21 ದಿನ ಲಾಕ್​ಡೌನ್ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ನಿಷೇಧ

ಇನ್ನೂ 21 ದಿನಗಳ ಕಾಲ ಭಾರತದ ರಾಷ್ಟ್ರೀಯ ಹೆದ್ದಾರಿ (ಎನ್​ಎಚ್​)ಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕೆಂದು ಸೂಚನೆ ನೀಡಲಾಗಿದೆ.

Sushma Chakre | news18-kannada
Updated:March 26, 2020, 9:39 AM IST
21 ದಿನ ಲಾಕ್​ಡೌನ್ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ನಿಷೇಧ
ಗುರುಗ್ರಾಮದ ನ್ಯಾಷನಲ್ ಹೈವೇ
  • Share this:
ನವದೆಹಲಿ (ಮಾ. 26): ಕೊರೋನಾ ವೈರಸ್​ ನಿಯಂತ್ರಿಸಲು 21 ದಿನಗಳ ಕಾಲ ಲಾಕ್​ಡೌನ್ ಘೋಷಿಸಿರುವ ಸರ್ಕಾರ ಇದೀಗ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಇಡೀ ದೇಶಾದ್ಯಂತ 21 ದಿನಗಳ ಕಾಲ ಲಾಕ್​ಡೌನ್ ಘೋಷಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನವಿಗೆ ದೇಶದ ಜನರು ಸ್ಪಂದಿಸಿದ್ದು, ಹೆಚ್ಚೂಕಡಿಮೆ 3 ವಾರಗಳ ಕಾಲ ಮನೆಯೊಳಗೆ ಇರಲು ನಿರ್ಧರಿಸಿದ್ದಾರೆ. ಈಗಾಗಲೇ ಭಾರತದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 10ಕ್ಕೇರಿದೆ. ಇಲ್ಲಿಯವರೆಗೂ 606 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಇದನ್ನೂ ಓದಿ: ಭಾರತದಲ್ಲಿ 600ರ ಗಡಿ ದಾಟಿದ ಸೋಂಕಿತರ ಸಂಖ್ಯೆ; ಇದುವರೆಗೂ 10 ಮಂದಿ ಸಾವು

ಈ ಹಿನ್ನೆಲೆಯಲ್ಲಿ ಇನ್ನೂ 21 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ (ಎನ್​ಎಚ್​)ಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕೆಂದು ಸೂಚನೆ ನೀಡಲಾಗಿದೆ. ಈ ಕುರಿತು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್​ಎಚ್​ಐ) ಚೇರ್ಮನ್​ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪತ್ರ ಕಳುಹಿಸಿದೆ. ಮಾ. 23ರಿಂದ 21 ದಿನಗಳ ಕಾಲ ಯಾವುದೇ ಟೋಲ್ ಸಂಗ್ರಹ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.
ಭಾರತದಲ್ಲಿ ಈಗಾಗಲೇ 606 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ. ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ.

ಇದನ್ನೂ ಓದಿ: ಭಾರತದಲ್ಲಿ ಮೇ ವೇಳೆಗೆ 13 ಲಕ್ಷ ಜನರಿಗೆ ಕೊರೋನಾ?; ಖಡಕ್ ಎಚ್ಚರಿಕೆ ಕೊಟ್ಟ ವಿಜ್ಞಾನಿಗಳು!
First published: March 26, 2020, 7:46 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading