ಬೆಂಗಳೂರು: ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಸಿಎಂ ನಿವಾಸಕ್ಕೆ ತೆರಳಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಜೊತೆಗಿದ್ದರು. ಸಿಎಂ ಯಡಿಯೂರಪ್ಪ ಜೊತೆ ಕೋವಿಡ್ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ ಆರೋಪ ಕೇಳಿಬಂದಿದ್ದು, ಕೋವಿಡ್ ವಿಚಾರದಲ್ಲಿ ಸರ್ಕಾರ ವರ್ಚಸ್ಸಿಗೆ ಧಕ್ಕೆಯಾಗಿದೆ. ಬಿಜೆಪಿ ಪಕ್ಷದ ಕಾರ್ಯಕರ್ತರಿಗೂ ಮುಜುಗರ ಉಂಟಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿಗೆ ತರಾಟೆ ತೆಗೆದುಕೊಳ್ಳಲಾಗುತ್ತಿದೆ. ಈಗ ಲಾಕ್ಡೌನ್ ಬೇರೆ ಹೇರಿಕೆ ಮಾಡಲಾಗಿದೆ. ಇದರಿಂದ ಮತ್ತಷ್ಟು ಜನರು ಸರ್ಕಾರದ ವಿರುದ್ಧ ಜನ ಆಕ್ರೋಶಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಹಾಗೂ ಪಕ್ಷಕ್ಕೆ ಧಕ್ಕೆ ಬಾರದಂತೆ ಕ್ರಮ ವಹಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.
ಸಿಎಂ ಬಿಎಸ್ವೈ ಜೊತೆ ಚರ್ಚೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಇದು ರಾಜಕಾರಣ ಮಾಡುವ ಸಮಯವಲ್ಲ. ಕೋವಿಡ್ ನಿಯಂತ್ರಣ ಮಾಡುವ ಕೆಲಸವಷ್ಟೇ ಇರೋದು. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಅಷ್ಟೇ. ಅಂತಹ ಯಾವುದೇ ಪ್ರಶ್ನೆ ಇಲ್ಲ. ಕೋವಿಡ್ ಇರೋದ್ರಿಂದ ಅದರ ಕಡೆ ಅಷ್ಟೇ ನಮ್ಮಗಮನ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಕೋವಿಡ್ ವಿಚಾರದ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯದ ಜಿಲ್ಲೆಗಳಲ್ಲಿನ ಸಮಸ್ಯೆ ವಿಚಾರ ಚರ್ಚೆ ಮಾಡಲಾಗಿದೆ. ಪಕ್ಷದ ಕಡೆಯಿಂದ ಏನು ಮಾಡಿದ್ದೇವೆ ಅನ್ನೋದನ್ನು ಸಿಎಂಗೆ ತಿಳಿಸಿದ್ದೇವೆ. ಲಾಕ್ ಡೌನ್ ಮತ್ತಷ್ಟು ಕಠಿಣ ಕ್ರಮಕ್ಕೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಇದನ್ನು ಓದಿ: ಕೊರೋನಾ ಸೋಂಕಿಗೆ ಹೆತ್ತವರು ಬಲಿ, ತಬ್ಬಲಿಯಾದ 4 ವರ್ಷದ ಹೆಣ್ಣು ಮಗು; ಬೈಕ್ನಲ್ಲೇ ವೃದ್ಧನ ಶವ ಸಾಗಣೆ
ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪರೋಕ್ಷವಾಗಿ ಒಪ್ಪಿದ ಕಟೀಲ್, ಕೇರಳ, ಮಹಾರಾಷ್ಟ್ರದಲ್ಲೂ ವಿಫಲ ಆಗಿಲ್ಲವೇ ಎಂದು ಪ್ರಶ್ನಿಸಿದರು. ಒಂದೇ ಸಲಕ್ಕೆ ಹೆಚ್ಚು ಸೋಂಕು ಉಲ್ಬಣ ಆಗಿದೆ. ಹೀಗಾಗಿ ನಿಯಂತ್ರಣ ಸ್ವಲ್ಪ ಕಷ್ಟವಾಗಿದೆ. ಸಮಸ್ಯೆ ಸರಿಪಡಿಸುವ ಪ್ರಯತ್ನ ನಡೆದಿದೆ. ನಮ್ಮಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿದೆ. ಪಕ್ಷ ಅಥವಾ ಸರ್ಕಾರದ ವಿರುದ್ಧ ಮಾತನಾಡುವ ಶಾಸಕರನ್ನು ಕರೆದು ಮಾತನಾಡುತ್ತೇನೆ. ಕೋವಿಡ್ ನಿಯಂತ್ರಣಕ್ಕೆ ಸಂಪೂರ್ಣ ಸಹಕಾರ ನೀಡಿದೆ ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ