ರಾಜ್ಯದಲ್ಲಿ ಒಂದೇ ದಿನ 42 ಸಾವು; 1,839 ಪ್ರಕರಣ ದಾಖಲು

ರಾಜ್ಯಾದ್ಯಂತ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 21,549 ತಲುಪಿದೆ. ಸಾವಿನ ಸಂಖ್ಯೆ 335 ಮುಟ್ಟಿದೆ.

news18-kannada
Updated:July 4, 2020, 8:11 PM IST
ರಾಜ್ಯದಲ್ಲಿ ಒಂದೇ ದಿನ 42 ಸಾವು; 1,839 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು(ಜುಲೈ 04): ಇಂದು ರಾಜ್ಯದಲ್ಲಿ ಕೊರೋನಾ ಆರ್ಭಟ ತಾರಕಕ್ಕೇರಿದೆ. ಕಳೆದ 24 ಗಂಟೆ ಅವಧಿಯಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ. 1,839 ಪ್ರಕರಣಗಳು ದಾಖಲಾಗಿವೆ. ರಾಜ್ಯಾದ್ಯಂತ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 21,549 ತಲುಪಿದೆ. ಸಾವಿನ ಸಂಖ್ಯೆ 335 ಮುಟ್ಟಿದೆ.

ಬೆಂಗಳೂರು ಕೊರೋನಾ ಹಾಟ್​​ಸ್ಪಾಟ್ ಆಗಿ ಮುಂದುವರಿದಿದೆ. ನಗರದಲ್ಲಿ ಹೊಸ ದಾಖಲೆಯ ಪ್ರಮಾಣದಲ್ಲಿ ಪ್ರಕರಣಗಳು ಬೆಳಕಿಗೆ ಬಂದಿವೆ. ಒಂದೇ ದಿನ 1,172 ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಪ್ರಕರಣಗಳು ಬರೋಬ್ಬರಿ 8345 ಮುಟ್ಟಿದೆ.

ದಕ್ಷಿಣ ಕನ್ನಡ, ಬಳ್ಳಾರಿ, ಬೀದರ್, ಧಾರವಾಡ ಮೊದಲಾದ ಜಿಲ್ಲೆಗಳಲ್ಲೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದರೆ, ಬೆಂಗಳೂರಿನಲ್ಲಿ ಕೊರೋನಾ ಅಕ್ಷರಶಃ ರುದ್ರತಾಂಡವವಾಡುತ್ತಿದೆ. ಗಲ್ಲಿಗಲ್ಲಿಗಳಲ್ಲೂ ಈಗ ಕೊರೋನಾ ಹೊಕ್ಕಿದೆ.

ಇದನ್ನೂ ಓದಿ: ಮಹಾರಾಷ್ಟ್ರ ನಂಟಿಗೆ ಬೆಚ್ಚಿದ ಬೀದರ್; ಗಡಿ ಜಿಲ್ಲೆಯಲ್ಲಿ ಮಾರಕ ಕೊರೋನಾ ಸೋಂಕಿಗೆ ಒಂದೇ ದಿನ 6 ಮಂದಿ ಬಲಿ!ರಾಜ್ಯಾದ್ಯಂತ ಇವತ್ತು 439 ರೋಗಿಗಳು ಗುಣಮುಖಗೊಂಡಿದ್ದಾರೆ. ಈವರೆಗೆ 9244 ಮಂದಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆದಂತಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಆಕ್ಟಿವ್ ಕೊರೊನಾ ಕೇಸ್​ಗಳ ಸಂಖ್ಯೆ 11,966 ಇದೆ.
Published by: Vijayasarthy SN
First published: July 4, 2020, 8:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading