HOME » NEWS » Coronavirus-latest-news » TODAY 1781 CORONAIRUS POSITIVE CASES REPORT IN DELHI RH

ದೆಹಲಿಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ; 1,781 ಹೊಸ ಪ್ರಕರಣಗಳು ಪತ್ತೆ

ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದ್ದು, 8 ಲಕ್ಷದ ಗಡಿ ದಾಟಿದೆ. ಅಲ್ಲದೆ ಕೇವಲ ನಾಲ್ಕು ದಿನಗಳಲ್ಲಿ 1 ಲಕ್ಷಕ್ಕೂ ‌ಹೆಚ್ಚು ಜನರು‌ ಸೋಂಕು ಪೀಡಿತರಾಗಿದ್ದಾರೆ. ಜುಲೈ 8ರಿಂದ ಮತ್ತೆ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಜುಲೈ 9ರಿಂದ 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತೊಡಗಿದ್ದವು. ಜುಲೈ 10ರಂದು ಶುಕ್ರವಾರ 27,114 ಪ್ರಕರಣಗಳು ಪತ್ತೆಯಾಗಿದ್ದು, ದೇಶದ ಕೊರೋನಾ ಪೀಡಿತರ ಸಂಖ್ಯೆ 8,20,916ಕ್ಕೆ ಏರಿಕೆಯಾಗಿದೆ.

news18-kannada
Updated:July 11, 2020, 10:33 PM IST
ದೆಹಲಿಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ; 1,781 ಹೊಸ ಪ್ರಕರಣಗಳು ಪತ್ತೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ: ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲಿಗೀಡುಮಾಡಿದೆ. ದೆಹಲಿಯಲ್ಲಿ ಶನಿವಾರ 1,781 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು ದೆಹಲಿ ಸರ್ಕಾರದ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ‌.

ಪ್ರತಿದಿನ ಸಂಜೆ ಕಳೆದ 24 ಗಂಟೆಯಲ್ಲಿ ಹೊಸದಾಗಿ ಕಂಡುಬರುವ ಕೊರೋನಾ ಪ್ರಕರಣಗಳನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡುತ್ತಿದೆ‌. ಅದೇ ರೀತಿ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಹೊಸದಾಗಿ 1,781 ಕೊರೋನಾ ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಇದರಿಂದ ದೆಹಲಿಯ ಕೊರೋನಾ ಪೀಡಿತರ ಸಂಖ್ಯೆ 1,10,921ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಮಹಾಮಾರಿ ಕೊರೋನಾ ಸೋಂಕಿಗೆ ಶನಿವಾರ 34 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ದೆಹಲಿಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 3,334ಕ್ಕೆ ಏರಿಕೆಯಾಗಿದೆ. ಮೊದಲು ದೆಹಲಿಯಲ್ಲಿ 3 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿತ ಪ್ರಕರಣಗಳು ಕಂಡುಬರುತ್ತಿದ್ದವು. ಈ ವಾರ 2 ಸಾವಿರಕ್ಕಿಂತ ಕಡಿಮೆ‌ ಪ್ರಕರಣಗಳು ವರದಿಯಾಗಿದೆ. ಶನಿವಾರ 2,998 ಜನ ಸೇರಿದಂತೆ ಈವರೆಗೆ 87,692 ಜನರು ಗುಣಮುಖರಾಗಿದ್ದಾರೆ. ಕೊರೋನಾದಿಂದ ಗುಣಮುಖರಾದವರ ಪ್ರಮಾಣ ಶೇಕಡಾ 79ಕ್ಕೆ ಏರಿಕೆಯಾಗಿದೆ. 19,895 ಕೊರೋನಾ ಪ್ರಕರಣಗಳು ಆ್ಯಕ್ಟೀವ್ ಆಗಿವೆ ಎಂದು ದೆಹಲಿ ಸರ್ಕಾರದ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ‌.

ಮೊನ್ನೆಯಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು‌ ದೆಹಲಿಯಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದು‌ ಲಕ್ಷ ದಾಟಿದ್ದರೂ ನಾಗರಿಕರು ಭಯಪಡುವ ಅಗತ್ಯ ಇಲ್ಲ. ಗುಣಮುಖರಾಗುವವರ ಪ್ರಮಾಣ ಉತ್ತಮವಾಗಿದೆ ಎಂದು ಹೇಳಿದ್ದರು. ಆದರೆ ವಾರಾಂತ್ಯದಲ್ಲಿ ದೆಹಲಿಯಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರಕರಣಗಳೇ ವ್ಯಕ್ತವಾಗಿವೆ. ಮುಂದಿನ ವಾರ ಕಡಿಮೆ ಆಗುತ್ತದೋ ಹೆಚ್ಚಾಗುತ್ತದೋ ಎಂಬುದನ್ನು ಕಾದು ನೋಡಬೇಕು.

ಇದನ್ನು ಓದಿ: ಮಂಗಳವಾರ 8 ಗಂಟೆಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್​ಡೌನ್; ಸಿಎಂ ಘೋಷಣೆ

ಇದಲ್ಲದೆ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದ್ದು, 8 ಲಕ್ಷದ ಗಡಿ ದಾಟಿದೆ. ಅಲ್ಲದೆ ಕೇವಲ ನಾಲ್ಕು ದಿನಗಳಲ್ಲಿ 1 ಲಕ್ಷಕ್ಕೂ ‌ಹೆಚ್ಚು ಜನರು‌ ಸೋಂಕು ಪೀಡಿತರಾಗಿದ್ದಾರೆ. ಜುಲೈ 8ರಿಂದ ಮತ್ತೆ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಜುಲೈ 9ರಿಂದ 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತೊಡಗಿದ್ದವು. ಜುಲೈ 10ರಂದು ಶುಕ್ರವಾರ 27,114 ಪ್ರಕರಣಗಳು ಪತ್ತೆಯಾಗಿದ್ದು, ದೇಶದ ಕೊರೋನಾ ಪೀಡಿತರ ಸಂಖ್ಯೆ 8,20,916ಕ್ಕೆ ಏರಿಕೆಯಾಗಿದೆ.
Published by: HR Ramesh
First published: July 11, 2020, 10:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories