ಚಿಕ್ಕಬಳ್ಳಾಪುರ (ಜುಲೈ 01): ಕೊರೋನಾ ಸೋಂಕಿತರು ಮೃತಪಟ್ಟರೆ ನಗರ ಭಾಗಗಳಲ್ಲಿ ಅಂತ್ಯ ಸಂಸ್ಕಾರ ಮಾಡುವುದು ಬೇಡ. ಇದರಿಂದ ಸೋಂಕು ತಮಗೂ ಹರಡಬಹುದು ಎಂಬ ಆತಂಕ ಜನರಲ್ಲಿ ಮೂಡುತ್ತಿದೆ. ಹೀಗಾಗಿ ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆಂದು ಊರ ಹೊರ ಭಾಗದಲ್ಲಿ ಎರಡು ಎಕ್ಕರೆ ಜಮೀನು ಕಾಯ್ದಿರಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ಧಾರೆ.
ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತ್ ಸಂಭಾಂಗಣದಲ್ಲಿ ಅಧಿಕಾರಿಗಳ ಜೊತೆಗೆ ಹಮ್ಮಿಕೊಂಡಿದ್ದ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಣ ಕ್ರಮದ ಬಗೆಗಿನ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
"ಜಿಲ್ಲೆಯಲ್ಲಿ ಎರಡು ಮೂರು ದಿನಗಳಲ್ಲಿ ಕೊರೋನಾ ಪರೀಕ್ಷಾ ಲ್ಯಾಬ್ ತೆರೆಯಲಾಗುತ್ತದೆ. ಸುಮಾರು 10 ಸಾವಿರ ಬೆಡ್ಗಳ ವ್ಯವಸ್ಥೆ ಮಾಡುವುದರ ಮೂಲಕ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್-19 ಪರೀಕ್ಷೆಗಳನ್ನು ಹೆಚ್ಚು ಮಾಡಲು ಹಾಗೂ ವರದಿಗಳು ಬೇಗ ಬರಲು ಬೆಂಗಳೂರಿನಲ್ಲಿ ಲ್ಯಾಬ್ಗಳು ಸೇರಿದಂತೆ ಪ್ರತಿ ಜಿಲ್ಲೆಯಲ್ಲಿ ಒಂದು ಲ್ಯಾಬ್ ವ್ಯವಸ್ಥೆ ಮಾಡಲಾಗಿದೆ" ಎಂದು ಮಾಹಿತಿ ನೀಡಿದರು.
"ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ವೆಂಟಿಲೇಟರ್ಗಳು ಸದ್ಯದಲ್ಲೇ ಬರಲಿದ್ದು ಅದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೂ ವೆಂಟಿಲೇಟರ್ಗಳ ಪೂರೈಕೆ ಮಾಡಲು ಕ್ರಮ ವಹಿಸಲಾಗುತ್ತದೆ. ಕೊರೋನಾ ನಿಯಂತ್ರಣ ಮಾಡಲು ರಾಜ್ಯ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು.
ಇದನ್ನೂ ಓದಿ : ಸೇನಾ ಜನರಲ್ ಎಂಎಂ ನರವಾನೆ ಜೊತೆ ಶುಕ್ರವಾರ ಲಡಾಖ್ಗೆ ಭೇಟಿ ನೀಡಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಅಲ್ಲದೆ, ಕೊರೋನಾ ಸೊಂಕಿತರು ಮೃತಪಟ್ಟರೆ ನಗರ ಭಾಗಗಳಲ್ಲಿ ಅಂತ್ಯ ಸಂಸ್ಕಾರ ಮಾಡುವುದು ಬೇಡ. ಇದರಿಂದ ಜನರಿಗೂ ಆತಂಕ ಉಂಟಾಗುತ್ತಿದೆ. ಹೀಗಾಗಿ ಊರ ಹೊರ ಭಾಗದಲ್ಲಿ ಅದಕ್ಕಾಗಿ ಎರಡು ಎಕ್ಕರೆ ಜಮೀನು ಕಾಯ್ದಿರಿಸಲು ಸೂಚನೆ ನೀಡಲಾಗಿದೆ" ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ