news18-kannada Updated:May 22, 2020, 3:53 PM IST
ಶಿವಮೊಗ್ಗ ರೈಲ್ವೆ ನಿಲ್ದಾಣ
ಶಿವಮೊಗ್ಗ(ಮೇ.22): ಬೆಂಗಳೂರು - ಶಿವಮೊಗ್ಗ ನಡುವಣ ಜನಶತಾಬ್ದಿ ರೈಲು ಸಂಚಾರ ಬರುವ ಜೂನ್ 1 ರಿಂದ ಆರಂಭವಾಗಲಿದೆ. ಇದಕ್ಕಾಗಿ ರೈಲ್ವೆ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಧ್ಯ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಕೇವಲ ಒಂದು ರೈಲು ಮಾತ್ರ ಸೇವೆ ಆರಂಭಿಸಲಿದೆ.
ಜೂನ್ 1 ರಂದು ಸಂಜೆ 5.30 ಕ್ಕೆ ಬೆಂಗಳೂರಿನಿಂದ ಜನಶತಾಬ್ಧಿ ರೈಲು ಹೊರಡಲಿದ್ದು, ರಾತ್ರಿ 9-30 ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಆಗಮಿಸಿಲಿದೆ. ಜೂನ್ 2 ರಂದು ಬೆಳಿಗ್ಗೆ 5.30ಕ್ಕೆ ಶಿವಮೊಗ್ಗದಿಂದ ರೈಲು ಹೊರಡಲಿದೆ. ಕೇವಲ ಆನ್ಲೈನ್ಲ್ಲಿ ಮಾತ್ರ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶವಿದೆ. ಪ್ರತಿ ಬೋಗಿಯಲ್ಲಿ ಕೇವಲ 54 ಮಂದಿಗೆ ಮಾತ್ರ ಪ್ರಯಾಣಕ್ಕೆ ಅವಕಾಶವಿದ್ದು, ಒಟ್ಟು 648 ಸೀಟುಗಳನ್ನು ಮಾತ್ರ ಕಾಯ್ದಿರಿಸಲಾಗುತ್ತಿದೆ.
ಹವಾನಿಯಂತ್ರಿತ ಬೋಗಿಯಲ್ಲಿ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ. ರೈಲಿನ ನಿಲುಗಡೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಶಿವಮೊಗ್ಗ-ಭದ್ರಾವತಿ-ಕಡೂರು-ತುಮಕೂರು-ಬೆಂಗಳೂರು ಮಾರ್ಗದಲ್ಲಿ ಸಂಚರಿಸಲಿದೆ. ರೈಲು ಹತ್ತುವುದಕ್ಕಿಂತ ಮುಂಚೆ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುವುದು. ರೋಗ ಲಕ್ಷಣವಿರುವವರಿಗೆ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.
ಇದನ್ನೂ ಓದಿ :
ಲಾಕ್ ಡೌನ್ ನಿಂದ ಹೊನ್ನಾವರ ವೀಳ್ಯೆದೆಲೆಗೆ ಬೇಡಿಕೆ ಕುಸಿತ ; ಬಾಡಿ ಹೋಗುತ್ತಿರುವ ಬೆಳೆಗಾರರ ಬದುಕು
ಜಿಲ್ಲಾಡಳಿತದ ವತಿಯಿಂದ ಸಹ ಸ್ಕ್ರೀನಿಂಗ್ಗೆ ವ್ಯವಸ್ಥೆ ಮಾಡಲಾಗುವುದು. ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರು 90 ನಿಮಿಷಯಗಳ ಕಾಲ ಮುಂಚೆ ಬರಬೇಕಿದೆ. ಈಗಾಗಲೇ ಬಸ್ ಗಳು ಸಹ ಬೆಂಗಳೂರಿಗೆ ಸಂಚಾರ ಮಾಡುತ್ತಿವೆ. ಅದರ ಜೊತೆಗೆ ರೈಲು ಸಂಚಾರ ಆರಂಭವಾಗುವುದರಿಂದ ಬೆಂಗಳೂರಿಗೆ ತುರ್ತು ಕೆಲಗಳಿಗೆ ಹೋಗುವವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ ರೈಲು ಪ್ರಯಾಣ ದರ ಸಹ ಕಡಿಮೆ ಇರುವುದರಿಂದ ಬಡ ಕುಟುಂಬಗಳಿಗೆ ಸಹಕಾರಿಯಾಗಲಿದೆ. ಪ್ರಯಾಣಿಕರು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ, ಜೊತೆಗೆ ಜಾಗೃತಿ ವಹಿಸಿ ಪ್ರಯಾಣ ಮಾಡಬೇಕು.
First published:
May 22, 2020, 3:47 PM IST