ಕೊರೋನಾ ತಡೆಗೆ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ; ವಿಶೇಷ ಪ್ಯಾಕೇಜ್ ಘೋಷಣೆ ಬಗ್ಗೆ ಚರ್ಚೆ

ಇಡೀ ದೇಶವೇ ಲಾಕ್ ಡೌನ್ ಆಗಿದ್ದರೂ ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಸಚಿವರಿಗೆ ಆಯಾ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ.

news18-kannada
Updated:March 27, 2020, 7:11 AM IST
ಕೊರೋನಾ ತಡೆಗೆ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ; ವಿಶೇಷ ಪ್ಯಾಕೇಜ್ ಘೋಷಣೆ ಬಗ್ಗೆ ಚರ್ಚೆ
ಸಿಎಂ ಬಿ.ಎಸ್.ಯಡಿಯೂರಪ್ಪ.
  • Share this:
ಬೆಂಗಳೂರು: ಮಹಾಮಾರಿಯಾಗಿ ಜಗತ್ತನ್ನು ಕಾಡುತ್ತಿರುವ ಮಾರಕ ಕೊರೋನಾ ಸೋಂಕು ದಿನದಿಂದ ದಿನಕ್ಕೆ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಲೇ ಇದೆ. ದೇಶದಲ್ಲೂ ಕರಾಳ ನರ್ತನ ತೋರುತ್ತಿರುವ ಮಾರಕ ಸೋಂಕು ನಿವಾರವಣೆಗೆ ಇಡೀ ದೇಶವನ್ನೇ 21 ದಿನಗಳ ಕಾಲ ಲಾಕ್​ಡೌನ್ ಮಾಡಲಾಗಿದೆ. ಆಗಿದ್ದೂ ಸೋಂಕಿ ಸದ್ಯದ ಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿಲ್ಲ. ರಾಜ್ಯ ಸೇರಿದಂತೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.

ರಾಜ್ಯದಲ್ಲೂ ತನ್ನ ರುದ್ರನರ್ತನ ತೋರುತ್ತಿರುವ ಸೋಂಕಿಗೆ ಈಗಾಗಲೇ ಇಬ್ಬರೂ ಬಲಿಯಾಗಿದ್ದು, 55 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಕಸರತ್ತನ್ನು ಮಾಡುತ್ತಿದೆ. ಇದೇ ಕಾರಣದಿಂದ ಇಂದು ರಾಜ್ಯ ಸಚಿವ ಸಂಪುಟ ಸಭೆಯನ್ನು ಸರ್ಕಾರ ಕರೆದಿದೆ.

ಇಡೀ ದೇಶವೇ ಲಾಕ್ ಡೌನ್ ಆಗಿದ್ದರೂ ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಸಚಿವರಿಗೆ ಆಯಾ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ. ಲಾಕ್ ಡೌನ್ ಇದ್ದರೂ ಜನ ಮಾತು ಕೇಳುತ್ತಿಲ್ಲ. ಉಳಿದ  19 ದಿನಗಳು ಮಹತ್ವದ ದಿನಗಳಾಗಿದ್ದು, ಈ ದಿನಗಳಲ್ಲಿ ಜನರು ಮನೆಯಿಂದ ಹೊರಗೆ ಬಾರದಂತೆ ಎಚ್ಚರ ವಹಿಸುವಂತೆ ನೋಡಿಕೊಳ್ಳಬೇಕೆಂದು ಸಿಎಂ  ನಿರ್ದೇಶನ ನೀಡಲಿದ್ದಾರೆ.

ಜನರು ಯಾರೂ ಮನೆಯಿಂದ ಹೊರಬಾರದು. ಅಗತ್ಯ ಸೇವೆಗಳಿಗೆ ಹೊರಗೆ ಬಂದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು. ಜೊತೆಗೆ ಶಂಕಿತರ ಮೇಲೆ ನಿಗಾ ವಹಿಸಬೇಕಾಗಿದೆ. ಜನಸಾಮಾನ್ಯರಿಗೆ ಅಗತ್ಯ ಸೇವೆಗಳನ್ನು ಸರ್ಕಾರ ನೀಡಲೇಬೇಕು.  ಎಲ್ಲೂ ವ್ಯತ್ಯಯ ಆಗಬಾರದು. ಹಾಗಾಗಿ ಸಚಿವರು ತಮಗೆ ವಹಿಸಿರುವ ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು, ಆರೋಗ್ಯಾಧಿಕಾರಿಗಳು, ಪೊಲೀಸ್ ಇಲಾಖೆ, ಆಹಾರ ಇಲಾಖೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು. ಕಂಟ್ರೋಲ್ ರೂಮ್ ಸಂಪರ್ಕದಲ್ಲೂ ಇರಬೇಕು. ಜನಜಾಗೃತಿ ಮೂಡಿಸಬೇಕು ಎಂಬ ಸೂಚನೆಗಳನ್ನು ಇಂದಿನ ಸಭೆಯಲ್ಲಿ ಸಿಎಂ ನೀಡಲಿದ್ದಾರೆ.

ಇದನ್ನು ಓದಿ: ಸಿಎಂ ಸಭೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಮಾಡಿದ ಆರೋಪದಿಂದ ಕಂಗಾಲಾದ ಕಮೀಷನರ್​​ ಭಾಸ್ಕರ್​​ ರಾವ್

ಕೇಂದ್ರದ ನೆರವನ್ನು ಆಯಾ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚಿಸಲಿದ್ದಾರೆ. ಕೊರೋನಾ ನಿಯಂತ್ರಣ, ಮುನ್ನೆಚ್ಚರಿಕಾ ಕ್ರಮಗಳು, ಜನಸಾಮಾನ್ಯರಿಗೆ ಅನುಕೂಲವಾಗಲು ಪ್ಯಾಕೇಜ್ ಘೋಷಣೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ  ಸರ್ಕಾರ ಈಗಾಗಲೇ 200 ಕೋಟಿ ಪ್ಯಾಕೇಜ್ ಘೋಷಿಸಿದೆ.
First published: March 27, 2020, 7:11 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading