ಚೆನ್ನೈ: ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ನೆನ್ನೆಯಷ್ಟೇ ತೆಲಂಗಾಣ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತಮಿಳುನಾಡು ಸಹ ಇದೇ ತೀರ್ಮಾನ ತೆಗೆದುಕೊಂಡಿದೆ.
10 ಮತ್ತು 11ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ತಮಿಳುನಾಡು ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.