ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಸಾವಿರಾರು ಪ್ರಯಾಣಿಕರು; ಕ್ವಾರಂಟೈನ್‌ಗೆ ಸಿದ್ಧತೆ

ಲಾಕ್‌ಡೌನ್‌ನಿಂದಾಗಿ ದೇಶದ ನಾನಾ ಮೂಲೆಗಳಲ್ಲಿ ಸಿಲುಕಿಕೊಂಡಿದ್ದವರನ್ನು ಮನೆಗೆ ಸೇರಿಸುವ ಸಲುವಾಗಿ ಕೇಂದ್ರ ಸರ್ಕಾರ ಮಂಗಳವಾರದಿಂದ 15 ವಿಶೇಷ ರೈಲಿನ ಸಂಚಾರವನ್ನು ಆರಂಭಿಸಿತ್ತು. ಈ ರೈಲಿನ ಮೂಲಕ ಸಾವಿರಾರು ಜನ ಇದೀಗ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮೇ 14); ಲಾಕ್‌ಡೌನ್‌ನಿಂದಾಗಿ ಕಳೆದ 50 ದಿನಗಳಿಂದ ದೆಹಲಿಯಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಕನ್ನಡಿಗರು ಕೊನೆಗೂ ಬೆಂಗಳೂರಿಗೆ ಮರಳಿದ್ದಾರೆ. ಮಂಗಳವಾರ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಇಂದು ಬೆಳಗ್ಗೆ 6.40ಕ್ಕೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ತಲುಪಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಲು ಸರ್ಕಾರ ಮುಂದಾಗಿದೆ.

ಲಾಕ್‌ಡೌನ್‌ನಿಂದಾಗಿ ದೇಶದ ನಾನಾ ಮೂಲೆಗಳಲ್ಲಿ ಸಿಲುಕಿಕೊಂಡಿದ್ದವರನ್ನು ಮನೆಗೆ ಸೇರಿಸುವ ಸಲುವಾಗಿ ಕೇಂದ್ರ ಸರ್ಕಾರ ಮಂಗಳವಾರದಿಂದ 15 ವಿಶೇಷ ರೈಲಿನ ಸಂಚಾರವನ್ನು ಆರಂಭಿಸಿತ್ತು. ಈ ರೈಲಿನ ಮೂಲಕ ಸಾವಿರಾರು ಜನ ಇದೀಗ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು ಎಲ್ಲರನ್ನೂ ತಪಾಸಣೆ ಮಾಡಿ ಹೋಟೆಲ್ ಅಥವಾ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಈಗಾಗಲೇ ಎಲ್ಲಾ ಪ್ರಯಾಣಿಕರನ್ನು 40ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಮೂಲಕ ಹೋಟೆಲ್ ಮತ್ತು ಹಾಸ್ಟೆಲ್‌ಗಳಿಗೆ ಕರೆದೊಯ್ಯಲಾಗಿದೆ. ಆದರೆ, ಅವರನ್ನು ನಿರ್ದಿಷ್ಟವಾಗಿ ಎಲ್ಲಿ ಕ್ವಾರಂಟೈನ್ ಮಾಡಲಾಗುವುದು ಎಂಬ ಕುರಿತು ಈವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆದರೆ, ರೈಲ್ವೆ ನಿಲ್ದಾಣದಲ್ಲಿ ಪ್ರವೇಶ ದ್ವಾರದ ಹೊರತು ಬೇರೆ ಎಲ್ಲಾ ಮಾರ್ಗವನ್ನೂ ಬಂದ್ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಿಂದ ಇಂದು ಉತ್ತರ ರಾಜ್ಯಗಳಿಗೆ ನಾಲ್ಕು ಶ್ರಮಿಕ್​​​ ರೈಲುಗಳು: ತವರು ಸೇರಲಿರುವ ಸಾವಿರಾರು ವಲಸಿಗರು
First published: