HOME » NEWS » Coronavirus-latest-news » TOTAL NUMBER OF COVID19 POSITIVE CASES REACHED 694 IN INDIA 16 DEATH GNR

ಕೋವಿಡ್-19: ದೇಶದಲ್ಲಿ ಸೋಂಕಿತರ ಸಂಖ್ಯೆ 694, 16 ಮಂದಿ ಸಾವು

ಎರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶ 21 ದಿನ ಬಂದ್​​ ಮಾಡುವುದಾಗಿ ಆದೇಶ ನೀಡಿದರು. ಜತೆಗೆ ಈ ಅವಧಿಯಲ್ಲಿ ಯಾರೂ ಕೂಡ ಹೊರಗೆಬಾರದಂತೆ ಮನವಿ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಹೀಗೆಳಿದರು ರಾಜ್ಯದಲ್ಲಿ ಜನ ಗುಂಪು ಸೇರುತ್ತಲೇ ಇದ್ದಾರೆ. ಸರ್ಕಾರ ಆದೇಶವನ್ನು ಉಲ್ಲಂಘಿಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

news18-kannada
Updated:March 26, 2020, 9:53 PM IST
ಕೋವಿಡ್-19: ದೇಶದಲ್ಲಿ ಸೋಂಕಿತರ ಸಂಖ್ಯೆ 694, 16 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
  • Share this:
ನವದೆಹಲಿ(ಮಾ.26): ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್​​ ಸೋಂಕು ಪ್ರಕರಣಗಳ ಸಂಖ್ಯೆ ಏರಿಯಾಗುತ್ತಲೇ ಇದೆ. ಇಲ್ಲಿಯವರೆಗೆ ಇಡೀ ದೇಶದಲ್ಲೇ ಒಟ್ಟು 694 ಪ್ರಕರಣಗಳು ವರದಿಯಾಗಿದ್ದು ಸಾವಿನ ಸಂಖ್ಯೆ 13ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಕಳೆದ ಕೇವಲ 24 ಗಂಟೆಯಲ್ಲಿ 43 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಹರಿಯಾಣದಲ್ಲಿ- 18, ಫರೀದಾಬಾದ್‌ನಲ್ಲಿ -2, ಗುರುಗ್ರಾಮ -10 , ಪಲ್ವಾಲ್-1, ಪಾಣಿಪತ್-3, ಪಂಚಕುಲಾ-1 , ಸೋನೆಪಥ್- 1, ತೆಲಂಗಾಣ ಮೂರು ಹೀಗೆ ವಿವಿಧ ರಾಜ್ಯಗಳಲ್ಲಿ ಮತ್ತಲವು ಪ್ರಕರಣಗಳು ವರದಿಯಾಗಿದೆ.


ಕೊರೋನಾ ಸೋಂಕಿಗೆ ವಿಶ್ವದಾದ್ಯಂತ ಈಗಾಗಲೇ 21,000 ಜನ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 4 ಲಕ್ಷವನ್ನೂ ಮೀರಿದ್ದು ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದ್ದು, ಇದರ ನಡುವೆಯೂ ಸೋಂಕಿತರ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. ಈವರೆಗೆ 16 ಜನ ಮೃತಪಟ್ಟಿದ್ದಾರೆ. ಸೋಂಕಿತರ ಮತ್ತು ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

ಈ ಮಧ್ಯೆಯೇ ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ವೈರಸ್‌ ಅನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಹಲವು ಕ್ರಮಗಳನ್ನು ಕೈಗೊಂಡಿದೆ. ಇಡೀ ದೇಶವನ್ನೇ ಲಾಕ್‌ಡೌನ್‌ ಮಾಡಲಾಗಿರುವ ಕ್ರಮದಿಂದಾಗಿ ನಷ್ಟ ಅನುಭವಿಸಲಿರುವ ಮಧ್ಯಮ ಮತ್ತು ಕೆಲ ವರ್ಗದ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಲಾಕ್‌ಡೌನ್ ಪರಿಹಾರಕ್ಕಾಗಿ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ; ಯಾವ ವಲಯಕ್ಕೆ ಎಷ್ಟು ಹಣ? ಇಲ್ಲಿದೆ ಮಾಹಿತಿ

ಎರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶ 21 ದಿನ ಬಂದ್​​ ಮಾಡುವುದಾಗಿ ಆದೇಶ ನೀಡಿದರು. ಜತೆಗೆ ಈ ಅವಧಿಯಲ್ಲಿ ಯಾರೂ ಕೂಡ ಹೊರಗೆಬಾರದಂತೆ ಮನವಿ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಹೀಗೆಳಿದರು ರಾಜ್ಯದಲ್ಲಿ ಜನ ಗುಂಪು ಸೇರುತ್ತಲೇ ಇದ್ದಾರೆ. ಸರ್ಕಾರ ಆದೇಶವನ್ನು ಉಲ್ಲಂಘಿಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು, ರಾಜ್ಯದಲ್ಲಿ ಇಲ್ಲಿವರೆಗೂ 55 ಪ್ರಕರಣಗಳು ಪತ್ತೆಯಾಗಿವೆ. ಇಂದು ಮಾತ್ರ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾದರ ಬಗ್ಗೆ ವರದಿಯಾಗಿವೆ. ಜತೆಗೆ ಈವರೆಗೂ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
First published: March 26, 2020, 7:37 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories