CoronaVirus: ದೇಶದಲ್ಲಿ ಕೊರೋನಾ ಅಟ್ಟಹಾಸ: ಇದೇ ಮೊದಲ ಬಾರಿಗೆ ಒಂದೇ ದಿನಕ್ಕೆ 32,695 ಪ್ರಕರಣಗಳು ಪತ್ತೆ

ಬುಧವಾರ 606 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 6,12,815 ಜನ ಮಾತ್ರ. ದೇಶದಲ್ಲಿ ಇನ್ನೂ 3,31,146 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

news18-kannada
Updated:July 16, 2020, 9:58 AM IST
CoronaVirus: ದೇಶದಲ್ಲಿ ಕೊರೋನಾ ಅಟ್ಟಹಾಸ: ಇದೇ ಮೊದಲ ಬಾರಿಗೆ ಒಂದೇ ದಿನಕ್ಕೆ 32,695 ಪ್ರಕರಣಗಳು ಪತ್ತೆ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ: ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿ ಅನ್‌ಲಾಕ್‌ 1 ಮತ್ತು 2 ಅನ್ನು ಜಾರಿ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಲೇ ಇದೆ. ಪರಿಣಾಮವಾಗಿ ಪ್ರತಿ ನಾಲ್ಕು ದಿನಕ್ಕೆ  1 ಲಕ್ಷ ಜನರಿಗೆ ಮಾರಣಾಂತಿಕ ಸೋಂಕು ಹರಡುತ್ತಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ದಿನವೊಂದರಲ್ಲಿ 32 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಜುಲೈ 1ರಿಂದ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2ರಿಂದ 20 ಸಾವಿರ, ಜುಲೈ 3ರಿಂದ 22  ಸಾವಿರ, ಜುಲೈ 4ರಿಂದ 24 ಸಾವಿರ, ಜುಲೈ 9ರಿಂದ 26 ಸಾವಿರ ಪ್ರಕರಣಗಳು, ಜುಲೈ 10ರಿಂದ 27 ಸಾವಿರ ಪ್ರಕರಣಗಳು, ಜುಲೈ 11ರಿಂದ 28 ಸಾವಿರ ಪ್ರಕರಣಗಳು ಹಾಗೂ ಜುಲೈ 14ರಿಂದ 29 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದವು.

ಇದೀಗ ಈಗ ಒಂದೇ ದಿನ ಮೂರು ಸಾವಿರ ಪ್ರಕರಣಗಳು ಅಧಿಕಗೊಂಡು‌ ಜುಲೈ 15ರಂದು 32 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಬುಧವಾರ 32,695 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 9,68,876ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಬುಧವಾರ 606 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 6,12,815 ಜನ ಮಾತ್ರ. ದೇಶದಲ್ಲಿ ಇನ್ನೂ 3,31,146 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ : RIL AGM 2020: ಜಿಯೋ ಮಾರ್ಟ್‌‌ಗೆ ಕಿರಾಣಿ ಅಂಗಡಿಗಳು ಬಹುಪರಾಕ್; ದೇಶದ ಮೂಲೆ ಮೂಲೆಗೂ ಅಗತ್ಯ ವಸ್ತುಗಳ ಸಾಗಾಟ



ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 11ರಂದು 10,956, ಜೂನ್ 12ರಂದು 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು 16,922, ಜೂನ್ 25ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906, ಜೂನ್ 28ರಂದು 19,459, ಜೂನ್ 29ರಂದು 18,522, ಜೂನ್ 30ರಂದು 18,653, ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506, ಜುಲೈ 10ರಂದು 27,114, ಜುಲೈ 11ರಂದು 28,637, ಜುಲೈ 12ರಂದು‌ 28,701, ಜುಲೈ 13ರಂದು 28,498, ಜುಲೈ 14ರಂದು 29,429 ಹಾಗೂ ಜುಲೈ 25ರಂದು 32,695 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: MAshok Kumar
First published: July 16, 2020, 9:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading