news18-kannada Updated:March 24, 2020, 3:40 PM IST
ಡಿಸಿಎಂ ಅಶ್ವತ್ಥ್ ನಾರಾಯಣ್.
ಬೆಂಗಳೂರು(ಮಾ.24): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಕೊರೋನಾ ಸೋಂಕಿತರನ್ನು ಕ್ವಾರಂಟೈನ್ನಲ್ಲಿ ಇರಿಸಲು 20 ಸಾವಿರ ಹೋಟೆಲ್ ರೂಮ್ ಪಡೆಯಲು ಮುಂದಾಗಿದ್ದೇವೆ. ಒಂದು ಲಕ್ಷ ಜನಕ್ಕೆ ಸೋಂಕು ತಗುಲಬಹುದೆಂದು ಅಂದಾಜಿಸಲಾಗಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಮಾತನಾಡಿದ ಅವರು, ಈ ಮಾರಣಾಂತಿಕ ಕೊರೋನಾ ವೈರಸ್ ಭೀತಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ 39 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇನ್ನೂ 1 ಲಕ್ಷ ಜನರಿಗೆ ಈ ಕೊರೋನಾ ಸೋಂಕು ಹರಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಆದಾಯ ತೆರಿಗೆ ಪಾವತಿ, ಐಟಿ ರಿಟರ್ನ್ಸ್, ಆಧಾರ್ - ಪ್ಯಾನ್ ಲಿಂಕ್ ಜೂನ್ 30ರವರೆಗೆ ವಿಸ್ತರಣೆ: ನಿರ್ಮಲಾ ಸೀತಾರಾಮನ್
ಈಗ ವೆಂಟಿಲೇಟರ್ ಸೌಲಭ್ಯ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದಿಂದ ಒಂದು ಸಾವಿರ ವೆಂಟಿಲೇಟರ್ ಆರ್ಡರ್ ಮಾಡಿದ್ದೇವೆ. 15 ಲಕ್ಷ ನಾರ್ಮಲ್ ಮಾಸ್ಕ್ಗಳು ಹಾಗೂ5 ಲಕ್ಷ N-95 ಮಾಸ್ಕ್ ಆರ್ಡರ್ ಮಾಡಿದ್ದೇವೆ ಎಂದರು.
ಮುಂದುವರೆದ ಅವರು, ಕೊರೋನಾಗೆ ಔಷಧ ಇಲ್ಲ. ಈ ಸೋಂಕಿಗೆ ಮೆಡಿಸನ್ ಕಂಡು ಹಿಡಿಯುವ ಕೆಲಸ ನಡೆಯುತ್ತಿದೆ.
ರಾಜ್ಯದಲ್ಲಿ ವೆಂಟಿಲೇಟರ್ ವ್ಯವಸ್ಥೆ ಪಡೆದ ಕೊರೋನಾ ಸೋಂಕಿತರು ಯಾರೂ ಇಲ್ಲ. ಯಾರಿಗೂ ವೆಂಟಿಲೇಟರ್ ಹಾಕುವ ಅಗತ್ಯ ಈವರೆಗೆ ಬಂದಿಲ್ಲ. ಸೋಂಕಿತರು ನಾರ್ಮಲ್ ಟ್ರೀಟ್ಮೆಂಟ್ ಪಡೆದು ಗುಣ ಆಗುತ್ತಿದ್ದಾರೆ ಎಂದು ಹೇಳಿದರು.
First published:
March 24, 2020, 3:34 PM IST