• ಹೋಂ
  • »
  • ನ್ಯೂಸ್
  • »
  • Corona
  • »
  • TET Exam: ಕೋವಿಡ್​ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಾಳೆ ರಾಜ್ಯದಲ್ಲಿ ಟಿಇಟಿ ಪರೀಕ್ಷೆ

TET Exam: ಕೋವಿಡ್​ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಾಳೆ ರಾಜ್ಯದಲ್ಲಿ ಟಿಇಟಿ ಪರೀಕ್ಷೆ

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯವಾಗಿದೆ. ಅಭ್ಯರ್ಥಿಗಳು ನೀರಿನ ಬಾಟಲ್,‌ಆಹಾರದ ಡಬ್ಬಿ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.

  • Share this:

    ಬೆಂಗಳೂರು (ಆ. 21): ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ನಾಳೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಲಿದೆ.  1 ಲಕ್ಷದ 51 ಸಾವಿರದ 95 ವಿದ್ಯಾರ್ಥಿಗಳು ಪರೀಕ್ಷೆಗೆ ಎದುರಿಸಲಿದ್ದಾರೆ. ರಾಜ್ಯದಲ್ಲೆಡೆ ಸೋಂಕಿನ ಆತಂಕ ಇರುವ ಹಿನ್ನಲೆ ಪರೀಕ್ಷೆ ಕೋವಿಡ್​ ಸುರಕ್ಷಾತಾ ಕ್ರಮದ ಮೂಲಕ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಿದ್ಧತೆ ನಡೆಸಿದೆ. ಈಗಾಗಲೇ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ಯಾನಿಟೈಜ್​ ಮಾಡಲಾಗಿದ್ದು, ವಿದ್ಯಾರ್ಥಿಗಳು ಈ ಸಂಬಂದ ಮುನ್ನೆಚ್ಚರಿಕಾ ಕ್ರಮ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಕೇರಳ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕೋವಿಡ್​ ನೆಗಟಿವ್ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.


    ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳೆ ಕೈ ಗೊಂಡ ಮುಂಜಾಗ್ರತಾ ಕ್ರಮಗಳನ್ನು ಟಿಇಟಿ ಪರೀಕ್ಷೆ ವೇಳೆ ಕೂಡ ನಡೆಸಲಾಗಿದ್ದು, ಕೋವಿಡ್​ ಲಕ್ಷಣಗಳಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ರಾಜ್ಯದ 34 ಜಿಲ್ಲಾ ಕೇಂದ್ರದ 634 ಪರೀಕ್ಷಾ ಕೇಂದ್ರದಲ್ಲಿ ಟಿಇಟಿ ಪರೀಕ್ಷೆ ನಡೆಯಲಿದ್ದು, ಒಂದು ಡೆಸ್ಕ್​ಗೆ ಕೇವಲ ಒಬ್ಬ ವಿದ್ಯಾರ್ಥಿಗಳಿಗೆ ಮಾತ್ರ ಕೂರಲು ಅವಕಾಶ ಮಾಡಲಾಗಿದೆ.


    ಇದನ್ನು ಓದಿ: ಇಡಿ ಸಮನ್ಸ್​ ಜಾರಿ ಬೆನ್ನಲ್ಲೇ ದೆಹಲಿಗೆ ಹಾರಿದ ಜಮೀರ್​


    ಬೆಳಗ್ಗೆ 9. 30 ರಿಂದ 12 ಗಂಟೆ ವರೆಗೆ ಮೊದಲ ಪತ್ರಿಕೆ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 2. 30ರಿಂದ 4 ಗಂಟೆಗೆ ಎರಡನೇ ಪತ್ರಿಕೆಗೆ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯವಾಗಿದೆ. ಅಭ್ಯರ್ಥಿಗಳು ನೀರಿನ ಬಾಟಲ್,‌ಆಹಾರದ ಡಬ್ಬಿ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.


    ಈಗಾಗಲೇ ಪರೀಕ್ಷಾ ಕೇಂದ್ರಗಳನ್ನ ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದೆ. ಜೊತೆಗೆ ಪರೀಕ್ಷೆಗೆ ಮುನ್ನ ಎರಡು ಅವಧಿಗಳಲ್ಲೂ ಕೇಂದ್ರದಲ್ಲಿ ಸ್ಯಾನಿಟೈಜ್ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದ ದ್ವಾರದ ಬಳಿ ಅಭ್ಯರ್ಥಿಗಳ ಆರೋಗ್ಯ ತಪಾಸಣಾ ಕೌಂಟರ್ ನಿರ್ಮಾಣ ಮಾಡಲಾಗಿದ್ದು, ಅಭ್ಯರ್ಥಿಗಳನ್ನ ಸ್ಕ್ರೀನಿಂಗ್ ಮಾಡಿ ಒಳ ಬಿಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:Seema R
    First published: