳಿಕೆ ಆಗಿದೆ ಎಂದ ಮಾತ್ರಕ್ಕೆ ಜನರು ಮೈ ಮರೆಯಬಾರದು. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಬೇಕು ಎಂದು ತಿಳಿಸಿದೆ.
ಕೇಂದ್ರದಿಂದ ಎಚ್ಚರಿಕೆ
ವಿವಿಧ ರಾಜ್ಯ ಮತ್ತು ಕೇಂದ್ರಾಡಳಿ ಪ್ರದೇಶಗಳಲ್ಲಿ ಸೋಂಕು ಇಳಿಕೆಯಾಗುತ್ತಿರುವ ಹಿನ್ನಲೆ ಅನ್ಲಾಕ್ ಮೊರೆ ಹೋಗುತ್ತಿರುವ ದೇಶದ ವಿವಿಧ ರಾಜ್ಯಗಳಿಗೆ ಇಂದು ಕೇಂದ್ರ ಸರ್ಕಾರ ಕಿವಿ ಮಾತು ಹೇಳಿದೆ. ಲಾಕ್ಡೌನ್ ಸಡಿಲಿಕೆ ಪ್ರಕ್ರಿಯೆಯನ್ನು ಎಚ್ಚರಿಕೆಯ ಮಾಪನಾಂಕ ಮೂಲಕ ನಿರ್ಣಯಿಸಲಾಗಿದೆ ಎಂಬುದನ್ನು ಖಾತ್ರಪಡಿಸಿಕೊಳ್ಳಬೇಕು. ಅಲ್ಲದೇ ಕೋವಿಡ್ ನಿಯಮವಾಳಿಗಳನ್ನು ಚಾಚೂತಪ್ಪದೇ ಅನುಸರಿಸಬೇಕು. ಮಾರ್ಕೆಟ್ ಸೇರಿದಂತೆ ವಿವಿಧೆಡೆ ಜನಸಂದಣಿಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಜಯ್ ತಿಳಿಸಿದ್ದಾರೆ.
ಲಾಕ್ಡೌನ್ ಸಡಿಲಿಕೆ ಬಳಿಕವೂ ಕೋವಿಡ್ ನಿಯಮಾವಳಿ ಪಾಲನೆ ಪರೀಕ್ಷೆ, ಪತ್ತೆ ಹಚ್ಚುವಿಕೆ, ಚಿಕಿತ್ಸೆ, ವಾಕ್ಸಿನ್ ಐದು ತಂತ್ರಗಳನ್ನು ಅನುಸರಿಸುವುದು ಮುಖ್ಯ ಎಂದು ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ