ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ಅದರಲ್ಲೂ ಮುಂಬೈ ಸೋಂಕು ಜಿಲ್ಲೆಯನ್ನು ಬಿಟ್ಟು ಬಿಡದೆ ಕಾಡುತ್ತಿದ್ದು, ದಿನೇ ದೀನೇ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕೂಡ ಜಿಲ್ಲೆಯಲ್ಲಿ 28 ಹೊಸ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು, ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ 237 ಕ್ಕೇರಿದಂತಾಗಿದೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದರೆ ಮತ್ತೊಂದು ಕಡೆ ಜಿಲ್ಲಾಡಳಿತವನ್ನು ಕಂಗಾಲಾಗಿಸಿದೆ.
ಜಿಲ್ಲೆಯನ್ನು ಮುಂಬೈ ಸೋಂಕು ಬಿಟ್ಟು ಬಿಡದೆ ಕಾಡುತ್ತಿದೆ. ಜಿಲ್ಲೆಯಲ್ಲಿ ಮುಂಬೈ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೆ ದೂಡಿದೆ. ಜಿಲ್ಲಾಡಳಿತ ಏರುತ್ತಿರುವ ಸೋಂಕಿತರ ಸಂಖ್ಯೆಯಿಂದ ಕಂಗಾಲಾಗಿದೆ. ಕಳೆದ 15 ದಿನಗಳ ಹಿಂದೆ ಕೇವಲ 25 -30 ಪ್ರಕರಣಗಳಿದ್ದ ಜಿಲ್ಲೆಯಲ್ಲಿ ಮುಂಬೈ ವಲಸಿಗರು ಹೆಚ್ಚಾಗ್ತಿದ್ದಂತೆ ಇದೀಗ ಸೋಂಕಿತರ ಸಂಖ್ಯೆ ದ್ವಿ ಶತಕದ ಗಡಿ ದಾಟಿ 237ಕ್ಕೆ ಬಂದು ನಿಂತಿದೆ. ಇಂದು ಮಧ್ಯಾಹ್ನ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಬರೋಬ್ಬರಿ 28 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಇನ್ನು ಈ ಸೋಂಕಿತರೆಲ್ಲರು ಮುಂಬೈ ವಲಸಿಗರಾಗಿದ್ದಾರೆ. ಜಿಲ್ಲೆಗೆ ಬಂದು ಕ್ವಾರೆಂಟೈನ್ ಗೆ ಒಳಗಾಗಿದ್ದ ಎಲ್ಲರಿಗೂ ಕೋವಿಡ್ ಟೆಸ್ಟ್ ವರದಿ ಮಾಡಿಸಲಾಗಿತ್ತು.ಇಂದು ಆರೋ ಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಎಲ್ಲರಿಗೂ ಪಾಸಿಟಿವ್ ಬಂದಿದೆ. ಸೋಂಕಿತ ರೆಲ್ಲರು ಕೆ.ಆರ್.ಪೇಟೆ ತಾಲೂಕಿನವರಾಗಿದ್ದು ಸದ್ಯ ಸೋಂಕಿತರಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಸೋಂಕಿತರಿಗೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿಲಿಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿ ತಿಳಿಸಿದ್ದು, ಮುಂಬೈನಿಂದ ಬರುತ್ತಿರುವ ಜನರಲ್ಲಿ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಜನರು ಸಾಮಾಜಿಕ ಅಂತರದ ಜೊತೆಗೆ ಮಾಸ್ಕ್ ಮತ್ತು ಸ್ಯಾನಿಟೇಸರ್ ಅನ್ನು ಕಡ್ಡಾಯವಾಗಿ ಬಳಸುವಂತೆ ಡಿಸಿ ಮನವಿ ಮಾಡಿದ್ದಾರೆ.
ಇದನ್ನು ಓದಿ: ರಾಜ್ಯದಲ್ಲಿ ಮತ್ತೆ ಹೊಸ ದಾಖಲೆ: 1939ಕ್ಕೆ ಏರಿದ ಕೊರೋನಾ ಪ್ರಕರಣ
ಒಟ್ಟಾರೆ ಸಕ್ಕರೆನಾಡು ಮಂಡ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಾ ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ತನ್ನ ಸಂಖ್ಯೆಯನ್ನು ಏರಿಸಿಕೊಳ್ಳುತ್ತಿದೆ. ಜಿಲ್ಲಾಡಳಿತ ಕೊರೋನಾ ನಿಯಂತ್ರಣಕ್ಕೆ ಎಷ್ಟೇ ಪ್ರಯತ್ನ ಮಾಡುತ್ತಿದ್ದರೂ ಮುಂಬೈ ವಲಸಿಗರ ಆಗಮನದಿಂದ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಗದಂತಾಗಿದ್ದು, ಜಿಲ್ಲಾಡಳಿತವನ್ನು ಕಂಗಾಲಾಗಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ