ನವದೆಹಲಿ: ಕೊರೋನಾ ಎರಡನೇ ಅಲೆಯ ಪ್ರಭಾವ ರಾಷ್ಟ್ರ ರಾಜಧಾನಿಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ. ಸಕಾರಾತ್ಮಕ ದರ ಪ್ರಸ್ತುತ ಶೇ.2.5 ರಷ್ಟಿದೆ. ಆದರೂ, ಈ ಸೋಂಕನ್ನು ಸಂಪೂರ್ಣವಾಗಿ ನಿರ್ಮೂಲನೆ ಗೊಳಿಸುವ ಸಲುವಾಗಿ ಮೇ 31ರ ಬೆಳಗ್ಗೆ 5 ಗಂಟೆಯ ವರೆಗೆ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ. ಇದೀಗ ಕೋವಿಡ್ನಿಂದ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ದೈನಂದಿನ ವರದಿಯಾಗುವ ಪ್ರಕರಣಗಳಿಗಿಂತ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸರ್ಕಾರ ತಿಳಿಸಿದೆ.
ಒಟ್ಟಾರೆ ಈಗ ಗುಣಮುಖರಾಗುವವರ ಸಂಖ್ಯೆ ಪ್ರತಿದಿನವೂ ವರದಿಯಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆಯನ್ನು ಮೀರಿದೆ. ಚೇತರಿಕೆ ದರವು ಈಗ ಶೇ. 85.6 ರಿಂದ ಶೇ. 90% ಕ್ಕೆ ಏರಿದೆ. ಇದು ಸಕಾರಾತ್ಮಕ ಸೂಚನೆ ಎಂದು ದೆಹಲಿ ಆರೋಗ್ಯ ಸಚಿವಾಲಯ ತಿಳಿಸಿದೆ.
Overall recoveries are now exceeding the number of cases being reported on a daily basis. The recovery rate has increased from 85.6% to 90% now, it's a positive indication: Ministry of Health pic.twitter.com/hUouO5taI8
— ANI (@ANI) May 27, 2021
"ನಾನು ಅನೇಕ ತಜ್ಞರನ್ನು ಸಂಪರ್ಕಿಸಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಎಲ್ಲರೂ ಇನ್ನೂ ಒಂದು ವಾರದವರೆಗೆ ಲಾಕ್‌ಡೌನ್ ವಿಸ್ತರಿಸುವ ಕುರಿತು ಒಲವು ತೋರಿಸಿದ್ದರು. ಆದ್ದರಿಂದಲೇ ಮೇ.31ರ ವರೆಗೆ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸೋಂಕು ಮತ್ತಷ್ಟು ಹೆಚ್ಚಾಗದಂತೆ ತಡೆಯುವ ಸಲುವಾಗಿ ಲಾಕ್‌ಡೌನ್ ಅಗತ್ಯ ಇದೆ. ಈ ನಡುವೆ ಜನರಿಗೆ ಕೊರೋನಾ ಲಸಿಕೆ ನೀಡುವ ಅಗತ್ಯವಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಲಸಿಕೆಗಳು ಲಭ್ಯವಾದ ತಕ್ಷಣ 18-44 ವಯಸ್ಸಿನ ಎಲ್ಲಾ ಯುವಕರಿಗೂ ಲಸಿಕೆಯನ್ನು ನೀಡಲಾಗುವುದು" ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಏಪ್ರಿಲ್ 30ರಿಂದ ದಿನ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ಸೋಂಕು (Coronavirus) ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿದೆ. ಆದರೂ ಇನ್ನೂ ಪ್ರತಿದಿನ ಸರಿ ಸುಮಾರು ಎರಡೂವರೆ ಲಕ್ಷ ಜನ ಸೋಂಕು ಪೀಡಿತರಾಗುತ್ತಿದ್ದಾರೆ. ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆಯಲ್ಲೂ ಭಾರೀ ಇಳಿಮುಖ ಆಗಿಲ್ಲ.
ಇದನ್ನು ಓದಿ: Explained: ಕೋವಿಡ್-19 ನ್ಯುಮೋನಿಯಾ ಎಂದರೇನು? ಅದರ ರೋಗಲಕ್ಷಣಗಳೇನು ಹಾಗೂ ಚೇತರಿಕೆ ಹೇಗೆ?
ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿ ಹೆಚ್ಚಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ