COVID-19 Second Wave: ಮೊದಲ ಅಲೆಗಿಂತ 2ನೇ ಅಲೆ 5 ಪಟ್ಟು ವೇಗವಾಗಿ ರೂಪಾಂತರಿ ಕೊರೋನಾ ವೈರಾಣು ಹಬ್ಬಿತ್ತು: ಸಚಿವ ಕೆ.ಸುಧಾಕರ್

ಚಾಮರಾಜನಗರದಲ್ಲಿ ನಡೆದ ದುರಂತ ಅತ್ಯಂತ ದುರದೃಷ್ಟಕರ. ನ್ಯಾಯಮೂರ್ತಿ ಎ.ಬಿ. ಪಾಟೀಲ್ ಅವರು ಸಮಿತಿ ವರದಿಯನ್ನು ಸರ್ಕಾರ ನಿರೀಕ್ಷಿಸುತ್ತಿದ್ದು ವರದಿ ಸರ್ಕಾರದ ಕೈ ಸೇರಿದ ಕೂಡಲೇ ಸೂಕ್ತ ಕ್ರಮ ಜರುಗಿಸಲಾಗುವುದು. ನೆನ್ನೆ ಮಾನ್ಯ ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದಂತೆ ಸರ್ಕಾರ ಈಗಾಗಲೇ 200 ಕೋಟಿ ರೂ. ಮೀಸಲಿಟ್ಟಿದ್ದು ಶೀಘ್ರದಲ್ಲೇ ಪ್ರತಿಯೊಬ್ಬ ಮೃತ ಕುಟುಂಬಕ್ಕೆ 1 ಲಕ್ಷ ರೂ .ಪರಿಹಾರ ತಲುಪಿಸಲಾಗುವುದು ಎಂದರು.

ಆರೋಗ್ಯ ಸಚಿವ ಕೆ ಸುಧಾಕರ್.

ಆರೋಗ್ಯ ಸಚಿವ ಕೆ ಸುಧಾಕರ್.

  • Share this:
ಬೆಂಗಳೂರು: ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕೋವಿಡ್ ಕುರಿತು ದೀರ್ಘ ಚರ್ಚೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Health Minister Sudhakar) ಅವರು ಉತ್ತರ ನೀಡಿದರು. ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 413, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 312 ಸೇರಿ ಒಟ್ಟು 725 ಐಸಿಯು ಹಾಸಿಗೆ ಇತ್ತು. ಮೊದಲ ಅಲೆಯ ವೇಳೆಗೆ ಇದನ್ನು 858 ಕ್ಕೆ ಹಾಗೂ ಎರಡನೇ ಅಲೆಯ ವೇಳೆಗೆ 1,961 ಕ್ಕೆ ಏರಿಸಲಾಯಿತು. ಆಗಸ್ಟ್ ವೇಳೆಗೆ 3,877 ಹಾಸಿಗೆ ಲಭ್ಯವಿದೆ. ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 4,260, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 587 ಸೇರಿ ಒಟ್ಟು 4,847 ಆಕ್ಸಿಜನ್ ಹಾಸಿಗೆ ಇತ್ತು. ಮೊದಲ ಅಲೆಯ ವೇಳೆಗೆ ಇದನ್ನು 5,387 ಕ್ಕೆ ಹಾಗೂ ಎರಡನೇ ಅಲೆಯ ವೇಳೆಗೆ 25,184 ಗೆ ಏರಿಸಲಾಯಿತು. ಆಗಸ್ಟ್ ವೇಳೆಗೆ 28,447 ಆಕ್ಸಿಜನ್ ಹಾಸಿಗೆ ಲಭ್ಯವಿದೆ ಎಂದರು.

ಮೊದಲ ಅಲೆಯಲ್ಲಿ ಗರಿಷ್ಠ ಒಂದು ದಿನಕ್ಕೆ ದಾಖಲಾದ ಪ್ರಕರಣಗಳನ್ನು ಗಮನಿಸಬೇಕು. ಆಗ 2020 ರ ಅಕ್ಟೋಬರ್ 7 ರಂದು ದಾಖಲಾದ ಪ್ರಕರಣ 10,947. ಎರಡನೇ ಅಲೆಯಲ್ಲಿ 2021 ರ ಮೇ 5 ರಂದು ದಾಖಲಾದ ಪ್ರಕರಣ 50,112. ಅಂದರೆ ಮೊದಲನೇ ಅಲೆಗಿಂತ ಎರಡನೇ ಅಲೆ 5 ಪಟ್ಟು ಹೆಚ್ಚು ವೇಗವಾಗಿತ್ತು. ರೂಪಾಂತರಗೊಂಡ ವೈರಾಣುವಿನಿಂದಲೂ ಸಮಸ್ಯೆ ಹೆಚ್ಚಾಗಿತ್ತು ಎಂಬ ವಾಸ್ತವವನ್ನು ಸಚಿವರು ವಿವರಿಸಿದ್ದಾರೆ.

ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 9778, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ31,600 ಸೇರಿ ಒಟ್ಟು 41,378 ಹಾಸಿಗೆ ಇತ್ತು. ಎರಡನೇ ಅಲೆಯ ವೇಳೆಗೆ 45,966 ಗೆ ಏರಿಸಲಾಯಿತು. ಆಗಸ್ಟ್ ವೇಳೆಗೆ 50,629 ಹಾಸಿಗೆ ಲಭ್ಯವಿದೆ. ಮೊದಲ ಅಲೆಗೆ ಮುನ್ನ ಆರೋಗ್ಯ ಇಲಾಖೆಯಡಿ 2,180 ಆಕ್ಸಿಜನ್ ಸಿಲಿಂಡರ್ ಇತ್ತು. ಮೊದಲ ಅಲೆಯಲ್ಲಿ 6,530, ಎರಡನೇ ಅಲೆಯ ವೇಳೆಗೆ 9,928 ಹಾಗೂ ಪ್ರಸ್ತುತ 13,588 ಸಿಲಿಂಡರ್ ದೊರಕಿಸಿಕೊಡಲಾಗಿದೆ. ಮೊದಲ ಅಲೆಯ ವೇಳೆಗೆ 585 ಸಾಂದ್ರಕ ಇದ್ದು, ಎರಡನೇ ಅಲೆಯ ವೇಳೆಗೆ 5,435, ಪ್ರಸ್ತುತ 6,511 ಲಭ್ಯವಾಗಿಸಲಾಗಿದೆ. ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 292 ಟನ್, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 28 ಟನ್ ಸೇರಿ ಒಟ್ಟು 320 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯವಿತ್ತು. ಮೊದಲ ಅಲೆಯ ವೇಳೆಗೆ ಇದನ್ನು 500 ಟನ್ ಹಾಗೂ ಎರಡನೇ ಅಲೆಯ ವೇಳೆಗೆ 799 ಟನ್ ಗೆ ಏರಿಸಲಾಯಿತು. ಆಗಸ್ಟ್ ವೇಳೆಗೆ 1,207 ಟನ್ ಸಂಗ್ರಹಣಾ ಸಾಮರ್ಥ್ಯವಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ವೇಗವಾಗಿ ಲಸಿಕೆ ಹಂಚಿಕೆ

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ವೇಗವಾಗಿ ಜನರಿಗೆ ಲಸಿಕೆ ನೀಡಲಾಗಿದೆ. ಸೆ.24 ಕ್ಕೆ, 5,39,49,021 ಲಸಿಕೆ ನೀಡಲಾಗಿದೆ. ರಾಜ್ಯ ಸರ್ಕಾರ ಒಟ್ಟು 4,89,11,050 ಲಸಿಕೆ ಪಡೆದಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ 4,63,07,690 ಡೋಸ್ ಪೂರೈಕೆಯಾಗಿದೆ. ಆರೋಗ್ಯ ಸಿಬ್ಬಂದಿಗೆ ಮೊದಲ ಡೋಸ್ ನಲ್ಲಿ 84.9%, ಎರಡನೇ ಡೋಸ್ ನಲ್ಲಿ 71.5%, ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಡೋಸ್ ನಲ್ಲಿ 108%, ಎರಡನೇ ಡೋಸ್ ನಲ್ಲಿ 78.3%, 18-44 ವಯಸ್ಸಿನವರಿಗೆ ಮೊದಲ ಡೋಸ್ ನಲ್ಲಿ 63.9%, ಎರಡನೇ ಡೋಸ್ ನಲ್ಲಿ 16.3%, 45 ವಯಸ್ಸು ಮೇಲ್ಪಟ್ಟವರಲ್ಲಿ ಮೊದಲ ಡೋಸ್ ನಲ್ಲಿ 91.6%, ಎರಡನೇ ಡೋಸ್ ನಲ್ಲಿ 52.8% ಪ್ರಗತಿಯಾಗಿದೆ. ಒಟ್ಟು ಮೊದಲ ಡೋಸ್ 76.9%, ಎರಡನೇ ಡೋಸ್ ನಲ್ಲಿ 31.5% ಪ್ರಗತಿಯಾಗಿದೆ ಎಂದು ಹೇಳಿದರು.

2.75 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ 

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ 2.75 ಲಕ್ಷ ಕೊರೋನಾ ಸೋಂಕಿತರು ಉಚಿತ ಚಿಕಿತ್ಸೆ ಪಡೆದಿದ್ದಾರೆ. ಸ್ವಾತಂತ್ರ್ಯ ಬಂದು 7 ದಶಕಗಳಾದರೂ ದೇಶದ 90% ಜನರಿಗೆ ಆರೋಗ್ಯ ವಿಮೆ ಇರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್ ಯೋಜನೆ ಮೂಲಕ 10 ಕೋಟಿ ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆ ಯೋಜನೆ ತಂದಿದ್ದಾರೆ. ಇದು ವಿಶ್ವದ ಅತ್ಯಂತ ದೊಡ್ಡ ಆರೋಗ್ಯ ವಿಮೆ ಯೋಜನೆಯಾಗಿದ್ದು 50 ಕೋಟಿಗೂ ಹೆಚ್ಚು ಜನರಿಗೆ ಆರೋಗ್ಯ ಸೇವೆ ಖಾತ್ರಿ ಪಡಿಸಿದೆ. ಈ ಯೋಜನೆ 3 ಯಶಸ್ವಿ ವರ್ಷ ಪೂರೈಸಿದ್ದು, 2 ಕೋಟಿಗೂ ಹೆಚ್ಚು ಒಳರೋಗಿ ಚಿಕಿತ್ಸೆ ನೀಡಲಾಗಿದ್ದು, 25,000 ಕೋಟಿ ಮೌಲ್ಯದ ಚಿಕಿತ್ಸಾ ವೆಚ್ಚವನ್ನು ದೇಶಾದ್ಯಂತ ಉಚಿತವಾಗಿ ಭರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೋದಿ ಅವರು ಪ್ರಧಾನಿ ಆದ ನಂತರ 2014ರಿಂದ 156 ಮೆಡಿಕಲ್ ಕಾಲೇಜು ಆರಂಭವಾಗಿದೆ. 70 ವರ್ಷಗಳಲ್ಲಿ 50,000 ಮೆಡಿಕಲ್ ಸೀಟು ಸೃಜಿಸಲಾಗಿದೆ. ಕಳೆದ 7 ವರ್ಷಗಳಲ್ಲಿ 30,000 ಸೀಟು ಹೆಚ್ಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ. ಇತ್ತೀಚೆಗೆ ಪೂರ್ಣಗೊಂಡ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಒಟ್ಟು 4,000 ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ದ್ವಂದ್ವ

2020 ರ ಮಾರ್ಚ್ ಪ್ರಧಾನಿ ನರೇಂದ್ರ ಮೋದಿ, ಲಾಕ್ ಡೌನ್ ಘೋಷಿಸಿದಾಗ ಕಾಂಗ್ರೆಸ್ ಮುಖಂಡರು ಟೀಕೆ ಮಾಡಿದರು. ಇದೇ ಜನರು ಎರಡಲೇ ಅಲೆ ಬಂದಾಗ ಪೂರ್ಣ ಲಾಕ್ ಡೌನ್ ಗೆ ಒತ್ತಾಯ ಮಾಡಿದ್ದರು. ಒಂದು ಹಾಗೂ ಎರಡನೇ ಅಲೆಯ ನಡುವೆ ಯಾವ ರೀತಿಯ ಬದಲಾವಣೆ ಆಗಿದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿರುವ ಸಚಿವ ಡಾ.ಕೆ.ಸುಧಾಕರ್, ಇಂತಹ ಗಂಭೀರ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.

ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗೆ ಅನುಮತಿ ನೀಡಿದ್ದನ್ನು ‘ಪ್ರಿಮೆಚ್ಯೂರ್’ ಎಂದು ಟೀಕಿಸಿದ್ದ ಕಾಂಗ್ರೆಸ್ ಮುಖಂಡರು, ಲಸಿಕೆ ಬಗ್ಗೆ ಜನರಿದ್ದ ಗೊಂದಲವನ್ನು ಇನ್ನಷ್ಟು ಹೆಚ್ಚು ಮಾಡಿದ್ದರು. ಕೇಂದ್ರ ಸರ್ಕಾರ ಲಸಿಕೆಯನ್ನು ಕೊಡುತ್ತಿದ್ದಾಗ, ವಿಳಂಬವಾಗಿದೆ ಎಂದು ಟೀಕೆ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2024 ರ ವೇಳೆಗೆ ಲಸಿಕಾ ಅಭಿಯಾನ ಪೂರ್ಣಗೊಳ್ಳಲಿದೆ ಎಂದು ವ್ಯಂಗ್ಯವಾಡಿದ್ದರು. ನಂತರ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು, ಲಸಿಕೆಯ ದರ ಹೆಚ್ಚಿಸಲಾಗಿದೆ ಎಂದು ಟೀಕಿಸಿದ್ದರು. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆಯನ್ನು ಉಚಿತವಾಗಿ ನೀಡಿದೆ.

ಇದನ್ನು ಓದಿ: K Sudhakar: ಕೋವಿಡ್ ಬಗ್ಗೆ ಉತ್ತರ ಕೇಳದೆ ಪಲಾಯನ ಮಾಡಿದ ಕಾಂಗ್ರೆಸ್ ಬದ್ಧತೆ ಬಟಾಬಯಲು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ

ಕೋವಿಡ್ ನಿರ್ವಹಣೆಯನ್ನು ಮಾಡುತ್ತಿದ್ದ ರಾಜ್ಯ ಸರ್ಕಾರಕ್ಕೆ ಈ ಎಲ್ಲ ಟೀಕೆ, ರಾಜಕೀಯದಿಂದಾಗಿಯೇ ಪ್ರತಿ ಬಾರಿ ಕಾಂಗ್ರೆಸ್ ಅಡ್ಡಗಾಲು ಹಾಕಿದೆ. ಕೋವಿಡ್ ನಂತಹ ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೆ, ಇಲ್ಲಿಯೂ ರಾಜಕೀಯ ಲಾಭ ಪಡೆಯುವ ಆಲೋಚನೆಯನ್ನು ವಿಪಕ್ಷ ನಾಯಕರು ಮಾಡುತ್ತಿದ್ದಾರೆ. ನಮ್ಮೆಲ್ಲರ ಶತ್ರು ಕೊರೊನಾ ವೈರಾಣುವೇ ಹೊರತು ಪ್ರಧಾನಿ ನರೇಂದ್ರ ಮೋದಿ ಅಥವಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಲ್ಲ ಎಂಬ ಸತ್ಯವನ್ನು ಟೀಕಾಕಾರರು ತಿಳಿದರೆ ಕೋವಿಡ್ ಅನ್ನು ವೇಗವಾಗಿ ನಿಮೂರ್ಲನೆ ಮಾಡಲು ಸಾಧ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ಶೀಘ್ರ

ಚಾಮರಾಜನಗರದಲ್ಲಿ ನಡೆದ ದುರಂತ ಅತ್ಯಂತ ದುರದೃಷ್ಟಕರ. ನ್ಯಾಯಮೂರ್ತಿ ಎ.ಬಿ. ಪಾಟೀಲ್ ಅವರು ಸಮಿತಿ ವರದಿಯನ್ನು ಸರ್ಕಾರ ನಿರೀಕ್ಷಿಸುತ್ತಿದ್ದು ವರದಿ ಸರ್ಕಾರದ ಕೈ ಸೇರಿದ ಕೂಡಲೇ ಸೂಕ್ತ ಕ್ರಮ ಜರುಗಿಸಲಾಗುವುದು. ನೆನ್ನೆ ಮಾನ್ಯ ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದಂತೆ ಸರ್ಕಾರ ಈಗಾಗಲೇ 200 ಕೋಟಿ ರೂ. ಮೀಸಲಿಟ್ಟಿದ್ದು ಶೀಘ್ರದಲ್ಲೇ ಪ್ರತಿಯೊಬ್ಬ ಮೃತ ಕುಟುಂಬಕ್ಕೆ 1 ಲಕ್ಷ ರೂ .ಪರಿಹಾರ ತಲುಪಿಸಲಾಗುವುದು ಎಂದರು.
Published by:HR Ramesh
First published: