ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಸಮಾಧಾನಕರ ಸಂಗತಿ. ಈಗ 24 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಇದೆ. ಮೆಡಿಕಲ್ ಕಾಲೇಜುಗಳಲ್ಲೂ ಬೆಡ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಮುಂದುವರಿದಿದೆ. ಖಾಸಗಿ ಆಸ್ಪತ್ರೆಗಳಿಗೆ ಸುಮಾರು 200 ವೆಂಟಿಲೇಟರ್ ನೀಡಿದ್ದೇವೆ. ಆಕ್ಸಿಜನ್ ಉತ್ಪಾದನೆಗೆ ಸಹಾಯಧನ ನೀಡುತ್ತಿದ್ದೇವೆ. ಆಕ್ಸಿಜನ್ ಬೇಡಿಕೆ ಸರಿದೂಗಿಸಲು ಮೂರು ಅಂಶಗಳ ಕಾರ್ಯತಂತ್ರ, ಲಿಕ್ವಿಡ್ ಆಕ್ಸಿಜನ್ ಉತ್ಪಾದನೆ, ಆಕ್ಸಿಜನ್ ಕಾನ್ಸಂಟ್ರೇಟರ್ ಹೆಚ್ಚಳ ಹಾಗೂ ಕೇಂದ್ರ ಸರ್ಕಾರ ಆಕ್ಸಿಜನ್ ಪೂರೈಕೆ ಹೆಚ್ಚಿಳ ಮಾಡಿದೆ. ಇತರೆ ರಾಜ್ಯಗಳಿಂದಲೂ ಆಕ್ಸಿಜನ್ ಪಡೆಯುವ ಪ್ರಯತ್ನ ನಡೆದಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ರಾಜ್ಯದಲ್ಲಿ 127 ಆಕ್ಸಿಜನ್ ತಯಾರಿಕೆ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 27 ಕೇಂದ್ರ ಸರ್ಕಾರ ನೀಡಿದೆ. ರಾಜ್ಯ ಸರ್ಕಾರ ಅನುದಾನದಲ್ಲಿ ಘಟಕ ಸ್ಥಾಪನೆಯಾಗಿವೆ. ಇನ್ನುಳಿದ ಕೆಲವು ಖಾಸಗಿ ಕಂಪನಿಗಳು ಸಿಎಸ್‌ಆರ್ ಫಂಡ್‌ನಲ್ಲಿ ಸ್ಥಾಪನೆಯಾಗಿವೆ. ಆಕ್ಸಿಜನ್ ಬಸ್ ವ್ಯವಸ್ಥೆ ಮಾಡಿದ್ದೇವೆ. ಹೆಚ್ಚುವರಿ ಆಕ್ಸಿಜನ್ ಸಿಲಿಂಡರ್ ಪಡೆಯಲಾಗಿದೆ. 3 ಸಾವಿರ ಆಕ್ಸಿಜನ್ ಕಾನ್ಸಂಟ್ರೇಟರ್ ತರಲಾಗಿದೆ. ಇನ್ನು 7 ಸಾವಿರ ಕಾನ್ಸಂಟ್ರೇಟರ್ ಹಂಚಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈವರೆಗೆ 1.1ಕೋಟಿ ಡೋಸ್ ಲಸಿಕೆಯನ್ನು ರಾಜ್ಯಕ್ಕೆ ಭಾರತ ಸರ್ಕಾರ ಒದಗಿಸಿದೆ. ರಾಜ್ಯ ಸರ್ಕಾರ 3 ಕೋಟಿ ಡೋಸ್‌ಗಾಗಿ ಆದೇಶ ಮಾಡಿದೆ. ಅದರಲ್ಲಿ 1ಕೋಟಿ ಕೋವ್ಯಾಕ್ಸಿನ್ ಇದೆ. ವ್ಯಾಕ್ಸಿನ್ ಖರೀದಿಗೆ ಗ್ಲೋಬಲ್ ಟೆಂಡರ್ ಕರೆಯಲಾಗುತ್ತಿದೆ. ಕೋವ್ಯಾಕ್ಸಿನ್ ಪಡೆದ 5 ಲಕ್ಷ ಫಲಾನುಭವಿಗಳಿದ್ದಾರೆ. ಮೊದಲ ಡೋಸ್ ಪಡೆದವರು ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿದ್ದಾರೆ. ಹೀಗಾಗಿ ಎರಡನೇ ಡೋಸ್ ನೀಡಬೇಕಿದೆ. ಆದ್ದರಿಂಧ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಂಚಿಕೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಎಂದು ಸಿಎಂ ಬಿಎಸ್ವೈ ಸ್ಪಷ್ಟಪಡಿಸಿದರು.
ಇದನ್ನು ಓದಿ: PM Narendra Modi: ಮೇ 20ರಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿರುವ ಪ್ರಧಾನಿ ಮೋದಿ
ರೆಮಿಡಿಸಿವಿರ್ ಇಂಜೆಕ್ಷನ್ ಪೂರೈಕೆ ಮಾಡಲು ವಿಳಂಬವಾದ ಕಂಪನಿಗಳಿಗೆ ನೋಟಿಸ್ ನೀಡಲಾಗಿದೆ. ರಾಜ್ಯದಲ್ಲಿ ರೆಮಿಡಿಸಿವಿರ್ ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಮೂರನೇ ಅಲೆ ನಿಯಂತ್ರಣಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ವೆಲ್ಲೂರಿನ ಪ್ರೊ. ಗಗನದೀಪ್ ಕಾಮ್ ಅವರನ್ನು ಲಸಿಕೆ ಕಾರ್ಯತಂತ್ರದ ಸಲಹೆಗಾರರಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ