ಬೆಂಗಳೂರು (ಮೇ 05); ದೇಶದಲ್ಲಿ ಮಾತ್ರ ರಾಜ್ಯದಲ್ಲೂ ಕೊರೋನಾ ಅಟ್ಟಾಹಾಸ ಸದ್ಯಕ್ಕಂತು ನಿಲ್ಲುವ ಯಾವುದೇ ಸೂಚನೆಗಳು ಕಾಣಿಸುತ್ತಿಲ್ಲ. ಇನ್ನೂ ರಾಜಧಾನಿ ಬೆಂಗಳೂರಂತು ಕೊರೋನಾ ಸಾವುಗಳಿಂದಾಗಿ ಅಕ್ಷರಶಃ ನರಕದಂತೆ ಭಾಸವಾಗುತ್ತಿದೆ. ಒಂದೆಡೆ ಪ್ರತಿದಿನ ಸಾವಿರಾರು ಜನ ಸೋಂಕಿಗೆ ತುತ್ತಾಗುತ್ತಿದ್ದರೆ, ಮತ್ತೊಂದೆಡೆ ಯಾರಿಗೂ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಲಭ್ಯವಾಗುತ್ತಿಲ್ಲ. ಆದರೆ, ನಗರದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಲು ಬೆಡ್ ಬ್ಲಾಕಿಂಗ್ ದಂಧೆಯೇ ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ದೂರಿದ್ದರು. ಅಲ್ಲದೆ, ಪ್ರಕರಣದ ಸಂಬಂಧ ಒಂದೇ ಕೋಮಿನ ಜನರ ಹೆಸರನ್ನು ಮಾತ್ರ ಹೆಸರಿಸಿದ್ದರು. ತೇಜಸ್ವಿ ಸೂರ್ಯ ಅವರ ಈ ನಡೆಗೆ ಹಲವೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದು ಕೋಮು ದ್ವೇಷ ಹರಡುವ ಕೃತ್ಯ ಎಂದು ಆರೋಪಿಸಲಾಗಿತ್ತು. ಇದರ ಬೆನ್ನಿಗೆ ಇಂದು ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಕೊರೋನಾ ಸೋಂಕಿಗಿಂತ ಅಪಾಯಕಾರಿ ಸಂಸದ ತೇಜಸ್ವಿ ಸೂರ್ಯ ಅವರ ತಲೆಯಲ್ಲಿರುವ ಕೋಮು ದ್ವೇಷದ ವೈರಸ್" ಎಂದು ಕಿಡಿಕಾರಿದ್ದಾರೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ @Tejasvi_Surya ಅವರೇ,
ಮುಖ್ಯ ಆರೋಪಿಗಳಾದ @CMofKarnataka ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 5/11#Corona
— Siddaramaiah (@siddaramaiah) May 5, 2021
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ. 4/11#Corona
— Siddaramaiah (@siddaramaiah) May 5, 2021
ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ @BJP4Karnataka ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ @Tejasvi_Surya . 8/11#Corona
— Siddaramaiah (@siddaramaiah) May 5, 2021
ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ @Tejasvi_Surya? 7/11#Corona
— Siddaramaiah (@siddaramaiah) May 5, 2021
'ಯಥಾ ರಾಜಾ ತಥಾ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ @narendramodi ಅವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ @Tejasvi_Surya ? 6/11#Corona
— Siddaramaiah (@siddaramaiah) May 5, 2021
ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು @Tejasvi_Surya? 3/11#Corona
— Siddaramaiah (@siddaramaiah) May 5, 2021
ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು @CMofKarnataka ಮೇಲೆ ಒತ್ತಡ ಹೇರಿ @Tejasvi_Surya. 2/11#Corona
— Siddaramaiah (@siddaramaiah) May 5, 2021
.@Tejasvi_Surya, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ,
ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ, ಸಚಿವರು ಮತ್ತು @BJP4Karnataka ಶಾಸಕರು,ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?1/11
— Siddaramaiah (@siddaramaiah) May 5, 2021
ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ, ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು @BSYBJP ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 @BJP4Karnataka ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ @narendramodi ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ? 11/11#Corona
— Siddaramaiah (@siddaramaiah) May 5, 2021
ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ರಾಜ್ಯಕ್ಕೆ ವೆಂಟಿಲೇಟರ್, ಐಸಿಯು, ಆಕ್ಸಿಜನ್ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ @narendramodi ರಕ್ಷಿಸುತ್ತಿರುವುದು ಯಾರನ್ನು ತಮ್ಮನ್ನೋ? ಅಧಿಕಾರಿಗಳನ್ನೋ? 10/11#Corona
— Siddaramaiah (@siddaramaiah) May 5, 2021
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ @narendramodi ಅವರ ಅಚ್ಚೇ ದಿನ್ @Tejasvi_Surya?9/11#Corona
— Siddaramaiah (@siddaramaiah) May 5, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ