ಕೊರೋನಾ ಭೀತಿ ನಡುವೆಯೂ ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಕೈಗೊಂಡ ಸಿಎಂ ಬಿಎಸ್​ವೈ ‌

ರಾಜ್ಯದಲ್ಲಿ ಇದುವರೆಗೆ ಒಟ್ಟು 1,09,131 ಜನರ ಮೇಲೆ ನಿಗಾ ಇರಿಸಲಾಗಿದ್ದು, ಇವರಲ್ಲಿ 731 ಜನರನ್ನು ಪರೀಕ್ಷೆ ಮಾಡಲಾಗಿದೆ. ಶನಿವಾರ ಒಂದೇ ದಿನದಲ್ಲಿ 91 ಜನರನ್ನು ಪರೀಕ್ಷೆ ಮಾಡಲಾಗಿದೆ. 641 ಜನರಿಗೆ ಸುರಕ್ಷಿತರಾಗಿದ್ದಾರೆ ಎಂದು ವರದಿ ಹೇಳಿದೆ.

news18-kannada
Updated:March 15, 2020, 8:41 AM IST
ಕೊರೋನಾ ಭೀತಿ ನಡುವೆಯೂ ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಕೈಗೊಂಡ ಸಿಎಂ ಬಿಎಸ್​ವೈ ‌
ಸಿಎಂ ಬಿ.ಎಸ್.ಯಡಿಯೂರಪ್ಪ.
  • Share this:
ಬೆಂಗಳೂರು: ಕೊರೋನಾ ವೈರಾಣು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಶನಿವಾರದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದ ಸಿಎಂ ಯಡಿಯೂರಪ್ಪ ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಬೆಳೆಸಲಿದ್ದಾರೆ.

ಕೊರೋನಾ ಸೋಂಕಿನ ಕಾರಣ ಸಿಎಂ ಆದಿಯಾಗಿ ಎಲ್ಲ ಸಚಿವರು ಶನಿವಾರದ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದರು. ವೈರಸ್​ ನಿಯಂತ್ರಣಕ್ಕೆ ಸರ್ಕಾರ ಹಲವು ಕಟ್ಟುನಿಟ್ಟಿನ  ಕ್ರಮಗಳನ್ನು ಕೈಗೊಂಡಿದ್ದು, ಮಾಲ್​, ಥಿಯೇಟರ್, ಶಾಲಾ-ಕಾಲೇಜುಗಳು ತೆರೆಯದಂತೆ ಆದೇಶ ಹೊರಡಿಸಿದೆ. ಈವರೆಗೂ ರಾಜ್ಯದಲ್ಲಿ ಆರು ಪ್ರಕರಣಗಳು ಪತ್ತೆಯಾಗಿದ್ದು, ಶಂಕಿತರ ಮೇಲೆ ನಿಗಾ ಇರಿಸಲಾಗಿದೆ.

ಏತನ್ಮಧ್ಯೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಗಾವಿ, ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಮಗಳ ಮದುವೆ ಸಮಾರಂಭದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತರ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.

ಇದನ್ನು ಓದಿ: ರಾಜ್ಯದಲ್ಲಿ​ ಆರು ಜನರಲ್ಲಿ ಕೊರೋನಾ ಸೋಂಕು, 731 ಮಂದಿಗೆ ಪರೀಕ್ಷೆ; ವೈದ್ಯಕೀಯ ಸಚಿವ ಕೆ ಸುಧಾಕರ್​

 

ರಾಜ್ಯದಲ್ಲಿ ಇದುವರೆಗೆ ಒಟ್ಟು 1,09,131 ಜನರ ಮೇಲೆ ನಿಗಾ ಇರಿಸಲಾಗಿದ್ದು, ಇವರಲ್ಲಿ 731 ಜನರನ್ನು ಪರೀಕ್ಷೆ ಮಾಡಲಾಗಿದೆ. ಶನಿವಾರ ಒಂದೇ ದಿನದಲ್ಲಿ 91 ಜನರನ್ನು ಪರೀಕ್ಷೆ ಮಾಡಲಾಗಿದೆ. 641 ಜನರಿಗೆ ಸುರಕ್ಷಿತರಾಗಿದ್ದಾರೆ ಎಂದು ವರದಿ ಹೇಳಿದೆ. ಒಟ್ಟು ಆರು ಮಂದಿಯಲ್ಲಿ ಕೊರೋನಾ ಸೋಂಕು ತಗುಲಿದ್ದು, ಅವರನ್ನು ಪ್ರತ್ಯೇಕವಾಗಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.
First published: March 15, 2020, 7:14 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading