LockDown Effect: ಲಾಕ್​ಡೌನ್ ಮೀರಿ ರಸ್ತೆಗಿಳಿದ 1707 ವಾಹನಗಳನ್ನು ಜಪ್ತಿ ಮಾಡಿದ ಬೆಂಗಳೂರು ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನ ಕೊರೋನಾಗೂ ಕ್ಯಾರೆ ಎನ್ನದೆ ಲಾಕ್​ಡೌನ್ ಪಾಲಿಸದೆ ರಸ್ತೆಗೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಪೊಲೀಸರು ಬಿಗಿ ಕಣ್ಗಾವಲಿಗೆ ಆದೇಶಿಸಿದ್ದರು.

ಬೆಂಗಳೂರಿನಲ್ಲಿ ಲಾಕ್ ಡೌನ್ ಸ್ಥಿತಿ.

ಬೆಂಗಳೂರಿನಲ್ಲಿ ಲಾಕ್ ಡೌನ್ ಸ್ಥಿತಿ.

 • Share this:
  ಬೆಂಗಳೂರೂ (ಏಪ್ರಿಲ್ 29); ಭಾರತದಲ್ಲಿ ಮಾರಕ ಕೊರೋನಾ ಎರಡನೇ ಅಲೆ ಈಗಾಗಲೇ ಕೈಮೀರಿದೆ. ಒಂದು ದಿನಕ್ಕೆ ಕನಿಷ್ಟ 3.5 ರಿಂದ 4 ಲಕ್ಷ ಜನ ಸೋಂಕಿಗೆ ಒಳಗಾಗುತ್ತಿದ್ದಾರೆ. ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಈ ನಡುವೆ ದೇಶದಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್​ ಕೊರತೆಯಿಂದಾಗಿ ಅಪಾರ ಸಂಖ್ಯೆಯ ಜನ ಆಸ್ಪತ್ರೆಯ ಹೊರಗೆ ಬೀದಿಯಲ್ಲಿ ಮಲಗುವಂತಾಗಿರುವುದು ಸಾಮಾನ್ಯ ದೃಶ್ಯವಾಗಿದೆ. ಕರ್ನಾಟಕದಲ್ಲೂ ಕೊರೋನಾ ಕಾಟಕ್ಕೆ ಜನ ತತ್ತಿರಿಸಿದ್ದಾರೆ. ಅದರಲ್ಲೂ ಬೆಂಗಳೂರಿನ ಜನ ದಿನನಿತ್ಯ ಸುದ್ದಿ ಮಾಡುತ್ತಿರುವ ಕೊರೋನಾ ಸಾವಿಗೆ ಭಯಭೀತರಾಗಿದ್ದಾರೆ. ಇದೇ ಕಾರಣಕ್ಕೆ ಸೋಂಕನ್ನು ನಿಯಂತ್ರಿಸುವ ಕಾರಣಕ್ಕೆ ರಾಜ್ಯದಲ್ಲಿ ಲಾಕ್​ಡೌನ್ ಜಾರಿ ಮಾಡಲಾಗಿತ್ತು. ಆದರೆ, ಅದನ್ನೂ ಮೀರಿ ಬೆಂಗಳೂರಿನಲ್ಲಿ ರಸ್ತೆಗಿಳಿದ ಸುಮಾರು 1707 ವಾಹನಗಳನ್ನು ಪೊಲೀಸರು ಇಂದು ಸೀಜ್ ಮಾಡಿದ್ದಾರೆ.

  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನ ಕೊರೋನಾಗೂ ಕ್ಯಾರೆ ಎನ್ನದೆ ಲಾಕ್​ಡೌನ್ ಪಾಲಿಸದೆ ರಸ್ತೆಗೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಪೊಲೀಸರು ಬಿಗಿ ಕಣ್ಗಾವಲಿಗೆ ಆದೇಶಿಸಿದ್ದರು. ಅಲ್ಲದೆ, ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿಯುವವರ ವಿರುದ್ಧ ಕ್ರಮ ಜರುಗಿಸುವಂತೆಯೂ ಆದೇಶಿಸಿದ್ದರು.

  ಅದರಂತೆ ಇಂದಿನ ಎರಡನೇ ದಿನದ ಲಾಕ್ ಡೌನ್ ನಲ್ಲಿ ಸಾವಿರಕ್ಕೂ ವಾಹನಗಳನ್ನು ಬೆಂಗಳೂರು ಪೊಲೀಸರು ಸೀಜ್ ಮಾಡಿದ್ದಾರೆ. ಬರೊಬ್ಬರಿ 1707 ವಾಹನಗಳನ್ನು ಜಪ್ತಿ ಮಾಡಲಾಗಿದೆ. ನಗರದ ವಿವಿಧೆಡೆ ನಡೆದ ಕಾರ್ಯಾಚರಣೆಯಲ್ಲಿ ಈ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. 1707 ವಾಹನಗಳ ಪೈಕಿ ಅತಿ ಹೆಚ್ಚು ಬೈಕ್ ಗಳನ್ನು ಸೀಜ್ ಮಾಡಲಾಗಿದೆ. ಬರೊಬ್ಬರಿ 1530 ದ್ವಿ ಚಕ್ರ ವಾಹನಗಳು ಜಪ್ತಿಯಾಗಿವೆ. ಜೊತೆಗೆ 97 ಕಾರುಗಳು ಹಾಗೂ 80 ಆಟೋಗಳು ವಶಕ್ಕೆ ಪಡೆಯಲಾಗಿದೆ. ನಿಯಮ ಉಲ್ಲಂಘಿಸಿದ ಹಿನ್ನಲೆ 6 ಎನ್ ಡಿ ಎಂ ಎ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  ಭಾರತದಲ್ಲಿ ದಾಖಲೆ ಬರೆದ ಕೊರೋನಾ:

  ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌

  ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14 ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು ಹಾಗೂ ಏಪ್ರಿಲ್ 17 ರಿಂದ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ.

  ಇದನ್ನೂ ಓದಿ: Corona Vaccine: ಮೇ.01 ರಿಂದ ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡೋದು ಡೌಟ್​; ಸ್ಟಾಕ್ ಇಲ್ಲ ಎಂದ ಸರ್ಕಾರ!

  ಬುಧವಾರ 3,79,257 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 2,69,507 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,83,76,524ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು, ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪುತ್ತಿದ್ದಾರೆ. ಬುಧವಾರ 3,645 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,04,832ಕ್ಕೆ ಏರಿಕೆ ಆಗಿದೆ. ಈವರೆಗೆ 15,00,20,648 ಜನರಿಗೆ ಲಸಿಕೆ ಹಾಕಲಾಗಿದೆ.

  ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17 ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.
  Published by:MAshok Kumar
  First published: