ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ; ಹೆಚ್‌ಡಿಕೆ

ಪ್ರಗತಿಪರ ಹೋರಾಟಗಾರ ಮಹೇಂದ್ರ ಕುಮಾರ್ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ಅಕಾಲಿಕ ಸಾವಿಗೀಡಾದರು. ಅವರ ಮರಣಕ್ಕೆ ಮಾಜಿ ಸಿಎಂ ಹೆಚ್‌ಡಿಕೆ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

ಮಹೇಂದ್ರ ಕುಮಾರ್‌ ಮತ್ತು ಹೆಚ್‌.ಡಿ. ಕುಮಾರಸ್ವಾಮಿ.

ಮಹೇಂದ್ರ ಕುಮಾರ್‌ ಮತ್ತು ಹೆಚ್‌.ಡಿ. ಕುಮಾರಸ್ವಾಮಿ.

  • Share this:
ಬೆಂಗಳೂರು (ಏಪ್ರಿಲ್ 25); ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ ಎಂದು ಮಾಜಿ ಸಿಎಂ ಹೆಚ್.‌ಡಿ. ಕುಮಾರಸ್ವಾಮಿ ವಿಷಾಧ ವ್ಯಕ್ತಪಡಿಸಿದ್ದಾರೆ.

ಪ್ರಗತಿಪರ ಹೋರಾಟಗಾರ ಮಹೇಂದ್ರ ಕುಮಾರ್ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ಅಕಾಲಿಕ ಸಾವಿಗೀಡಾದರು. ಅವರ ಮರಣಕ್ಕೆ ಟ್ವೀಟ್ ಮೂಲಕ ಕಂಬನಿ ಮಿಡಿದಿರುವ ಹೆಚ್‌ಡಿಕೆ, "ಆರಂಭದಲ್ಲಿ ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ನಂತರದ ದಿನಗಳಲ್ಲಿ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನನ್ನೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು.



ಆದರೆ, ದಿಧೀರೆಂದು ಪಕ್ಷ ಮತ್ತು ರಾಜಕೀಯದಿಂದ ದೂರ ಸರಿದು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬೆಳಸಿಕೊಂಡಿದ್ದರು. ಸಿದ್ಧಾಂತಗಳು ಬದಲಾಗಿದ್ದನ್ನು ನಾನು ಹತ್ತಿರದಿಂದ ಕಂಡಿದ್ದೆ. 'ನಮ್ಮ ಧ್ವನಿ' ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು.



ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ನಿಧನ
First published: