news18-kannada Updated:June 12, 2020, 8:44 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿದ್ದು, ಇಂದು ಸಹ ನಗರಕ್ಕೆ ಉದ್ಯಾನ್ ಎಕ್ಸ್ಪ್ರೆಸ್ ರೈಲು ಬರುತ್ತಿದೆ. ಇದರಲ್ಲಿ ಸುಮಾರು 450ಕ್ಕೂ ಅಧಿಕ ಪ್ರಯಾಣಿಕರು ಬರುತ್ತಿದ್ದಾರೆ.
ಈಗಾಗಲೇ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲಿ ಬಹುತೇಕರಲ್ಲಿ ಸೊಂಕು ಪತ್ತೆಯಾಗಿದೆ. ಪ್ರತಿನಿತ್ಯವೂ ನೂರಾರು ಸಂಖ್ಯೆಯಲ್ಲಿ ಮಹಾರಾಷ್ಟ್ರದಿಂದ ಜನರು ಬರುತ್ತಿದ್ದು, ಇದೀಗ ಮತ್ತೆ 450ಕ್ಕೂ ಅಧಿಕ ಮಂದಿ ಬರುತ್ತಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ 8.50ಕ್ಕೆ ಉದ್ಯಾನ್ ಎಕ್ಸ್ಪ್ರೆಸ್ ರೈಲು ಆಗಮಿಸಲಿದೆ. ಬಂದ ಪ್ರತಿಯೊಬ್ಬ ಪ್ರಯಾಣಿಕರನ್ನು ಬಿಬಿಎಂಪಿ ಸಿಬ್ಬಂದಿ ಕ್ವಾರೆಂಟೈನ್ ಮಾಡಲದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದೆಯೇ ಮಹಾರಾಷ್ಟ್ರದಿಂದ ಬಂದೋರಲ್ಲಿ ಸೋಂಕು ಪತ್ತೆಯಾದ ಪ್ರಕರಣಗಳು ವರದಿಯಾಗಿವೆ.
ಇದನ್ನು ಓದಿ: ಭಾರತದಲ್ಲಿ ಕೈಮಿರೀದ ಪರಿಸ್ಥಿತಿ; ಅತಿ ಹೆಚ್ಚು ಕೊರೋನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತಕ್ಕೆ 4ನೇ ಸ್ಥಾನ
ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ಯಲು ಈಗಾಗಲೇ ಬಿಎಂಟಿಸಿ ಬಸ್ಗಳು ರೈಲ್ವೆ ನಿಲ್ದಾಣಕ್ಕೆ ಬಂದಿವೆ. ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಬಳಿಕ ಕ್ವಾರೆಂಟೈನ್ಗೆ ಕರೆದೊಯ್ಯಲಾಗುತ್ತದೆ.
ನಿನ್ನೆಯೂ ಕೆಲವರು ಕ್ವಾರೆಂಟೈನ್ ಗೆ ಹೋಗೋದಿಲ್ಲ ಎಂದು ಪಟ್ಟುಹಿಡಿದಿದ್ದರು. ಆದರೂ ಬಿಡದೆ ಪ್ರತಿಯೊಬ್ಬ ಪ್ರಯಾಣಿಕರನ್ನು ಕ್ವಾರೆಂಟೈನ್ಗೆ ಕಳುಹಿಸಲಾಗಿತ್ತು. ಅಷ್ಟೇ ಅಲ್ಲದೇ ದಿನೇ ದಿನೇ ಕ್ವಾರೆಂಟೈನ್ ಆಗಲ್ಲ ಎಂದು ಪ್ರಯಾಣಿಕರು ಅಧಿಕಾರಿಗಳ ಜೊತೆ ವಾಗ್ವಾದ ನಡೆಸುತ್ತಿರುವುದರಿಂದ ಇಂದು ಹೆಚ್ಚುವರಿಯಾಗಿ 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
First published:
June 12, 2020, 8:41 AM IST