ವಾಷಿಂಗ್ಟನ್ (ಮಾ.12): ಕೊರೋನಾ ವೈರಸ್ ಸುಮಾರು 69 ದೇಶಗಳಿಗೆ ಹಬ್ಬಿದೆ. ಸಾಮಾನ್ಯರು ಮಾತ್ರವಲ್ಲ ಗಣ್ಯರಿಗೂ ಕೊರೋನಾ ವೈರಸ್ ಅಂಟಿದ ಸಾಕಷ್ಟು ಉದಾಹರಣೆ ಇದೆ. ಇದಕ್ಕೆ ಈಗ ಹೊಸ ಸೇರ್ಪಡೆ ಖ್ಯಾತ ಹಾಲಿವುಡ್ ನಟ ಟಾಮ್ ಹ್ಯಾಂಕ್ಸ್ ಹಾಗೂ ಅವರ ಪತ್ನಿ ರೀಟಾ ವಿಲ್ಸನ್.
ಹೌದು, ಎರಡು ಬಾರಿ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಟಾಮ್ ಹ್ಯಾಂಕ್ಸ್ಗೆ
ಕೊರೋನಾ ವೈರಸ್ ಅಂಟಿದೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಟಾಮ್ ಇತ್ತೀಚೆಗೆ ಹೆಂಡತಿ ಜೊತೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಈ ವೇಳೆ ಇಬ್ಬರಿಗೂ ಸುಸ್ತಾದಂತೆ ಭಾಸವಾಗಿತ್ತು. ನೆಗಡಿ ಜ್ವರ ಕೂಡ ಕಾಣಿಸಿಕೊಂಡಿತ್ತು.
ಜ್ವರಕ್ಕೆ ಚಿಕಿತ್ಸೆ ಪಡೆಯಲು ಇಬ್ಬರೂ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ವೈದ್ಯರು ರಕ್ತ ಪರೀಕ್ಷೆ ನಡೆಸಿದಾಗ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ
ಆಸ್ಟ್ರೇಲಿಯಾ ಆಸ್ಪತ್ರೆಯಲ್ಲಿ ಇವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಕೊರೋನಾ ವೈರಸ್ ಭೀತಿ: ವಿದೇಶಿಗರ ಆಗಮನಕ್ಕೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ
ಟಾಮ್ ಮೂಲತಃ ಅಮೆರಿಕದವರು. 1980ರಿಂದ ಇವರು ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅಲ್ಲದೆ, ಅನೇಕ ಇಂಗ್ಲಿಷ್ ಧಾರಾವಾಹಿಗಳಲ್ಲೂ ಇವರು ನಟಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ